ಬ್ರೇಕಿಂಗ್ ನ್ಯೂಸ್
27-03-26 12:11 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 27: ಗಲ್ಫ್ ದೇಶಗಳ ಸಂಘರ್ಷದ ಪರಿಣಾಮಗಳನ್ನು ಊಹಿಸುವುದು ಕಷ್ಟ. ಕೋವಿಡ್ನಂತೆ ಜಾಗತಿಕ ಪರಿಣಾಮ ಬೀರಬಲ್ಲದು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.
ಗಲ್ಫ್ ಯುದ್ಧದ ಬಗ್ಗೆ ಎರಡು ದಿನಗಳ ಹಿಂದಷ್ಟೇ ಭಾರತದ ಪ್ರಧಾನಿ ನರೇಂದ್ರ ಮೋದಿ, ಕೋವಿಡ್ ನಂತಹ ಸ್ಥಿತಿ ಎದುರಿಸಲು ಸಿದ್ಧರಾಗಿ ಎಂದು ದೇಶ ವಾಸಿಗಳಿಗೆ ಕರೆ ನೀಡಿದ್ದರು. ಇದರ ಬೆನ್ನಲ್ಲೇ ಪುಟಿನ್ ಕೂಡ ಅದೇ ರೀತಿಯ ಮಾತುಗಳನ್ನಾಡಿದ್ದಾರೆ.
ಗಲ್ಫ್ ಸಂಘರ್ಷವು ಈಗಾಗಲೇ ಇಂಟರ್ನ್ಯಾಷನಲ್ ಲಾಜಿಸ್ಟಿಕ್ಸ್, ಉತ್ಪಾದನೆ ಮತ್ತು ಪೂರೈಕೆ ಸರಪಳಿಗಳಿಗೆ ಅಡ್ಡಿ ಪಡಿಸುತ್ತಿದೆ. ಹೈಡ್ರೋ ಕಾರ್ಬನ್, ಲೋಹಗಳು ಮತ್ತು ರಸಗೊಬ್ಬರ ಕಂಪನಿಗಳ ಮೇಲೆ ಭಾರೀ ಒತ್ತಡವನ್ನು ಹೇರುತ್ತಿದೆ. ತೈಲದ ಪೂರೈಕೆಯಲ್ಲಿ ವ್ಯತ್ಯಯವಾಗ ಜಾಗತಿಕವಾಗಿ ಅಸಮತೋಲನ ಉಂಟಾಗಿದೆ ಎಂದು ಪುಟಿನ್ ಹೇಳಿದ್ದಾರೆ.
ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲಿ ದಾಳಿಗಳು ಮಧ್ಯಪ್ರಾಚ್ಯವನ್ನು ವ್ಯಾಪಕ ಬಿಕ್ಕಟ್ಟಿನತ್ತ ತಳ್ಳಿದೆ. ಮಧ್ಯ ಪ್ರಾಚ್ಯದಲ್ಲಿ ಈಗ ಎದ್ದಿರುವ ಬಿಕ್ಕಟ್ಟು ಬೇಗ ಬಗೆಹರಿಯುವುದಿಲ್ಲ, ಯಾವಾಗ ಅಂತ್ಯವಾಗುತ್ತೆ ಅಂತಾ ಯುದ್ಧ ಆರಂಭಿಸಿದವರಿಗೆ ಗೊತ್ತಿಲ್ಲ. ಯಾವಾಗ ಏನಾಗುತ್ತೋ ಅಂತಾ ಹೇಳಲು ಯಾರಿಗೂ ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಭೀಕರ ಯುದ್ಧ ನಡೆಯುತ್ತಿದೆ. ಮೇಲ್ನೋಟಕ್ಕೆ ಇದು ಕೇವಲ ಮೂರು ದೇಶಗಳ ನಡುವಿನ ಕಾದಾಟದಂತೆ ಕಾಣಿಸಬಹುದು, ಆದರೆ ಸಾಕಷ್ಟು ರಾಷ್ಟ್ರಗಳ ಮೇಲೆ ಇದರ ದುಷ್ಪರಿಣಾಮ ಬೀರುತ್ತಿದೆ. ಇರಾನ್ ಮತ್ತು ಇಸ್ರೇಲ್-ಅಮೆರಿಕ ನಡುವೆ ಫೆಬ್ರವರಿ 28ರಂದು ಯುದ್ಧ ಆರಂಭವಾದಾಗಿನಿಂದ, ರಷ್ಯಾ ಇರಾನ್ ಪರ ರಹಸ್ಯವಾಗಿ ಕೆಲಸ ಮಾಡುತ್ತಿದೆ. ಗುಪ್ತಚರ ಮಾಹಿತಿ ನೀಡುತ್ತ ಅಮೆರಿಕದ ಸೇನಾ ನೆಲೆಗಳಿಗೆ ಏಟು ಕೊಡುತ್ತಿದೆ.
ಈ ಮೂಲಕ ಪುಟಿನ್ ಅವರು, ಉಕ್ರೇನ್ ಯುದ್ಧದಲ್ಲಿ ತನಗೆ ಆತಂಕ ತಂದೊಡ್ಡಿದ್ದ ಅಮೆರಿಕದ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿರುವಂತಿದೆ. ಇದೀಗ ಈ ಸಂಘರ್ಷವು ಕೋವಿಡ್ ರೀತಿಯ ಆತಂಕ ತಂದೊಡ್ಡಬಹುದು ಎಂದಿದ್ದಾರೆ. ಆಮೂಲಕ ಯುದ್ಧ ಬೇಗನೆ ಕೊನೆಯಾಗಲ್ಲ ಎಂಬ ಸುಳಿವು ನೀಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am