ಬ್ರೇಕಿಂಗ್ ನ್ಯೂಸ್
09-05-26 12:06 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 09: ತಮಿಳುನಾಡು ರಾಜಕೀಯ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿರುವ ನಡುವೆಯೇ, ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸರ್ಕಾರ ರಚನೆಗೆ ಹರಸಾಹಸ ಪಡುತ್ತಿದೆ. 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೂ ಬಹುಮತಕ್ಕೆ ಅಗತ್ಯವಾದ 118 ಶಾಸಕರ ಬೆಂಬಲ ಸಿಗದಿರುವುದು ಟಿವಿಕೆಗೆ ದೊಡ್ಡ ಸವಾಲಾಗಿದೆ. ಈ ರಾಜಕೀಯ ಬೆಳವಣಿಗೆ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ, “ವಿಜಯ್ ಅವರನ್ನು ದೇವರೇ ಕಾಪಾಡಬೇಕು” ಎಂದು ವ್ಯಂಗ್ಯವಾಡಿದ್ದಾರೆ.
ಬಹುಮತಕ್ಕೆ ಇನ್ನೂ ಇಬ್ಬರು ಶಾಸಕರ ಕೊರತೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಕನಿಷ್ಠ 118 ಶಾಸಕರ ಬೆಂಬಲ ಅಗತ್ಯವಿದೆ. ಈ ಹಿನ್ನೆಲೆ ರಾಜ್ಯಪಾಲರು ವಿಜಯ್ ಅವರಿಗೆ ಬೆಂಬಲಿಸುವ ಶಾಸಕರ ಪಟ್ಟಿಯನ್ನು ಸಲ್ಲಿಸುವಂತೆ ಸೂಚಿಸಿರುವುದಾಗಿ ತಿಳಿದುಬಂದಿದೆ. ಇತ್ತ ರಾಜ್ಯ ರಾಜಕೀಯದಲ್ಲಿ ಡಿಎಂಕೆ, ಎಐಎಡಿಎಂಕೆ ಹಾಗೂ ಇತರ ಪಕ್ಷಗಳ ನಡೆಯೂ ಕುತೂಹಲಕ್ಕೆ ಕಾರಣವಾಗಿದೆ.
ಉಚಿತ ಗ್ಯಾರಂಟಿಗಳೇ ದೊಡ್ಡ ಸವಾಲು?
ಈ ಬಗ್ಗೆ ಮಾತನಾಡಿದ ಹೆಚ್ಡಿ ಕುಮಾರಸ್ವಾಮಿ, “ತಮಿಳುನಾಡಿನ ವಾರ್ಷಿಕ ಬಜೆಟ್ ಸುಮಾರು 3.30 ರಿಂದ 3.40 ಲಕ್ಷ ಕೋಟಿ ರೂ. ಇದೆ. ಆದರೆ ವಿಜಯ್ ನೀಡಿರುವ ಉಚಿತ ಯೋಜನೆಗಳನ್ನು ಜಾರಿಗೆ ತರಲು ವರ್ಷಕ್ಕೆ ಸುಮಾರು 6 ರಿಂದ 7 ಲಕ್ಷ ಕೋಟಿ ರೂ. ಬೇಕಾಗಬಹುದು,” ಎಂದು ಅಂದಾಜು ವ್ಯಕ್ತಪಡಿಸಿದರು.
“ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಅವರು ಹೇಗೆ ಹೊಂದಿಸುತ್ತಾರೆ ಅನ್ನೋದನ್ನ ಕಾದು ನೋಡಬೇಕು. ಅದಕ್ಕಾಗಿಯೇ ವಿಜಯ್ ಅವರನ್ನು ದೇವರೇ ಕಾಪಾಡಬೇಕು ಎಂದು ಹೇಳುತ್ತಿದ್ದೇನೆ” ಎಂದು ವ್ಯಂಗ್ಯ ಚಟಾಕಿ ಹಾರಿಸಿದರು.
ಸ್ಪಷ್ಟ ಬಹುಮತದ ಕೊರತೆಯಿದ್ದಾಗ ರಾಜ್ಯಪಾಲರು ಕಾನೂನು ತಜ್ಞರ ಸಲಹೆ ಪಡೆಯುವುದು ಸಹಜ ಎಂದ ಕುಮಾರಸ್ವಾಮಿ, ವಿಜಯ್ ಬಹುಮತ ಗಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.
“ಸ್ಟಾಲಿನ್ ಕೂಡ ಆರು ತಿಂಗಳು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ. ಹೀಗಾಗಿ ಇವತ್ತು ಅಥವಾ ನಾಳೆ ತಮಿಳುನಾಡಿನ ರಾಜಕೀಯ ಚಿತ್ರಣ ಸ್ಪಷ್ಟವಾಗಬಹುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ ತಳ್ಳಿ ಹಾಕಿದ ಹೆಚ್ಡಿಕೆ
ಡಿಎಂಕೆ ಹಾಗೂ ಎಐಎಡಿಎಂಕೆ ಒಂದಾಗಿ ಸರ್ಕಾರ ರಚಿಸಬಹುದು ಎಂಬ ಊಹಾಪೋಹಗಳನ್ನೂ ಕುಮಾರಸ್ವಾಮಿ ತಳ್ಳಿ ಹಾಕಿದ್ದು, “ನನ್ನ ರಾಜಕೀಯ ಅನುಭವದ ಪ್ರಕಾರ ಆ ಎರಡು ಪಕ್ಷಗಳು ಒಂದಾಗುವ ಸಾಧ್ಯತೆ ಕಡಿಮೆ. ಇಬ್ಬರೂ ಸೇರಿ ಸರ್ಕಾರ ರಚಿಸುವುದಿಲ್ಲ ಎಂಬುದೇ ನನ್ನ ನಿರೀಕ್ಷೆ” ಎಂದಿದ್ದಾರೆ.
ಕಾಂಗ್ರೆಸ್ ವಿರುದ್ಧವೂ ಕಿಡಿ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಬಹುದು ಎಂಬ ಚರ್ಚೆಗೂ ಕುಮಾರಸ್ವಾಮಿ ಲೇವಡಿ ಮಾಡಿ, “ಕಾಂಗ್ರೆಸ್ ಯಾವ ಸಂದರ್ಭದಲ್ಲೇನು ಮಾಡುತ್ತದೆ ಅನ್ನೋದಕ್ಕೆ ದೇಶದಲ್ಲಿ ಸಾಕಷ್ಟು ಉದಾಹರಣೆಗಳಿವೆ. ಚರಣ್ ಸಿಂಗ್, ವಿಪಿ ಸಿಂಗ್, ಚಂದ್ರಶೇಖರ್, ದೇವೇಗೌಡರ ಸರ್ಕಾರಗಳನ್ನೂ ಅಸ್ಥಿರಗೊಳಿಸಿದ್ದ ಉದಾಹರಣೆಗಳಿವೆ,” ಎಂದು ಟೀಕಿಸಿದರು.
ಡಿಎಂಕೆ ತನ್ನ ದೀರ್ಘಕಾಲದ ರಾಜಕೀಯ ಸಂಬಂಧ ಬಿಟ್ಟು ಟಿವಿಕೆ ಕಡೆ ಸಾಗಿರುವುದು ತಮ್ಮ ರಾಜಕೀಯ ಲಾಭದ ಲೆಕ್ಕಾಚಾರದಿಂದಲೇ ಎಂದು ಹೇಳಿದ ಅವರು, “ಕಾಲವೇ ಎಲ್ಲಕ್ಕೂ ಉತ್ತರ ನೀಡಲಿದೆ” ಎಂದಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am