ಬ್ರೇಕಿಂಗ್ ನ್ಯೂಸ್
06-05-26 11:02 pm HK News Desk ದೇಶ - ವಿದೇಶ
ಚೆನ್ನೈ, ಮೇ 6 ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆಗಾಗಿ ಕಾಂಗ್ರೆಸ್, ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ)ಗೆ ತನ್ನ ಸಂಪೂರ್ಣ ಬೆಂಬಲವನ್ನು ಅಧಿಕೃತವಾಗಿ ಘೋಷಿಸಿದೆ. ಇದೇ ವೇಳೆ, ವಿಜಯ್ ಅವರು ಸರ್ಕಾರ ರಚನೆಗೆ ರಾಜ್ಯಪಾಲರಲ್ಲಿ ಹಕ್ಕು ಮಂಡಿಸಿದ್ದು ಶೀಘ್ರ ಸರ್ಕಾರ ರಚನೆ ಮಾಡಲು ಮುಂದಾಗಿದ್ದಾರೆ.
ಇದೇ ವೇಳೆ, ತಮಿಳುನಾಡು ಕಾಂಗ್ರೆಸ್ ಹೇಳಿಕೆ ಬಿಡುಗಡೆ ಮಾಡಿದ್ದು ರಾಜ್ಯದ ಜನತೆ ವಿಜಯ್ ನೇತೃತ್ವದ ಟಿವಿಕೆಗೆ ಸ್ಪಷ್ಟ, ಬಲವಾದ ಮತ್ತು ಭಾರೀ ತೀರ್ಪು ನೀಡಿದ್ದಾರೆ. ತಮಿಳುನಾಡು ಕಾಂಗ್ರೆಸ್ ಸಮಿತಿ ಟಿವಿಕೆ ಸರ್ಕಾರ ರಚನೆಗೆ ಸಂಪೂರ್ಣ ಬೆಂಬಲ ನೀಡಲು ತೀರ್ಮಾನಿಸಿದೆ ಎಂದು ಪತ್ರದಲ್ಲಿ ಹೇಳಿದೆ. ಅಲ್ಲದೆ, ಭಾರತ ಸಂವಿಧಾನವನ್ನು ನಂಬದ ಯಾವುದೇ ಶಕ್ತಿಗಳನ್ನು ಈ ಮೈತ್ರಿಯಿಂದ ದೂರವಿಡುವ ವರೆಗೆ ನಮ್ಮ ಬೆಂಬಲ ಮುಂದುವರಿಯುತ್ತದೆ ಎಂದು ಪಕ್ಷ ಸ್ಪಷ್ಟಪಡಿಸಿದೆ.
ಟಿವಿಕೆ ಮತ್ತು ತಮಿಳುನಾಡು ಕಾಂಗ್ರೆಸ್ ನಡುವಿನ ಈ ಮೈತ್ರಿ, ಪೆರುಂತಲೈವರ್ ಕಾಮರಾಜ್ ಅವರ ತಮಿಳುನಾಡಿನ ಸುವರ್ಣಯುಗವನ್ನು ಮರಳಿ ತರಲು ಪ್ರಯತ್ನಿಸಲಿದೆ. ಜೊತೆಗೆ ತಂದೈ ಪೆರಿಯಾರ್ ಅವರ ಸಾಮಾಜಿಕ ನ್ಯಾಯದ ತತ್ವಗಳು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಾತ್ಮಕ ಆದರ್ಶಗಳನ್ನು ಮುಂದಿನ ವರ್ಷಗಳಲ್ಲಿ ಮುಂದುವರಿಸುವ ಬದ್ಧತೆಯೂ ಇದೆ ಎಂದು ಹೇಳಿದೆ. ಕಾಂಗ್ರೆಸ್, ಟಿವಿಕೆಯೊಂದಿಗೆ ಈ ಮೈತ್ರಿ ಕೇವಲ ಸರ್ಕಾರ ರಚನೆಗೆ ಮಾತ್ರ ಸೀಮಿತವಾಗದೇ, ಭವಿಷ್ಯದ ಲೋಕಸಭೆ ಮತ್ತು ರಾಜ್ಯಸಭೆ ಚುನಾವಣೆಗಳಲ್ಲಿಯೂ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದೆ.
ತನ್ನ ಪಕ್ಷಕ್ಕೆ ಬೆಂಬಲ ನೀಡಿದ ಕಾಂಗ್ರೆಸ್ ನಾಯಕರನ್ನು ವಿಜಯ್ ಅವರು ಹೂಮಾಲೆ ಸ್ವಾಗತಿಸಿದ್ದಾರೆ. ಇದೇ ವೇಳೆ, ತನ್ನೊಂದಿಗಿನ ಮೈತ್ರಿ ಮುರಿದುಕೊಂಡು ಟಿವಿಕೆ ಜೊತೆ ಸೇರಿದ ಕಾಂಗ್ರೆಸ್ ಬಗ್ಗೆ ಡಿಎಂಕೆ ನಾಯಕ ಸ್ಟಾಲಿನ್ ಕಿಡಿಕಾರಿದ್ದು ಬೆನ್ನಿಗೆ ಚೂರಿ ಹಾಕಿದ್ದಾಗಿ ಕಟು ನುಡಿಯಾಡಿದೆ
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am