ಬ್ರೇಕಿಂಗ್ ನ್ಯೂಸ್
04-05-26 01:16 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 4: ಮಹತ್ವದ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು ಸ್ಪಷ್ಟ ಬಹುಮತ ಪಡೆಯುವತ್ತ ಮುನ್ನುಗ್ಗಿದೆ. 12 ಗಂಟೆ ವೇಳೆಗೆ, ಬಿಜೆಪಿ 182 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದು ಸಿಎಂ ಮಮತಾ ದೀದಿ ಕೋಟೆಯನ್ನು ಪುಡಿ ಮಾಡಿದೆ.
ಮೂರು ಬಾರಿಯ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 101 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು ಇತರರು ಒಂದಂಕಿ ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು 294 ಸ್ಥಾನಗಳಿದ್ದು 148 ಬಹುಮತದ ಮ್ಯಾಜಿಕ್ ನಂಬರ್ ಆಗಿದೆ.
2021 ರಲ್ಲಿ ತೃಣಮೂಲ ಕಾಂಗ್ರೆಸ್ 215 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿದ್ದರೆ, ಬಿಜೆಪಿ 77 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್, ಸಿಪಿಎಂ ಶೂನ್ಯ ಸಾಧನೆ ಮಾಡಿತ್ತು. ಸಿಎಂ ಮಮತಾ ಬ್ಯಾನರ್ಜಿ ಆ ಸಂದರ್ಭದಲ್ಲಿ ನಂದಿಗ್ರಾಮದಲ್ಲಿ ಸೋತು ಬಳಿಕ ಭವಾನಿಪುರ್ ನಿಂದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ಈ ಬಾರಿ ಮತಪಟ್ಟಿ ಪರಿಷ್ಕರಣೆ ಬಳಿಕ ಎಪ್ರಿಲ್ 23 ಮತ್ತು 29ರಂದು ಎರಡು ಹಂತದಲ್ಲಿ ಚುನಾವಣೆ ನಡೆದಿದ್ದು ದಾಖಲೆ ಎನ್ನುವಂತೆ 92.8 ಶೇ. ಮತ್ತು 91.47 ಶೇ. ವೋಟಿಂಗ್ ಆಗಿತ್ತು. ಎಕ್ಸಿಟ್ ಪೋಲ್ ನಲ್ಲಿ ಹೆಚ್ಚಿನ ಸಮೀಕ್ಷೆಗಳಲ್ಲಿ ಈ ಬಾರಿ ಬಿಜೆಪಿ ಗೆಲ್ಲುವ ಭವಿಷ್ಯ ಬಂದಿತ್ತು. ಆದರೆ ಚುನಾವಣಾ ವಿಶ್ಲೇಷಕರು ಬಿಜೆಪಿ ಗೆಲುವಿನ ಬಗ್ಗೆ ಸಂಶಯ ಹೊಂದಿದ್ದರು. ಯಾಕಂದ್ರೆ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬೇಸ್ ಇರಲಿಲ್ಲ. ಹಿಂದಿನಿಂದಲೂ ಕಾಂಗ್ರೆಸ್, ಆನಂತರ ಸಿಪಿಎಂ ಅಧಿಕಾರದಲ್ಲಿತ್ತು.
ಎಡರಂಗದ ಸುದೀರ್ಘ 25 ವರ್ಷಗಳ ಆಡಳಿತದ ಬಳಿಕ ಕಾಂಗ್ರೆಸನ್ನು ಒಡೆದು ತೃಣಮೂಲ ಕಾಂಗ್ರೆಸ್ ಸ್ಥಾಪಿಸಿ ಮಮತಾ ಬ್ಯಾನರ್ಜಿ ಅಧಿಕಾರ ಹಿಡಿದಿದ್ದರು. ನಂದಿಗ್ರಾಮದ ರೈತ ಹೋರಾಟ ಮಮತಾಗೆ ಸ್ಟಾರ್ ಪಟ್ಟ ಕೊಟ್ಟಿದ್ದು ರಾಜ್ಯದ ಗದ್ದುಗೆಯತ್ತ ಒಯ್ದಿತ್ತು. ಆದರೆ ಅಲ್ಪಸಂಖ್ಯಾತರ ಅತಿಯಾದ ಓಲೈಕೆ, ಬಾಂಗ್ಲಾ ನುಸುಳುಕೋರರ ಬಗ್ಗೆ ಮೃದು ಧೋರಣೆ ತಾಳಿದ್ದು ಈಗ ಮತದಾರರಿಂದ ತಪರಾಕಿ ಅನುಭವಿಸುವಂತಾಗಿದೆ. ಇದನ್ನೇ ಚುನಾವಣಾ ವಿಷಯವಾಗಿಸಿದ ಬಿಜೆಪಿಯನ್ನು ಮತದಾರ ಈಗ ಕೈಹಿಡಿದು ಮೇಲೆತ್ತಿದ್ದಾನೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am