ಬ್ರೇಕಿಂಗ್ ನ್ಯೂಸ್
08-05-26 06:38 pm HK News Staffer ದೇಶ - ವಿದೇಶ
ಚೆನ್ನೈ, ಮೇ 8: ತಮಿಳುನಾಡಿನಲ್ಲಿ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಅವರಿಗೆ ಕೊನೆಗೂ ಬಹುಮತದ ಮ್ಯಾಜಿಕ್ ನಂಬರ್ ಸಿಕ್ಕಿದ್ದು, ಕಾಂಗ್ರೆಸ್ ನಂತರ ಎಡರಂಗ ಮತ್ತು ವಿಸಿಕೆ ಪಾರ್ಟಿಯೂ ಬೆಂಬಲ ಘೋಷಿಸಿವೆ. ಹೀಗಾಗಿ ದಳಪತಿ ವಿಜಯ್ ಅವರು ಶೀಘ್ರದಲ್ಲೇ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಲಿದ್ದಾರೆ.
ಸರ್ಕಾರ ರಚನೆಗೆ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆಗೆ ಸಿಪಿಐ ಮತ್ತು ಸಿಪಿಎಂ ಶುಕ್ರವಾರ ಬೇಷರತ್ ಬೆಂಬಲ ಘೋಷಿಸಿದೆ. ಇದರ ಬೆನ್ನಲ್ಲೇ ವಿಸಿಕೆ ಸಹ ಟಿವಿಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಶುಕ್ರವಾರ ಸುದೀರ್ಘ ಚರ್ಚೆಯ ನಂತರ, ಎಡಪಕ್ಷಗಳು ವಿಜಯ್ ಅವರ ಟಿವಿಕೆಗೆ ಬೆಂಬಲ ನೀಡಲು ನಿರ್ಧರಿಸಿತು. ಆನಂತರ, ಈ ಕುರಿತ ಪತ್ರವನ್ನು ತಮಿಳುನಾಡು ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರಿಗೆ ಕಳುಹಿಸಲಾಗಿದೆ.
ಇದೇ ರೀತಿಯ ಜಂಜಾಟ ಮುಂದುವರಿದರೆ ಮೇ 10ರ ಬಳಿಕ ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಮುಂದಾಗಿದೆ. ಆಮೂಲಕ ಹಿಂಬಾಗಿಲಿನಿಂದ ಬಿಜೆಪಿ ರಾಜ್ಯದ ಆಡಳಿತ ನಡೆಸಲಿದೆ. ಇದನ್ನು ತಪ್ಪಿಸಲು ನಾವು ಟಿವಿಕೆಗೆ ಬೇಷರತ್ ಬೆಂಬಲ ನೀಡಿದ್ದೇವೆ, ನಾವು ಯಾವುದೇ ಕ್ಯಾಬಿನೆಟ್ ಸ್ಥಾನ ಬಯಸುವುದಿಲ್ಲ ಎಂದು ಸಿಪಿಐಎಂ ರಾಜ್ಯ ಸೆಕ್ರೆಟರಿ ಟಿ.ಟಿ ಷಣ್ಮುಗಂ ತಿಳಿಸಿದ್ದಾರೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಸಿಪಿಐ ಮತ್ತು ಸಿಪಿಎಂ ತಲಾ ಇಬ್ಬರು ಶಾಸಕರನ್ನು ಹೊಂದಿದೆ. ಇದರ ಬೆನ್ನಲ್ಲೇ ವಿಸಿಕೆ(2) ಮತ್ತು ಒಂದೊಂದು ಸ್ಥಾನ ಇರುವ ಮುಸ್ಲಿಂ ಲೀಗ್ ಮತ್ತು ಎಕೆಎಂಎಂ ಕೂಡ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿವೆ. ಇದರೊಂದಿಗೆ ವಿಜಯ್ ಸರ್ಕಾರದ ಬಲಾಬಲ 121 ಸ್ಥಾನಗಳಿಗೆ ಏರಿದೆ.
ಎಡಪಕ್ಷಗಳು ಮತ್ತು ಐಯುಎಂಎಲ್ ಡಿಎಂಕೆ ಮೈತ್ರಿಯಲ್ಲಿತ್ತಾದರೂ, ವಿಜಯ್ ಬೆಂಬಲ ಕೋರಿಕೆಯ ನಂತರ ಮಿತ್ರ ಪಕ್ಷಗಳಿಗೆ ನೀವು ಸರ್ಕಾರ ಸೇರುವ ಬಗ್ಗೆ ನಿರ್ಧಾರ ಮಾಡಿಕೊಳ್ಳಬಹುದು. ತನ್ನದೇನೂ ಅಭ್ಯಂತರ ಇಲ್ಲವೆಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದರು. ಇದರ ಬೆನ್ನಲ್ಲೇ ಈ ಪಕ್ಷಗಳು ದಳಪತಿ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿವೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am