ಬ್ರೇಕಿಂಗ್ ನ್ಯೂಸ್
02-04-26 10:24 pm HK News Staffer ದೇಶ - ವಿದೇಶ
ಟೆಹ್ರಾನ್, ಏಪ್ರಿಲ್ 2: ಮಧ್ಯ ಪ್ರಾಚ್ಯದಲ್ಲಿ ಉದ್ವಿಗ್ನತೆ ನಡುವೆಯೂ ಹಾರ್ಮುಜ್ ಜಲಸಂಧಿ ಮೂಲಕ ಸಂಚರಿಸುವ ಭಾರತೀಯ ಹಡಗುಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಇರಾನ್ ಮತ್ತೊಮ್ಮೆ ಭರವಸೆ ನೀಡಿದೆ. ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿ ಸ್ಪಷ್ಟನೆ ನೀಡಿದ್ದು, ಪ್ರಸ್ತುತ ಸಂಘರ್ಷದ ಪರಿಸ್ಥಿತಿಯಲ್ಲಿಯೂ ಭಾರತೀಯರು ತೈಲದ ಕಾರಣಕ್ಕೆ ಭಯಕ್ಕೀಡಾಗುವ ಅಗತ್ಯವಿಲ್ಲ ಎಂದು ತಿಳಿಸಿದೆ.
ಹಾರ್ಮುಜ್ ಜಲಸಂಧಿಯು ವಿಶ್ವದ ಅತ್ಯಂತ ಪ್ರಮುಖ ಮತ್ತು ಕಿರಿದಾದ ಜಲಮಾರ್ಗಗಳಲ್ಲಿ ಒಂದಾಗಿದ್ದು, ಪರ್ಷಿಯನ್ ಕೊಲ್ಲಿಯನ್ನು ಓಮನ್ ಕೊಲ್ಲಿಯೊಂದಿಗೆ ಸಂಪರ್ಕಿಸುವುದರ ಜೊತೆಗೆ ಅರೇಬಿಯನ್ ಸಮುದ್ರಕ್ಕೆ ದಾರಿ ಮಾಡಿಕೊಡುತ್ತದೆ. ಈ ಮಾರ್ಗವು ಜಾಗತಿಕ ಮಟ್ಟದಲ್ಲಿ ತೈಲ ಮತ್ತು ಅನಿಲ ಸಾಗಣೆಗೆ ಪ್ರಮುಖ ಕೇಂದ್ರವಾಗಿದ್ದು, ವಿಶ್ವದ ಸುಮಾರು ಶೇಕಡಾ 20ರಷ್ಟು ಇಂಧನ ಸಾಗಾಟ ಇದೇ ಮಾರ್ಗದಲ್ಲಿ ನಡೆಯುತ್ತದೆ.
ಇಸ್ರೇಲ್ ಮತ್ತು ಅಮೆರಿಕ ನಡೆಸಿದ ದಾಳಿಗಳ ನಂತರ ಹಾರ್ಮುಜ್ ಜಲಸಂಧಿಯಲ್ಲಿ ಪೂರೈಕೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಅಮೆರಿಕ ಹೊರತಾಗಿ ಕೆಲವೇ ದೇಶಗಳ ಹಡಗುಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡುತ್ತಿದೆ. ಭಾರತ, ಚೀನಾ, ರಷ್ಯಾ, ಇರಾಕ್ ಮತ್ತು ಪಾಕಿಸ್ತಾನ ಸೇರಿದಂತೆ ಸ್ನೇಹ ಪರ ರಾಷ್ಟ್ರಗಳಿಗೆ ಹಾರ್ಮುಜ್ ಮೂಲಕ ಹಾದುಹೋಗಲು ಅವಕಾಶ ನೀಡಿರುವುದಾಗಿ ಇರಾನ್ ಹೇಳಿದೆ.
“ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಯಲ್ಲಿದ್ದಾರೆ. ಚಿಂತಿಸಬೇಡಿ ಎಂದು ಇರಾನ್ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಣೆ ನೀಡಿದೆ. ಇದೇ ವೇಳೆ, ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವಾಲಯವು ಗಲ್ಫ್ ಪ್ರದೇಶದ ಪರಿಸ್ಥಿತಿಯನ್ನು ನಿಗಾದಲ್ಲಿಟ್ಟು, ಭಾರತೀಯ ನಾಗರಿಕರು ಮತ್ತು ಹಡಗುಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇರಾನ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ.
ಸಂಘರ್ಷದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಭಾರತ ಸೇರಿದಂತೆ ಹಲವು ದೇಶಗಳಿಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಲಭ್ಯತೆಯಲ್ಲಿ ಸವಾಲುಗಳು ಎದುರಾಗಿವೆ. ಆದಾಗ್ಯೂ, ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳಿಗೆ ಯಾವುದೇ ಅಪಾಯವಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿರುವುದು ಸ್ವಲ್ಪ ಮಟ್ಟಿಗೆ ಆತಂಕ ಕಡಿಮೆ ಮಾಡುವಂತಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am