ಬ್ರೇಕಿಂಗ್ ನ್ಯೂಸ್
18-04-26 10:31 am HK News Staffer ದೇಶ - ವಿದೇಶ
ಟೆಹ್ರಾನ್, ಎಪ್ರಿಲ್ 18: ಒಂದೂವರೆ ತಿಂಗಳಿನಿಂದ ಸಂಘರ್ಷದ ಕಾರಣಕ್ಕೆ ತೀವ್ರ ಇಕ್ಕಟ್ಟಿನಲ್ಲಿ ಸಿಲುಕಿದ್ದ ಹಾರ್ಮುಜ್ ಜಲಸಂಧಿಯನ್ನು ಎಲ್ಲಾ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣವಾಗಿ ಮುಕ್ತಗೊಳಿಸುವುದಾಗಿ ಇರಾನ್ ಘೋಷಿಸಿದೆ. ಲೆಬನಾನ್ ಮತ್ತು ಇಸ್ರೇಲ್ ನಡುವಿನ 10 ದಿನಗಳ ತಾತ್ಕಾಲಿಕ ಕದನ ವಿರಾಮ ಜಾರಿಗೆ ಬಂದ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ.
ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ‘ಎಕ್ಸ್’ ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. “ಲೆಬನಾನ್–ಇಸ್ರೇಲ್ ಕದನ ವಿರಾಮದ ಉಳಿದ ಅವಧಿ ವರೆಗೆ (ಏಪ್ರಿಲ್ 27ರ ವರೆಗೆ) ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತವಾಗಿರಲಿದೆ. ಹಡಗುಗಳು ಇರಾನ್ನ ಬಂದರು ಮತ್ತು ಕಡಲ ಸಂಸ್ಥೆ ಈಗಾಗಲೇ ನಿಗದಿಪಡಿಸಿರುವ ಮಾರ್ಗದಲ್ಲೇ ಸಂಚರಿಸಬೇಕು,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ನೌಕಾಪಡೆ ಕೆಲವು ದಿನಗಳಿಂದ ಗಣಿ ತೆರವು ಕಾರ್ಯಾಚರಣೆ ಮತ್ತು ಹಡಗುಗಳ ತಪಾಸಣೆ ಆರಂಭಿಸಿದ ನಂತರ ಉದ್ವಿಗ್ನತೆ ಹೆಚ್ಚಾಗಿತ್ತು. ಪರಿಸ್ಥಿತಿ ಸುಧಾರಿಸಿದರೆ ನೌಕಾಯಾನದ ಸ್ವಾತಂತ್ರ್ಯವನ್ನು ಮರು ಸ್ಥಾಪಿಸಲು ತಾವು ಸಿದ್ಧರಿದ್ದೇವೆ ಎಂಬ ಸಂಕೇತವನ್ನು ರವಾನಿಸುವ ಉದ್ದೇಶ ಇರಾನ್ ನಿರ್ಧಾರದ ಹಿಂದಿದೆ ಎಂದು ಎನ್ನಲಾಗುತ್ತಿದೆ.
ಇದೇ ವೇಳೆ ಜಲಸಂಧಿಯಲ್ಲಿ ಶಾಂತಿ ಸ್ಥಾಪಿಸಲು ಫ್ರಾನ್ಸ್ ಮತ್ತು ಬ್ರಿಟನ್ ಮುಂದಾಗಿವೆ. ಸುಮಾರು 40 ದೇಶಗಳ ಮತ್ತೊಂದು ಬೃಹತ್ ಸಭೆಯ ಅಧ್ಯಕ್ಷತೆಯನ್ನು ವಹಿಸುವುದಾಗಿ ಉಭಯ ರಾಷ್ಟ್ರಗಳು ಘೋಷಿಸಿವೆ. ಜಲಸಂಧಿಯಲ್ಲಿ ಅಡೆತಡೆಯಿಲ್ಲದ ಸಂಚಾರಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಒಮ್ಮತ ಮೂಡಿಸುವುದು ಸಭೆಯ ಮುಖ್ಯ ಉದ್ದೇಶವಾಗಿದೆ. ವಿಶ್ವದ ಪ್ರಮುಖ ತೈಲ ಸಾಗಾಣಿಕಾ ಮಾರ್ಗವು ಮತ್ತೆ ಮುಕ್ತವಾಗಿರುವುದರಿಂದ ಜಾಗತಿಕ ತೈಲ ಬೆಲೆಗಳಲ್ಲಿ ಉಂಟಾಗಬಹುದಾಗಿದ್ದ ಭಾರಿ ಏರಿಳಿತದ ಆತಂಕ ಸದ್ಯಕ್ಕೆ ದೂರವಾಗಿದೆ. ಏಪ್ರಿಲ್ 27ರ ವರೆಗೆ ಈ ಕದನ ವಿರಾಮ ಇರುವುದರಿಂದ, ಮುಂದಿನ ಹತ್ತು ದಿನಗಳಲ್ಲಿ ನಡೆಯಲಿರುವ ರಾಜತಾಂತ್ರಿಕ ಚರ್ಚೆಗಳು ಶಾಶ್ವತ ಪರಿಹಾರಕ್ಕೆ ದಾರಿ ಮಾಡಿಕೊಡಲಿವೆ ಎಂಬ ಆಶಯ ವ್ಯಕ್ತವಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am