ಬ್ರೇಕಿಂಗ್ ನ್ಯೂಸ್
11-05-26 02:14 pm HK News Staffer ದೇಶ - ವಿದೇಶ
ಇಸ್ಲಮಾಬಾದ್, ಮೇ 11: ಅಫ್ಘನಿಸ್ತಾನ ಗಡಿಭಾಗ ವಾಯುವ್ಯ ಪಾಕಿಸ್ತಾನದಲ್ಲಿ ಪೊಲೀಸ್ ಚೆಕ್ಪಾಯಿಂಟ್ ಒಂದರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 21 ಸೈನಿಕರು ಸಾವನ್ನಪ್ಪಿದ್ದು ಹಲವಾರು ಜನರು ಗಾಯಗೊಂಡಿದ್ದಾರೆ. ದಾಳಿಕೋರರು ಮೊದಲು ಪೊಲೀಸ್ ಚೆಕ್ ಪಾಯಿಂಟ್ನಲ್ಲಿ ಕಾರ್ ಬಾಂಬ್ ಸ್ಫೋಟಿಸಿದ್ದು ಬಳಿಕ ಗುಂಡಿನ ದಾಳಿ ನಡೆಸಿದರು. ದಾಳಿಯ ನಂತರ, ಪೊಲೀಸರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ದೋಚಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಇತ್ತೇಹಾದ್- ಉಲ್- ಮುಜಾಹಿದ್ದೀನ್ ಪಾಕಿಸ್ತಾನ್ ಎಂಬ ಹೊಸ ಉಗ್ರವಾದಿ ಸಂಘಟನೆಯು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಖೈಬರ್ ಪಖ್ತುಂಖ್ವಾ ಜಿಲ್ಲೆಯ ಬನ್ನು ಎಂಬಲ್ಲಿ ಭಾನುವಾರ ನಸುಕಿನಲ್ಲಿ ಈ ದಾಳಿ ನಡೆದಿದೆ. ಬನ್ನು ಅಫ್ಘಾನಿಸ್ತಾನದ ಗಡಿಯಲ್ಲಿರುವ ಪಾಕಿಸ್ತಾನಕ್ಕೆ ಸೇರಿದ ಪ್ರದೇಶವಾಗಿದೆ. ದಾಳಿಕೋರರು ತಮ್ಮ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದ ನಂತರ ಗಡಿಯನ್ನು ದಾಟಿ ಅಫ್ಘಾನಿಸ್ತಾನಕ್ಕೆ ಪಲಾಯನ ಮಾಡಿರಬಹುದು ಎಂದು ಶಂಕಿಸಲಾಗಿದೆ. ಈ ಪ್ರದೇಶವನ್ನು ಉಗ್ರರ ಭದ್ರಕೋಟೆ ಎಂದು ಪರಿಗಣಿಸಲಾಗಿದ್ದು, ಪೊಲೀಸ್, ಮಿಲಿಟರಿ ಮತ್ತು ಅರೆಸೈನಿಕ ಪಡೆಗಳ ಮೇಲೆ ಆಗಿಂದಾಗ್ಗೆ ದಾಳಿ ನಡೆಸುತ್ತಿದ್ದಾರೆ.
ಬನ್ನು ಪೊಲೀಸ್ ಅಧಿಕಾರಿ ಜಾಹಿದ್ ಖಾನ್ ಮಾತನಾಡಿ, ಭದ್ರತಾ ತಪಾಸಣಾ ಕೇಂದ್ರದ ಬಳಿ ಆತ್ಮಾಹುತಿ ಬಾಂಬರ್ ಇದ್ದ ಕಾರು ಸ್ಫೋಟವಾಗಿದೆ. ಬಳಿಕ ಹಲವಾರು ದಾಳಿಕೋರರು ಗುಂಡಿನ ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಹಲವಾರು ಸ್ಫೋಟಗಳು ಕೇಳಿಬಂದವು. ಸ್ಫೋಟವು ಎಷ್ಟು ಪ್ರಬಲವಾಗಿತ್ತೆಂದರೆ ಚೆಕ್ಪಾಯಿಂಟ್ ಕಟ್ಟಡ ಪೂರ್ತಿ ಕುಸಿದು ಬಿದ್ದಿದೆ ಎಂದು ಹೇಳಿದರು.
ಸ್ಫೋಟಕಗಳಿಂದ ತುಂಬಿದ ವಾಹನದಿಂದ ಪೊಲೀಸ್ ತಪಾಸಣಾ ಕೇಂದ್ರದ ಮೇಲೆ ಡಿಕ್ಕಿ ಪಡಿಸಲಾಗಿದೆ. ಪ್ರಬಲ ಸ್ಫೋಟದ ನಂತರ, ಪೊಲೀಸ್ ತಪಾಸಣಾ ಕೇಂದ್ರದ ಮೇಲೆ ದಾಳಿ ನಡೆಸಲಾಯಿತು. ದಾಳಿಯಲ್ಲಿ ಕನಿಷ್ಠ 21 ಸೈನಿಕರು ಸಾವನ್ನಪ್ಪಿದ್ದಾರೆ. ದಾಳಿಕೋರರು ಡ್ರೋನ್ಗಳನ್ನು ಸಹ ಬಳಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಫೋಟವು ಹತ್ತಿರದ ವಸತಿ ಪ್ರದೇಶಗಳಿಗೆ ವ್ಯಾಪಕ ಹಾನಿಯನ್ನುಂಟು ಮಾಡಿದ್ದು ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಿಂದ ರಕ್ಷಣಾ ಸಂಸ್ಥೆಗಳು ಮತ್ತು ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಬನ್ನುವಿನ ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am