ಬ್ರೇಕಿಂಗ್ ನ್ಯೂಸ್
12-05-26 08:01 pm HK News Desk ದೇಶ - ವಿದೇಶ
ನವದೆಹಲಿ, ಮೇ 12: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ಮೇ 3ರಂದು ನಡೆದಿದ್ದ ನೀಟ್ ಯುಜಿ (NEET UG 2026) ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ರದ್ದುಗೊಳಿಸಿದೆ. ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್ಟಿಎ ತಿಳಿಸಿದೆ. ಶೀಘ್ರದಲ್ಲೇ ಪರೀಕ್ಷೆಗೆ ಹೊಸ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದೆ.
ಮೇ 3 ರಂದು ನಡೆದ ಪರೀಕ್ಷೆಯ ಪ್ರಶ್ನೆಪತ್ರಿಕೆ ರಾಜಸ್ಥಾನದಲ್ಲಿ ಸೋರಿಕೆಯಾಗಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಭುಗಿಲೆದ್ದಿತ್ತು. ಗೆಸ್ ಪತ್ರಿಕೆಯಲ್ಲಿದ್ದ ಸುಮಾರು 100ಕ್ಕೂ ಹೆಚ್ಚು ಜೀವಶಾಸ್ತ್ರ ಮತ್ತು ರಸಾಯನಶಾಸ್ತ್ರದ ಪ್ರಶ್ನೆಗಳು ಅಸಲಿ ಪ್ರಶ್ನೆ ಪತ್ರಿಕೆಗೆ ಹೋಲಿಕೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಕಳೆದ ಮೇ 3, 2026 ರಂದು ಭಾನುವಾರ ದೇಶಾದ್ಯಂತ ನೀಟ್ ಪರೀಕ್ಷೆ ನಡೆದಿತ್ತು. ಆದರೆ ರಾಜಸ್ಥಾನದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಹರಿದಾಡಿದ್ದವು. ಈ ಬಗ್ಗೆ ಮೇ 8 ರಂದು ಎನ್ಟಿಎ ಕೇಂದ್ರ ತನಿಖಾ ಸಂಸ್ಥೆಗಳಿಗೆ ಸ್ವತಂತ್ರ ಪರಿಶೀಲನೆ ನಡೆಸುವಂತೆ ಮನವಿ ಮಾಡಿತ್ತು.
ತನಿಖಾ ಸಂಸ್ಥೆಗಳು ಮತ್ತು ಕಾನೂನು ಜಾರಿ ಸಂಸ್ಥೆಗಳು ನೀಡಿದ ವರದಿಯನ್ನಾಧರಿಸಿ, ಕೇಂದ್ರ ಸರ್ಕಾರ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ. ಹೀಗಾಗಿ ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿದೆ. ಇದೇ ವೇಳೆ, ಪ್ರಕರಣ ಬಗ್ಗೆ ಸಮಗ್ರ ತನಿಖೆಗಾಗಿ ಸಿಬಿಐಗೆ ಹೊಣೆ ವಹಿಸಲಾಗಿದೆ.
ದೆಹಲಿಯಲ್ಲಿ ಎನ್ಎಸ್ ಯುಐ ಪ್ರತಿಭಟನೆ
ಇದೇ ವೇಳೆ, ಕಾಂಗ್ರೆಸ್ನ ವಿದ್ಯಾರ್ಥಿ ವಿಭಾಗವಾದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್ಯುಐ) ನವದೆಹಲಿಯ ಶಾಸ್ತ್ರಿ ಭವನದ ಹೊರಗೆ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿತು. ನೀಟ್ ಪರೀಕ್ಷೆಯಲ್ಲಿ "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ" "ಪತ್ರಿಕೆ ಸೋರಿಕೆ, ಮೋದಿ ಸರ್ಕಾರ ದುರ್ಬಲ" ಮತ್ತು "ವೈದ್ಯರ ಪದವಿ ಮಾರಾಟಕ್ಕಿದೆ" ಎಂದು ಬರೆದಿರುವ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am