ಬ್ರೇಕಿಂಗ್ ನ್ಯೂಸ್
07-04-26 11:45 am HK News Staffer ದೇಶ - ವಿದೇಶ
ಟೆಹ್ರಾನ್, ಏ 07: ಇರಾನ್ ಅಮೆರಿಕ ಯುದ್ಧದ ಮಧ್ಯೆ ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಆರೋಗ್ಯದ ಬಿಗ್ ಅಪ್ಡೇಟ್ ಬಂದಿದೆ. ಬ್ರಿಟಿಷ್ ಪತ್ರಿಕೆ 'ದಿ ಟೈಮ್ಸ್ ' ಪ್ರಕಾರ, ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಜೀವಂತವಾಗಿದ್ದಾರೆ. ಆದರೆ ದೇಶವನ್ನು ನಡೆಸಲು ಅಸಮರ್ಥವಾಗಿದ್ದಾರೆ ಎಂದು ತಿಳಿದುಬಂದಿದೆ. ಮೊಜ್ತಾಬಾ ಖಮೇನಿ ಪ್ರಸ್ತುತ ಪ್ರಜ್ಞಾಹೀನರಾಗಿದ್ದು, ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಮೊಜ್ತಬಾ ಖಮೇನಿ ಸದ್ಯ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಥವಾ ಆಡಳಿತ ನಡೆಸುವ ಸಾಮರ್ಥ್ಯವನ್ನು ಹೊಂದಿಲ್ಲ ಎಂದು ವರದಿ ಹೇಳುತ್ತದೆ. ಅವರಿಗೆ ಯುದ್ಧದ ಸುದ್ದಿಯಿಲ್ಲ, ಕದನ ವಿರಾಮದ ಅರಿವಿಲ್ಲ ಎಂದು ತಿಳಿದುಬಂದಿದೆ.
ಈ ಮಾಹಿತಿ ಒಂದು ರಾಜತಾಂತ್ರಿಕ ಜ್ಞಾಪಕ ಪತ್ರದಲ್ಲಿ (ಡಿಪ್ಲೊಮ್ಯಾಟಿಕ್ ಮೆಮೊ) ಇದೆ. ಈ ಜ್ಞಾಪಕ ಪತ್ರ ಅಮೆರಿಕ ಮತ್ತು ಇಸ್ರೇಲಿ ಗುಪ್ತಚರ ಸಂಸ್ಥೆಗಳ ಮಾಹಿತಿಯನ್ನು ಆಧರಿಸಿದೆ. ಇದನ್ನು ಗಲ್ಫ್ ರಾಷ್ಟ್ರಗಳಲ್ಲಿನ ಮಿತ್ರ ದೇಶಗಳೊಂದಿಗೆ ಹಂಚಿಕೊಳ್ಳಲಾಗಿದೆ. ಪತ್ರಿಕೆಯ ಪ್ರಕಾರ, ಮೊಜ್ತಬಾ ಖಮೇನಿಗೆ ಟೆಹ್ರಾನ್‌ನಿಂದ ಸುಮಾರು 140 ಕಿಲೋಮೀಟರ್ ದಕ್ಷಿಣಕ್ಕಿರುವ ಪವಿತ್ರ ನಗರ ಕೋಮ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಿಂದಿನ ವರದಿಗಳಲ್ಲಿ ಮೊಜ್ತಬಾ ರಷ್ಯಾಕ್ಕೆ ಕರೆದೊಯ್ಯಲ್ಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ ರಷ್ಯಾದ ರಾಯಭಾರಿ, ಅವರು ಇರಾನ್‌ನಲ್ಲೇ ಉಳಿದಿದ್ದಾರೆ ಎಂದು ತಿಳಿಸಿದ್ದರು. ಈಗ ದಿ ಟೈಮ್ಸ್ ಈ ಮಾಹಿತಿಯನ್ನು ದೃಢಪಡಿಸಿದೆ.
ಈಗಿನ ಖಮೇನಿ ಆರೋಗ್ಯದ ಸ್ಥಿತಿ ಏನು?
ದಿ ಟೈಮ್ಸ್ ವರದಿ ಪ್ರಕಾರ, ಮೊಜ್ತಬಾ ಖಮೇನಿ ಪ್ರಜ್ಞಾಹೀನರಾಗಿದ್ದು, ಗಂಭೀರ ಚಿಕಿತ್ಸೆಯಲ್ಲಿದ್ದಾರೆ. ಅವರು ಯಾವುದೇ ನಿರ್ಧಾರ ತೆಗೆದುಕೊಳ್ಳುವ ಅಥವಾ ಸೈನ್ಯ ಕಾರ್ಯಾಚರಣೆಗಳಲ್ಲಿ ಭಾಗವಹಿಸುವ ಸ್ಥಿತಿಯಲ್ಲಿಲ್ಲ. ಹಾರ್ಮುಜ್ ಜಲಸಂಧಿ ಮತ್ತು ಯುದ್ಧ ವಿರಾಮದ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನಂತರ ಬಂದ ಅವರ ‘ಅಂತಿಮ’ ಸಂದೇಶವೂ ಅವರದ್ದಲ್ಲ ಎಂದು ಈಗ ಶಂಕೆಗಳು ಹುಟ್ಟಿವೆ.
ಟ್ರಂಪ್ ಮೊಜ್ತಬಾ ಕೊಲ್ಲಲ್ಪಟ್ಟಿದ್ದಾರೆ ಅಥವಾ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹಲವು ಬಾರಿ ಹೇಳಿದ್ದರು. ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಈ ಅನುಮಾನಗಳನ್ನು ಹೆಚ್ಚಿಸಿತ್ತು. ಈಗ ದಿ ಟೈಮ್ಸ್ ವರದಿ ಈ ಶಂಕೆಗಳನ್ನು ಇನ್ನಷ್ಟು ಬಲಪಡಿಸಿದೆ. ಇರಾನ್ ಸರ್ಕಾರ ಇದುವರೆಗೂ ಈ ವರದಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಿಂದೆ ಕೆಲವು ಅಧಿಕಾರಿಗಳು ಮೊಜ್ತಬಾ ಅವರ ಗಾಯಗಳು ಸಣ್ಣದಾಗಿದ್ದು ಅವರು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದರು. ಆದರೆ ಅವರು ಇನ್ನೂ ಸಾರ್ವಜನಿಕ ಕಣ್ಣಿಗೆ ಕಾಣಿಸಿಕೊಳ್ಳದಿರುವುದು ದೊಡ್ಡ ಪ್ರಶ್ನೆಯಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am