ಬ್ರೇಕಿಂಗ್ ನ್ಯೂಸ್
13-05-26 02:26 pm HK News Staffer ದೇಶ - ವಿದೇಶ
ಚೆನ್ನೈ, ಮೇ 13: ತಮಿಳುನಾಡು ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ವಿಶ್ವಾಸಮತ ಪರೀಕ್ಷೆಯಲ್ಲಿ ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ ಭರ್ಜರಿ ಗೆಲುವು ಸಾಧಿಸಿದೆ. ತಮಿಳುನಾಡು ವಿಧಾನಸಭೆಯ ಮೂರನೇ ದಿನದ ಅಧಿವೇಶನದಲ್ಲಿ ಸಿಎಂ ವಿಜಯ್ ಮಂಡಿಸಿದ ವಿಶ್ವಾಸಮತ ನಿರ್ಣಯಕ್ಕೆ ಕಾಂಗ್ರೆಸ್, ಸಿಪಿಐ, ಸಿಪಿಐಎಂ, ವಿಸಿಕೆ ಸೇರಿದಂತೆ ಹಲವು ಮಿತ್ರಪಕ್ಷಗಳು ಬೆಂಬಲ ಸೂಚಿಸಿವೆ.
233 ಸದಸ್ಯರ ವಿಧಾನಸಭೆಯಲ್ಲಿ ನಡೆದ ಮತದಾನದಲ್ಲಿ 144 ಶಾಸಕರು ಸರ್ಕಾರದ ಪರವಾಗಿ ಮತ ಚಲಾಯಿಸಿದರೆ, 22 ಸದಸ್ಯರು ವಿರೋಧಿಸಿದರು. ಐದು ಮಂದಿ ತಟಸ್ಥವಾಗಿ ಉಳಿದರು. ವಿಶೇಷವೆಂದರೆ, ಎಐಎಡಿಎಂಕೆಯ 25 ಶಾಸಕರು ಕೂಡ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿ ಅಚ್ಚರಿ ಮೂಡಿಸಿದ್ದಾರೆ.
ಡಿಎಂಕೆ ವಾಕ್‌ಔಟ್;
ವಿಶ್ವಾಸಮತ ಯಾಚನೆ ವೇಳೆ ಪ್ರತಿಪಕ್ಷ ಡಿಎಂಕೆ ಮತದಾನದಿಂದ ದೂರ ಉಳಿದಿದ್ದು, ಉದಯನಿಧಿ ಸ್ಟಾಲಿನ್ ನೇತೃತ್ವದ ಪಕ್ಷದ ಸದಸ್ಯರು ಸದನದಿಂದ ವಾಕ್‌ಔಟ್ ನಡೆಸಿದರು. ಇದರಿಂದ ವಿಧಾನಸಭೆಯಲ್ಲಿ ರಾಜಕೀಯ ಚರ್ಚೆಗಳು ಮತ್ತಷ್ಟು ತೀವ್ರಗೊಂಡವು.
ಸರ್ಕಾರ ರಚನೆಗೆ ಭಾರಿ ರಾಜಕೀಯ ಕಸರತ್ತು;
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ 108 ಸ್ಥಾನಗಳನ್ನು ಗೆದ್ದು ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಿದ್ದ ಸಂಖ್ಯಾಬಲ ಕೊರತೆಯಿಂದ ಸರ್ಕಾರ ರಚನೆ ಕುತೂಹಲಕ್ಕೆ ಕಾರಣವಾಗಿತ್ತು. ಆರಂಭದಲ್ಲಿ ಕಾಂಗ್ರೆಸ್ ಬೆಂಬಲ ಘೋಷಿಸಿದ್ದು, ಬಳಿಕ ಎಡಪಕ್ಷಗಳು, ವಿಸಿಕೆ ಮತ್ತು ಐಯುಎಂಎಲ್ ಸೇರಿದಂತೆ ಹಲವು ಪಕ್ಷಗಳು ವಿಜಯ್ ಪರ ನಿಂತಿದ್ದವು.
ರಾಜ್ಯಪಾಲರು ಬಹುಮತದ ಬೆಂಬಲ ತೋರಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಟಿವಿಕೆ ಪಕ್ಷ ತೀವ್ರ ರಾಜಕೀಯ ಮಾತುಕತೆ ನಡೆಸಿ ಕೊನೆಗೂ ಬೆಂಬಲ ಪಡೆದುಕೊಂಡಿತ್ತು. ಇದರ ಬೆನ್ನಲ್ಲೇ ಮೇ 10ರಂದು ಜೋಸೆಫ್ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಎಐಎಡಿಎಂಕೆಯಲ್ಲಿ ಬಿರುಕು?
ಚುನಾವಣಾ ಸೋಲಿನ ಬಳಿಕ ಎಐಎಡಿಎಂಕೆ ಒಳಜಗಳದಲ್ಲೇ ಸಿಲುಕಿದ್ದು, ಪಕ್ಷ ಎರಡು ಬಣಗಳಾಗಿ ವಿಭಜನೆಯಾದ ಲಕ್ಷಣಗಳು ಸ್ಪಷ್ಟವಾಗಿವೆ. ಸಿವಿ ಷಣ್ಮುಗಂ ಮತ್ತು ಎಸ್‌ಪಿ ವೇಲುಮಣಿ ನೇತೃತ್ವದ 25 ಶಾಸಕರು ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿದರೆ, ಇಪಿಎಸ್ ಬಣ ವಿಶ್ವಾಸಮತಕ್ಕೆ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು. ವಿಧಾನಸಭೆಯ ಮೊದಲ ದಿನವೇ ಎರಡೂ ಬಣಗಳು ಪ್ರತ್ಯೇಕವಾಗಿ ಸದನಕ್ಕೆ ಆಗಮಿಸಿದ್ದವು.
ಸಚಿವ ಸಂಪುಟ ವಿಸ್ತರಣೆಯ ಚರ್ಚೆ
ವಿಶ್ವಾಸಮತ ಯಾಚನೆಗೂ ಮುನ್ನ ವಿಜಯ್ ಪನೈಯೂರಿನಲ್ಲಿರುವ ಟಿವಿಕೆ ಪ್ರಧಾನ ಕಚೇರಿಯಲ್ಲಿ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿದ್ದರು. ಈ ವೇಳೆ ಸಚಿವ ಸಂಪುಟ ವಿಸ್ತರಣೆ ಹಾಗೂ ಮಿತ್ರಪಕ್ಷಗಳಿಗೆ ಸ್ಥಾನ ಹಂಚಿಕೆ ಕುರಿತು ಚರ್ಚೆ ನಡೆದಿರುವ ಮಾಹಿತಿ ಲಭ್ಯವಾಗಿದೆ.
ರಾಜಕೀಯದಲ್ಲಿ ಹೊಸ ಅಧ್ಯಾಯ;
ಚಿತ್ರರಂಗದಿಂದ ರಾಜಕೀಯಕ್ಕೆ ಬಂದ ವಿಜಯ್ ಅವರ ವೇಗದ ಏರಿಕೆ ಈಗ ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯವನ್ನೇ ಸೃಷ್ಟಿಸಿದೆ. ಬಹುಮತದ ಸವಾಲು, ಮೈತ್ರಿ ರಾಜಕೀಯ ಮತ್ತು ವಿರೋಧ ಪಕ್ಷಗಳ ಒತ್ತಡದ ನಡುವೆ ವಿಜಯ್ ಸರ್ಕಾರ ವಿಶ್ವಾಸಮತ ಗೆಲ್ಲುವ ಮೂಲಕ ಆಡಳಿತಕ್ಕೆ ಬಲಿಷ್ಠ ಆರಂಭ ನೀಡಿದೆ. ಮುಂದಿನ ದಿನಗಳಲ್ಲಿ ಈ ಸರ್ಕಾರ ಜನರ ನಿರೀಕ್ಷೆಗಳನ್ನು ಎಷ್ಟು ಮಟ್ಟಿಗೆ ಈಡೇರಿಸುತ್ತದೆ ಎಂಬುದು ಈಗ ಕುತೂಹಲದ ವಿಷಯವಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am