ಬ್ರೇಕಿಂಗ್ ನ್ಯೂಸ್
07-04-26 09:52 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಎಪ್ರಿಲ್ 7: ಇರಾನ್ ವಿರುದ್ಧ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಗುಡುಗಿದ್ದಾರೆ. ಇರಾನಿನ ಇಡೀ ನಾಗರಿಕತೆ ಇಂದು ರಾತ್ರಿಗೆ ಕೊನೆಯಾಗಲಿದೆ. ಅದು ಮತ್ತೆಂದೂ ಮರಳುವುದಿಲ್ಲ. ಆ ರೀತಿ ಆಗಲೆಂದು ನಾನು ಬಯಸುವುದಿಲ್ಲ. ಆದರೆ ಅದು ಆಗೇ ಆಗುತ್ತದೆ ಎಂದು ಟ್ರಂಪ್ ತಮ್ಮ ‘ಟ್ರೂತ್ ಸೋಶಿಯಲ್’ ನಲ್ಲಿ ಹೇಳಿದ್ದು ಜಾಗತಿಕವಾಗಿ ಸಂಚಲನ ಮೂಡಿಸಿದೆ.
ಹರ್ಮುಜ್ ಜಲಸಂಧಿ ತೆರೆಯಲು ಮೂರನೇ ಬಾರಿಗೆ ನೀಡಿದ್ದ 48 ಗಂಟೆಗಳ ಗಡುವು ಮಂಗಳವಾರ ರಾತ್ರಿ 8 ಗಂಟೆಗೆ (ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 6:30) ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಟ್ರಂಪ್ ಹೊಸ ಎಚ್ಚರಿಕೆ ಸಂದೇಶ ನೀಡಿದ್ದಾರೆ.
47 ವರ್ಷಗಳ ಸುಲಿಗೆ, ಭ್ರಷ್ಟಾಚಾರ ಮತ್ತು ಸಾವಿನ ಸರಣಿ ಇಂದಿಗೆ ಅಂತ್ಯವಾಗಲಿದೆ ಎಂದು ಹೇಳಿರುವ ಟ್ರಂಪ್, ಮೂಲಭೂತವಾದಿಗಳ ಆಡಳಿತ ಬದಲಿಸಲು ಗಟ್ಟಿ ನಿರ್ಧಾರಕ್ಕೆ ಬಂದಿದ್ದೇವೆ. ಈ ದಿನ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಹೇಳಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲು ಅಥವಾ ಅಮೆರಿಕಾ ಸೂಚಿಸಿದ ಒಪ್ಪಂದಕ್ಕೆ ಸಹಿ ಹಾಕಲು ನಿರಾಕರಿಸಿದರೆ, ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳನ್ನು ಕೇವಲ ನಾಲ್ಕೇ ಗಂಟೆಗಳಲ್ಲಿ ಧ್ವಂಸ ಮಾಡುವುದಾಗಿ ಟ್ರಂಪ್ ಈ ಹಿಂದೆ ಬೆದರಿಕೆ ಹಾಕಿದ್ದರು. ಈ ಮೊದಲು ಮಾರ್ಚ್ 23ರಂದು ಐದು ದಿನ, ಆನಂತರ ಹತ್ತು ದಿನಕ್ಕೆ ಕದನ ವಿರಾಮ ಘೋಷಿಸಲಾಗಿತ್ತು. ಈ ನಡುವೆ, ಇರಾನ್ ಜೊತೆಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಟ್ರಂಪ್ ಹೇಳುತ್ತ ಬಂದಿದ್ದರೂ, ಅವರ ಹೇಳಿಕೆಗಳನ್ನು ಇರಾನ್ ನಾಯಕರು ತಳ್ಳಿಹಾಕಿದ್ದರು.
ಇದರ ಬೆನ್ನಲ್ಲೇ ವಿಶ್ವಸಂಸ್ಥೆಯ ರಾಜತಾಂತ್ರಿಕ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದು, ಇರಾನ್ ಮೇಲೆ ಪರಮಾಣು ದಾಳಿ ನಡೆಯುವ ಸಾಧ್ಯತೆಯಿದೆ ಎಂಬ ಆತಂಕ ಹೊರಹಾಕಿದ್ದರು. ಇದೇ ವೇಳೆ, ಅಮೆರಿಕದ ನಡೆಗೆ ಯುಕೆ ಮತ್ತು ಸ್ಪೇನ್ ವಿರೋಧ ವ್ಯಕ್ತಪಡಿಸಿದ್ದರಿಂದ ಟ್ರಂಪ್ ಸ್ವಲ್ಪ ಮಟ್ಟಿಗೆ ತಣ್ಣಗಾಗಿದ್ದರು. ಆದರೆ ಮತ್ತೆ ಮತ್ತೆ ಎಚ್ಚರಿಕೆ ನೀಡುತ್ತ ಇರಾನ್ ಆಂತರಿಕವಾಗಿ ಕುಸಿಯುವಂತೆ ಮಾಡುತ್ತ ಬಂದಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am