ಬ್ರೇಕಿಂಗ್ ನ್ಯೂಸ್
28-03-26 02:58 pm HK News Staffer ದೇಶ - ವಿದೇಶ
ಕಾಠ್ಮಂಡು, ಮಾರ್ಚ್ 28: ನೇಪಾಳದಲ್ಲಿ ಹೊಸತಾಗಿ ಬಾಲೇಂದ್ರ ಶಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕಳೆದ ವರ್ಷ ದೇಶಾದ್ಯಂತ ನಡೆದಿದ್ದ ಝೆನ್ ಜಿ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿದ್ದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಬಂಧಿಸಲಾಗಿದೆ, ಬಾಲೇಂದ್ರ ಶಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ದಿನದಲ್ಲಿ ಓಲಿಯನ್ನು ನೇಪಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವರದಿಗಳ ಪ್ರಕಾರ, ಗೌರಿಬಹಾದೂರ್ ಕರ್ಕಿ ನೇತೃತ್ವದ ತನಿಖಾ ಆಯೋಗವು ಭದ್ರಾ ಪ್ರದೇಶದಲ್ಲಿ ನಡೆದ ಝೆನ್ ಜಿ ಪ್ರತಿಭಟನೆ ಹತ್ತಿಕ್ಕಿದ್ದಕ್ಕಾಗಿ ಓಲಿ ಮತ್ತು ಲೇಖಕ್ ಸೇರಿದಂತೆ ಇತರರನ್ನ ತಪ್ಪಿತಸ್ಥರೆಂದು ಘೋಷಿಸಿದೆ. ಅಲ್ಲದೇ ತನಿಖಾ ಆಯೋಗವು ಪ್ರತಿಭಟನೆ ಸಂದರ್ಭದಲ್ಲಿನ ನೇಪಾಳ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಚಂದ್ರಕುಬೇರ್ ಖಪುಂಗ್ ಸೇರಿದಂತೆ ಇತರ ಉನ್ನತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲು ಶಿಫಾರಸು ಮಾಡಿದೆ.
ಇಂದು ಬೆಳಗ್ಗೆ ಮಾಜಿ ಪ್ರಧಾನಿ ಹಾಗೂ ಮಾಜಿ ಗೃಹಸಚಿವರನ್ನ ಬಂಧಿಸಲಾಗಿದ್ದು, ಕಾನೂನು ಪ್ರಕಾರವೇ ಕ್ರಮ ಮುಂದುವರಿಯುತ್ತದೆ ಎಂದು ಕಠ್ಮಂಡು ಕಣಿವೆ ಪೊಲೀಸ್ ಓಂ ಅಧಿಕಾರಿ ತಿಳಿಸಿದ್ದಾರೆ. ಬಂಧನದ ಬಳಿಕ ಪ್ರತಿಕ್ರಿಯೆ ನೀಡಿರುವ ಹಾಲಿ ಗೃಹಸಚಿವ ಸುಡಾನ್ ಗುರುಂಗ್, ಭರವಸೆ ಅಂದ್ರೆ ಭರವಸೆ, ಕಾನೂನಿಗಿಂತ ಯಾರೂ ಮೇಲಲ್ಲ ಎಂದು ತಿಳಿಸಿದ್ದಾರೆ. ನಾವು ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಮಾಜಿ ಗೃಹಸಚಿವ ರಮೇಶ್ ಲೇಖಕ್ ಅವರನ್ನ ಬಂಧಿಸಿದ್ದೇವೆ. ಇದು ಯಾರ ವಿರುದ್ಧವೂ ಸೇಡು ತೀರಿಸಿಕೊಳ್ಳುವ ಕ್ರಮವಲ್ಲ. ನ್ಯಾಯದ ಆರಂಭ ಮಾತ್ರ. ಈಗ ದೇಶವು ಹೊಸ ದಿಕ್ಕಿನತ್ತ ಸಾಗುತ್ತಿದೆ ಎಂದು ನಾನು ನಂಬುತ್ತೇನೆ ಎಂಬುದಾಗಿ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಕಳೆದ ಸೆಪ್ಟೆಂಬರ್‌ನಲ್ಲಿ ನೇಪಾಳದಲ್ಲಿ ಯುವಕರ ಕ್ರಾಂತಿ ಭುಗಿಲೆದ್ದಿತ್ತು. ಈ ವೇಳೆ, ಪ್ರತಿಭಟನೆಗಳನ್ನು ನಿಗ್ರಹಿಸುವ ವೇಳೆ ನಡೆದ ಕ್ರಿಮಿನಲ್ ನಿರ್ಲಕ್ಷ್ಯ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am