ಬ್ರೇಕಿಂಗ್ ನ್ಯೂಸ್
23-03-26 09:46 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಮಾರ್ಚ್ 23: ಕಳೆದ 24 ದಿನಗಳಿಂದ ನೀನಾ ನಾನಾ ಎಂದು ಯುದ್ಧ ನಡೆಸುತ್ತಿದ್ದ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಸದ್ಯಕ್ಕೆ ಶಮನಗೊಳ್ಳುವ ಮುನ್ಸೂಚನೆ ಸಿಕ್ಕಿದೆ. ದಿಢೀರ್ ಎನ್ನುವಂತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಐದು ದಿನಗಳ ಕದನ ವಿರಾಮ ಘೋಷಿಸಿದ್ದಾರೆ. ಇರಾನ್ ಇಂಧನ ಮತ್ತು ವಿದ್ಯುತ್ ಸ್ಥಾವರಗಳ ಮೇಲೆ ನಡೆಸಲು ಯೋಜಿಸಿದ್ದ ಮಿಲಿಟರಿ ದಾಳಿಯನ್ನು ಐದು ದಿನಗಳ ಕಾಲ ಮುಂದೂಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಟ್ರಂಪ್, “ಕಳೆದ ಎರಡು ದಿನಗಳಿಂದ ವಾಷಿಂಗ್ಟನ್ ಮತ್ತು ಇರಾನ್ ನಡುವೆ ಅತ್ಯಂತ ರಚನಾತ್ಮಕ ಮಾತುಕತೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಇರಾನ್‌ನ ಇಂಧನ ಮೂಲಸೌಕರ್ಯಗಳ ಮೇಲೆ ನಡೆಸಬೇಕಿದ್ದ ಎಲ್ಲಾ ದಾಳಿಗಳನ್ನು ಐದು ದಿನಗಳ ಕಾಲ ಸ್ಥಗಿತಗೊಳಿಸುವಂತೆ ಮಿಲಿಟರಿ ಇಲಾಖೆಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ನಾಶ ಪಡಿಸುವುದಾಗಿ ಟ್ರಂಪ್ ಈ ಹಿಂದೆ 48 ಗಂಟೆಗಳ ಗಡುವು ನೀಡಿದ್ದರು. ಈ ಗಡುವು ಭಾರತ ಕಾಲಮಾನ ಮಾರ್ಚ್ 24ರ ಬೆಳಗ್ಗೆ 5 ಗಂಟೆಗೆ ಮುಗಿಯಲಿದೆ. ಇದರ ನಡುವಲ್ಲೇ, ಟ್ರಂಪ್ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಅಮೆರಿಕದ ಬೆದರಿಕೆಗೆ ಪ್ರತಿಯಾಗಿ ಇರಾನ್ ಕೂಡ ಅಮೆರಿಕದ ನೆಲೆಗಳ ಮೇಲೆ ದಾಳಿ ನಡೆಸುವ ಎಚ್ಚರಿಕೆ ನೀಡಿತ್ತು. ಆದರೆ, ಈಗ ಎರಡೂ ದೇಶಗಳು ಮಾತುಕತೆಯ ಹಾದಿ ಹಿಡಿದಿರುವುದು ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಸಮಾಧಾನ ತಂದಿದೆ.
ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಘೋಷಣೆಗೆ ಇರಾನ್ ಅಧಿಕೃತವಾಗಿ ಪ್ರತಿಕ್ರಿಯೆ ನೀಡದಿದ್ದರೂ, ಇತರೇ ಮೂಲಗಳು ಟ್ರಂಪ್ ಮಂಡಿಯೂರಿದ್ದಾರೆ ಎಂದು ಕಟಕಿಯಾಡಿವೆ. ಆಫ್ಘಾನಿಸ್ತಾನದಲ್ಲಿರುವ ಇರಾನ್ ರಾಯಭಾರ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಖಾರವಾಗಿ ಪ್ರತಿಕ್ರಿಯೆ ನೀಡಿದೆ. ಇರಾನ್‌ನ ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದೆ. ಒಂದು ವೇಳೆ ನಮ್ಮ ಮೂಲಸೌಕರ್ಯದ ಮೇಲೆ ದಾಳಿ ಮಾಡಿದರೆ ಅದೇ ರೀತಿಯ ಪ್ರತಿ ದಾಳಿ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದೆವು. ಈ ಎಚ್ಚರಿಕೆ ನೀಡಿದ ಬೆನ್ನಲ್ಲೇ ಟ್ರಂಪ್ ದಾಳಿಯಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದೆ.
ಇದಕ್ಕೂ ಮುನ್ನ ಇರಾನ್ ವಿದೇಶಾಂಗ ಸಚಿವ ಅರಾಘ್ಚಿ ಪ್ರತಿಕ್ರಿಯಿಸಿ, ನಾವು ಯಾವುದೇ ಶಾಂತಿ ಮಾತುಕತೆಯನ್ನು ನಡೆಸಿಲ್ಲ. ಯುದ್ಧವನ್ನು ನಿಲ್ಲಿಸಬೇಕಾದರೆ ನೀವು ಅಮೆರಿಕದ ಜೊತೆ ಮಾತನಾಡಿ. ನಾವೆಂದೂ ದಾಳಿ ಮಾಡಿಲ್ಲ. ಅವರು ದಾಳಿ ಮಾಡಿದ್ದಕ್ಕೆ ಉತ್ತರ ನೀಡಿದ್ದೇವಷ್ಟೆ ಎಂದು ಗಲ್ಫ್ ದೇಶಗಳಿಗೆ ಸೂಚಿಸಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am