ಬ್ರೇಕಿಂಗ್ ನ್ಯೂಸ್
07-05-26 12:52 pm HK News Staffer ದೇಶ - ವಿದೇಶ
ಚೆನ್ನೈ, ಮೇ 7: ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಡಿಎಂಕೆ - ಎಐಎಡಿಎಂಕೆ ಬಹುಕಾಲದ ವೈರತ್ವ ಬದಿಗಿಟ್ಟು ಒಂದಾಗಲಿದೆ ಎನ್ನುವ ವದಂತಿ ನಡುವೆಯೇ ನಿರ್ಗಮಿತ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇಂಗ್ಲಿಷ್ ದೈನಿಕ ಒಂದಕ್ಕೆ ಪ್ರತಿಕ್ರಿಯಿಸಿ, ಮೈತ್ರಿ ವದಂತಿಯನ್ನು ತಳ್ಳಿಹಾಕಿದ್ದಾರೆ. ಡಿಎಂಕೆ ಪಕ್ಷವು ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚಿಸುವುದಕ್ಕೆ ಕಾಯಲು ಸಿದ್ಧವಾಗಿದೆ. ಆರು ತಿಂಗಳ ಕಾಲ ಯಾವುದೇ ಅಡ್ಡಿಯಿಲ್ಲದೇ ಬೆಳವಣಿಗೆಯನ್ನು ಗಮನಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಸ್ಟಾಲಿನ್ ಹೇಳಿಕೆಯಿಂದ ಮೈತ್ರಿ ಸಾಧ್ಯತೆಗಳ ಕುರಿತು ಹರಡುತ್ತಿದ್ದ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ. ರಾಜ್ಯದಲ್ಲಿ ಸಂವಿಧಾನಾತ್ಮಕ ಸಂಕಷ್ಟ ಅಥವಾ ಮತ್ತೊಂದು ಚುನಾವಣೆ ಎದುರಿಸುವಂತಹ ಸ್ಥಿತಿ ಬರಬಾರದು ಎಂದು ಹೇಳಿದ ಸ್ಟಾಲಿನ್, ಹೊಸ ಸರ್ಕಾರವು ತಮ್ಮ ಸರ್ಕಾರ ಜಾರಿಗೆ ತಂದಿದ್ದ ಎಲ್ಲಾ ಯೋಜನೆಗಳನ್ನು ಮುಂದುವರಿಸಬೇಕು. ಜೊತೆಗೆ, ಟಿವಿಕೆ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಬೇಕು ಎಂದು ಹೇಳಿದರು.
ಮಹಿಳೆಯರಿಗೆ 2,500 ರೂ. ಪ್ರತಿ ತಿಂಗಳು ನೀಡುವ ವಿಜಯ್ ಭರವಸೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸ್ಟಾಲಿನ್, ಅದು ಈಡೇರಿಸಲು ಕಷ್ಟದ ಭರವಸೆ. ಕನಿಷ್ಠ ನಾವು ನೀಡಿದಂತೆ 1,000 ರೂ. ಆದರೂ ನೀಡಿ ಎಂದು ಹೇಳಿದರು.
ತಮಿಳುನಾಡು ಚುನಾವಣೆಯಲ್ಲಿ ಟಿವಿಕೆ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಏಕಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತಕ್ಕೆ ಅಗತ್ಯವಿದ್ದ 118 ಸ್ಥಾನ ಪಡೆಯಲು ವಿಫಲವಾಗಿದೆ. ಕಾಂಗ್ರೆಸ್ ಬೆಂಬಲ ನೀಡಿದ ನಂತರ ಟಿವಿಕೆ ಬಲ 112ಕ್ಕೇರಿದ್ದರೂ, ಸರ್ಕಾರ ರಚಿಸಲು ಇನ್ನೂ ಐದು ಸ್ಥಾನಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ವಿಜಯ್ ಪಕ್ಷವು ಸಿಪಿಐ ಮತ್ತು ವಿಡುತಲೈ ಚಿರುಥೈಗಲ್ ಕಚ್ಚಿ ಪಕ್ಷಗಳ ಬೆಂಬಲ ಯಾಚಿಸಿದೆ. ವಿಜಯ್ ಪಕ್ಷದ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದರೂ, ಪೂರ್ಣ ಬಹುಮತ ತೋರಿಸಿದ ನಂತರವೇ ಬನ್ನಿ ಎಂದು ಹೇಳಿದ್ದಾರೆನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಹೀಗಾಗಿ ವಿಜಯ್ ಪಕ್ಷವನ್ನು ಬದಿಗಿಟ್ಟು ಡಿಎಂಕೆ - ಎಐಎಡಿಎಂಕೆ ಸೇರಿ ಸರ್ಕಾರ ರಚಿಸಲಿದೆ ಎಂಬ ವದಂತಿ ಹರಡಿತ್ತು. ಆದರೆ ಸ್ಟಾಲಿನ್ ಈ ವದಂತಿಯನ್ನು ತಳ್ಳಿಹಾಕಿದ್ದು ಸರ್ಕಾರ ರಚನೆಯ ಕಸರತ್ತಿನಿಂದ ದೂರ ಉಳಿಯುವುದಾಗಿ ಹೇಳಿದ್ದಾರೆ.
ಚುನಾವಣೆಯಲ್ಲಿ ಡಿಎಂಕೆ 59 ಸ್ಥಾನ, ಎಐಎಡಿಎಂಕೆ 47, ಟಿವಿಕೆ 108, ಪಿಎಂಕೆ 4, ಕಾಂಗ್ರೆಸ್ 5, ಐಯುಎಂಎಲ್ 2, ಸಿಪಿಐ 2, ಸಿಪಿಎಂ 2 ಸ್ಥಾನಗಳನ್ನು ಗೆದ್ದರೆ, ಬಿಜೆಪಿ, ಡಿಎಂಡಿಕೆ ಮತ್ತು ಎಎಂಎಂಕೆ ತಲಾ ಒಂದು ಸ್ಥಾನ ಗೆದ್ದಿವೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
31-05-26 03:40 pm
HK News Staffer
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
31-05-26 02:24 pm
HK News Staffer
ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ! ಅಸ್ತಿ ವಿವಾದಕ್ಕ...
29-05-26 10:21 pm
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm