ಬ್ರೇಕಿಂಗ್ ನ್ಯೂಸ್
14-05-26 12:36 pm HK News Staffer ದೇಶ - ವಿದೇಶ
ನವದೆಹಲಿ, ಮೇ 14: ಹತ್ತು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಾಕ್ಕೆ ಕೊನೆಗೂ ತೆರೆ ಬಿದ್ದಿದ್ದು ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರಂತರ ಸಭೆಗಳನ್ನು ನಡೆಸಿದ ಬಳಿಕ ವಿ.ಡಿ. ಸತೀಶನ್ ಹೆಸರನ್ನು ಅಂತಿಮಗೊಳಿಸಿದ್ದಾರೆ. ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ 102 ಸ್ಥಾನಗಳೊಂದಿಗೆ ಭರ್ಜರಿ ಬಹುಮತ ಪಡೆದಿದ್ದರೂ, ಮುಖ್ಯಮಂತ್ರಿ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ. ಸಿಎಂ ಗಾದಿಗಾಗಿ ಪಕ್ಷದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮ ನಿರ್ಧಾರ ಕೈಗೊಳ್ಳಲು ಭಾರೀ ಕಸರತ್ತು ನಡೆಸಿದ ಹೈಕಮಾಂಡ್ ನಾಯಕರು ಕಡೆಗೂ ಕೇರಳದ ಕೈ ನಾಯಕರ ಮಾತಿಗೆ ಬೆಲೆ ನೀಡಿ ವಿ.ಡಿ. ಸತೀಶನ್ ಅವರನ್ನೇ ಅಂತಿಮಗೊಳಿಸಿದ್ದಾರೆ.
ಯುಡಿಎಫ್ ಮೈತ್ರಿಕೂಟದ ಪ್ರಮುಖ ಪಾಲುದಾರ ಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ವಿ.ಡಿ. ಸತೀಶನ್ ಅವರ ಆಯ್ಕೆಗೆ ಪ್ರಬಲ ಬೆಂಬಲ ವ್ಯಕ್ತಪಡಿಸಿತ್ತು. ಇದಲ್ಲದೆ, ವಯನಾಡ್ ಕಾಂಗ್ರೆಸ್ ಕಚೇರಿ ಮುಂದೆಯೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ವಿರುದ್ಧ ಪೋಸ್ಟರ್ ಗಳನ್ನು ಹಾಕಿ ಇನ್ನೆಂದೂ ನೀವು ಇಲ್ಲಿಂದ ಆಯ್ಕೆ ಆಗಲು ಸಾಧ್ಯವಿಲ್ಲ ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿತ್ತು.
ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೆಸಿ ವೇಣುಗೋಪಾಲ್ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಶಾಸಕರ ಬೆಂಬಲ ಹಾಗೂ ಹೈಕಮಾಂಡ್ ಒಲವು ಇವರ ಪರ ಹೆಚ್ಚಾಗಿತ್ತು. ಆದರೆ ರಾಜ್ಯದಲ್ಲಿ ಮೈತ್ರಿ ಪಕ್ಷಗಳು ಮತ್ತು ಸ್ಥಳೀಯ ಮುಖಂಡರು ವೇಣು ಪರವಾಗಿ ಇರಲಿಲ್ಲ. ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಕಳೆದ ಐದು ವರ್ಷಗಳಿಂದ ಎಲ್ಡಿಎಫ್ ಸರ್ಕಾರದ ವಿರುದ್ಧ ಮುಂಚೂಣಿಯಲ್ಲಿ ಹೋರಾಡಿದ್ದ ವಿ.ಡಿ. ಸತೀಶನ್ ತನಗೆ ಸಿಎಂ ಪಟ್ಟ ನೀಡದಿದ್ದರೆ ಬೇರೆ ಯಾವುದೇ ಸಚಿವ ಸ್ಥಾನ ಬೇಡ ಎಂಬ ಬಿಗಿ ನಿಲುವನ್ನು ತಳೆದಿದ್ದರು.
ಕಾಂಗ್ರೆಸ್ನ ಮತ್ತೊಬ್ಬ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಸಹ ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಶಾಸಕರ ಬೆಂಬಲ ವಿ.ಡಿ. ಸತೀಶನ್ ಮತ್ತು ಕೆಸಿ ವೇಣುಗೋಪಾಲ್ ಅವರಿಗೆ ಇದ್ದ ಕಾರಣ ಸಿಎಂ ರೇಸ್ನಿಂದ ಹಿಂದೆ ಸರಿದಿದ್ದರು. ಇವರಲ್ಲಿ ಯಾರನ್ನು ಆಯ್ಕೆ ಮಾಡಿದರೂ ಬಣ ರಾಜಕೀಯ ತೀವ್ರಗೊಳ್ಳುವ ಸಾಧ್ಯತೆ ಇದ್ದುದರಿಂದ, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಸೂತ್ರಕ್ಕಾಗಿ ಹೈಕಮಾಂಡ್ ಹೆಣಗಾಟ ನಡೆಸಿತ್ತು. ಸಿಎಂ ಆಯ್ಕೆ ವಿಳಂಬವಾಗುತ್ತಿರುವುದಕ್ಕೆ ಬೇಸತ್ತು ವಯನಾಡ್ ಸೇರಿದಂತೆ ಹಲವು ಭಾಗಗಳಲ್ಲಿ ನಾಯಕರ ಪರ-ವಿರೋಧದ ಪೋಸ್ಟರ್ಗಳು ಪ್ರತ್ಯಕ್ಷವಾಗುವ ಮೂಲಕ ಕಾಂಗ್ರೆಸ್ನ ಒಳಜಗಳ ಬೀದಿಗೆ ಬಂದಿತ್ತು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am