ಬ್ರೇಕಿಂಗ್ ನ್ಯೂಸ್
16-03-26 12:34 pm HK News Staffer ದೇಶ - ವಿದೇಶ
ಕಟಕ್, ಮಾರ್ಚ್ 16: ಒಡಿಶಾ ರಾಜ್ಯದ ಕಟಕ್ ನಗರದಲ್ಲಿರುವ ಎಸ್ಸಿಬಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 10 ರೋಗಿಗಳು ಮೃತಪಟ್ಟಿದ್ದು, 11ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿ ಗಾಯಗೊಂಡಿದ್ದಾರೆ.
ಮಧ್ಯರಾತ್ರಿ 2.30ರಿಂದ 3 ಗಂಟೆಯ ಅವಧಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಆಸ್ಪತ್ರೆಯ ಟ್ರಾಮಾ ಕೇರ್ ವಿಭಾಗದ ಐಸಿಯುನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಘಟನೆಯ ವೇಳೆ ಐಸಿಯುನಲ್ಲಿ ಗಂಭೀರವಾಗಿ ಗಾಯಗೊಂಡ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಬೆಂಕಿ ಅವಘಡದ ಪರಿಣಾಮ ಐಸಿಯುನಲ್ಲಿದ್ದ 10 ರೋಗಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೋಗಿಗಳನ್ನು ರಕ್ಷಿಸಲು ಯತ್ನಿಸಿದ ಆಸ್ಪತ್ರೆ ಸಿಬ್ಬಂದಿಯಲ್ಲಿ 11 ಮಂದಿಗೆ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಅಗ್ನಿ ಅವಘಡದ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು. ಬಳಿಕ ಐಸಿಯುನಲ್ಲಿದ್ದ ಇತರ ರೋಗಿಗಳನ್ನು ತುರ್ತಾಗಿ ಆಸ್ಪತ್ರೆಯ ಬೇರೆ ವಾರ್ಡ್ಗಳಿಗೆ ಸ್ಥಳಾಂತರಿಸಲಾಗಿದೆ. ಒಟ್ಟು 23 ರೋಗಿಗಳನ್ನು ಬೇರೆ ವಾರ್ಡ್ಗಳಿಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದುರ್ಘಟನೆ ಹಿನ್ನೆಲೆಯಲ್ಲಿ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಹಾಗೂ ಆರೋಗ್ಯ ಸಚಿವ ಮುಕೇಶ್ ಮಹಾಲಿಂಗ್ ಆಸ್ಪತ್ರೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಮೃತಪಟ್ಟ ರೋಗಿಗಳ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಜೊತೆಗೆ ಗಾಯಗೊಂಡಿರುವ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರಕುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am