ಬ್ರೇಕಿಂಗ್ ನ್ಯೂಸ್
20-04-26 09:37 pm HK News Staffer ದೇಶ - ವಿದೇಶ
ಟೆಹ್ರಾನ್, ಎಪ್ರಿಲ್ 20: ಇರಾನ್ ಧ್ವಜ ಹೊತ್ತಿದ್ದ ಸರಕು ಹಡಗೊಂದನ್ನು ಅಮೆರಿಕದ ಸೇನೆ ಒಮಾನ್ ಸಮುದ್ರ ತೀರದಲ್ಲಿ ವಶಪಡಿಸಿದ್ದು, ಇದರ ಬೆನ್ನಲ್ಲೇ ಉಭಯ ರಾಷ್ಟ್ರಗಳ ಉದ್ವಿಗ್ನತೆ ಮತ್ತೆ ಉಲ್ಬಂಣಗೊಂಡಿದೆ. ವರದಿಗಳ ಪ್ರಕಾರ, “ಟೌಸ್ಕಾ” ಎಂಬ ಇರಾನ್ ಹಡಗನ್ನು ತನ್ನ ನೌಕಾಪಡೆಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಮೆರಿಕಾ ಹೇಳಿದೆ.
ಅಮೆರಿಕಾ ನೌಕಾಪಡೆಯ ಡಿಸ್ಟ್ರಾಯರ್ ಹಡಗು, ಇರಾನಿ ಸರಕು ಹಡಗಿನ ಎಂಜಿನ್ ಭಾಗಕ್ಕೆ ಗುಂಡು ಹಾರಿಸಿ ನಿಷ್ಕ್ರಿಯಗೊಳಿಸಿದೆ. ನಂತರ ಅಮೆರಿಕಾ ನೌಕಾ ಪಡೆ ಹಡಗನ್ನು ವಶಕ್ಕೆ ಪಡೆದು ಅದರೊಳಗಿನ ಸರಕುಗಳನ್ನು ಪರಿಶೀಲನೆ ನಡೆಸಿದೆ. ಈ ಕಾರ್ಯಾಚರಣೆಯ ವಿಡಿಯೋವನ್ನು ಅಮೆರಿಕಾ ಸೆಂಟ್ರಲ್ ಕಮಾಂಡ್ ಬಿಡುಗಡೆ ಮಾಡಿದ್ದು, ಹಲವು ಬಾರಿಯ ಎಚ್ಚರಿಕೆಗಳ ನಂತರ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಇದಕ್ಕೆ ತೀವ್ರ ಪ್ರತಿಕ್ರಿಯೆ ನೀಡಿರುವ ಇರಾನ್ ಸರ್ಕಾರ, ಈ ಕ್ರಮವನ್ನು ನೇರವಾಗಿ “ಸಮುದ್ರ ದರೋಡೆ” ಎಂದು ಕರೆದಿದೆ. ಅಮೆರಿಕದ ಈ ದಾಳಿಗೆ ನಾವು ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಘೋಷಿಸಿದೆ. ಇದರಿಂದ ಪ್ರದೇಶದಲ್ಲಿ ಮತ್ತೆ ಸೇನಾ ಸಂಘರ್ಷದ ಭೀತಿ ಹೆಚ್ಚಿದೆ.
ಇರಾನ್ ಅಧ್ಯಕ್ಷ ಮಸೂದ್ ಪೆಜೆಷ್ಕಿಯಾನ್ ಅಮೆರಿಕದ ಕ್ರಮವನ್ನು ಉದ್ದೇಶಪೂರ್ವಕ ಪ್ರಚೋದನೆ ಎಂದು ಟೀಕಿಸಿದ್ದಾರೆ. ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ಪಾಕಿಸ್ತಾನದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಅಮೆರಿಕದ ಈ ನಡೆ ರಾಜತಾಂತ್ರಿಕ ಪ್ರಯತ್ನಗಳಿಗೆ ದೊಡ್ಡ ಧಕ್ಕೆ ತರುತ್ತಿದೆ ಎಂದು ತಿಳಿಸಿದ್ದಾರೆ.
ಇತ್ತ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಎರಡನೇ ಹಂತದ ಮಾತುಕತೆಯೂ ಅನಿಶ್ಚಿತವಾಗಿದೆ. ಇದರಿಂದ ಅಮೆರಿಕಾ- ಇರಾನ್ ಸಂಘರ್ಷಕ್ಕೆ ರಾಜತಾಂತ್ರಿಕ ಪರಿಹಾರ ಸಿಗುವ ಸಾಧ್ಯತೆಗಳು ಕುಂಠಿತವಾಗಿದೆ. ಇರಾನ್ ನಾಯಕರು ತಮ್ಮ ನಿಲುವನ್ನು ಕಠಿಣಗೊಳಿಸಿದ್ದು, ಅಮೆರಿಕಾ ತನ್ನ ತೈಲ ನಿರ್ಬಂಧಗಳನ್ನು ಹಿಂತೆಗೆದುಕೊಳ್ಳುವ ವರೆಗೆ ಹಾರ್ಮುಜ್ ಮೂಲಕ ಸಾಗಣೆ ಮೇಲಿನ ನಿರ್ಬಂಧ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಇದರಿಂದ ಜಾಗತಿಕ ತೈಲ ಬೆಲೆ ಏರಿಕೆ ಹಾಗೂ ಆರ್ಥಿಕ ಅಸ್ಥಿರತೆ ಹೆಚ್ಚುವ ಸಾಧ್ಯತೆ ಇದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am