ಬ್ರೇಕಿಂಗ್ ನ್ಯೂಸ್
23-05-26 08:47 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 23: ಕರ್ನಾಟಕದಿಂದ ನಾಲ್ಕು ರಾಜ್ಯಸಭಾ ಸ್ಥಾನಗಳ ಆಯ್ಕೆಗೆ ಚುನಾವಣೆ ಘೋಷಣೆಯಾಗಿದ್ದು, ಖಾಲಿಯಾಗುವ ಸ್ಥಾನಗಳ ಪೈಕಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರಮುಖರು. ಖರ್ಗೆ ಅವರ ಪುನರಾಯ್ಕೆ ಖಚಿತವಾಗಿದ್ದು ಈ ಹಿಂದೆ ಕಾಂಗ್ರೆಸ್ ಬೆಂಬಲದಲ್ಲಿ ಆಯ್ಕೆಯಾಗಿದ್ದ ದೇವೇಗೌಡರು ಈ ಬಾರಿ ಎನ್‌ಡಿಎ ಅಭ್ಯರ್ಥಿಯಾಗಿ ಪುನರಾಯ್ಕೆ ಆಗುತ್ತಾರಾ ಎಂಬುದು ಚರ್ಚೆಗೆ ಗ್ರಾಸವಾಗಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ನೇತೃತ್ವದಲ್ಲಿ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಮತ್ತು ಪಕ್ಷದ ಹಿರಿಯ ನಾಯಕ ನಿರ್ಮಲ್ ಕುಮಾರ್ ಸುರಾನಾ ಹೆಸರನ್ನು ಪ್ರಸ್ತಾಪಿಸಲಾಗಿದೆ. ಈ ನಡುವೆ ದೇವೇಗೌಡರ ಪುನರಾಯ್ಕೆ ಕುರಿತು ಪ್ರತಿಕ್ರಿಯಿಸಿದ ಅಗರ್ವಾಲ್, ಆ ಕುರಿತ ಅಂತಿಮ ತೀರ್ಮಾನವನ್ನು ಪಕ್ಷದ ಕೇಂದ್ರ ಹೈಕಮಾಂಡ್ ತೆಗೆದುಕೊಳ್ಳುವುದರಿಂದ ಸದ್ಯಕ್ಕೆ ಅವರ ಹೆಸರನ್ನು ಪ್ರಸ್ತಾಪಿಸಿಲ್ಲ ಎಂದು ಹೇಳಿದ್ದಾರೆ.
ಹಿಂದಿನ ಚುನಾವಣೆಯಲ್ಲಿ ದೇವೇಗೌಡರು ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮೇಲ್ಮನೆಗೆ ಆಯ್ಕೆಯಾಗಿದ್ದರು. ಆದರೆ, 2024ರ ಲೋಕಸಭಾ ಚುನಾವಣೆ ವೇಳೆಗೆ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಕೈಜೋಡಿಸಿದ್ದರಿಂದ ರಾಜಕೀಯ ಸಮೀಕರಣಗಳು ಬದಲಾಗಿವೆ. ಈಗ ದೇವೇಗೌಡರು ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಜೊತೆಗೆ ನಂಟು ಹೊಂದಿರುವುದು ಮತ್ತು ರಾಜ್ಯದಲ್ಲಿ ಪ್ರಭಾವಿ ಸಮುದಾಯವನ್ನು ಪ್ರತಿನಿಧಿಸುವುದರಿಂದ ಮತ್ತೊಮ್ಮೆ ಪರಿಗಣಿಸುವ ಸಾಧ್ಯತೆ ಹೆಚ್ಚಿದೆ.
93 ವರ್ಷದ ದೇವೇಗೌಡರು ಹಾಲಿ ರಾಜಕಾರಣದಲ್ಲಿ ಅತ್ಯಂತ ಹಿರಿಯ ವ್ಯಕ್ತಿಯಾಗಿದ್ದು ಬಿಜೆಪಿ ಬೆಂಬಲದಲ್ಲಿ ರಾಜ್ಯಸಭೆ ಸದಸ್ಯರಾದರೆ ಅದರಿಂದ ರಾಜಕೀಯ ಲಾಭದ ಲೆಕ್ಕಾಚಾರವೂ ಕೇಳಿಬಂದಿದೆ. ಸದ್ಯದಲ್ಲೇ ಗ್ರೇಟರ್ ಬೆಂಗಳೂರು, ಅಥಾರಿಟಿ ಅಡಿಯ ಐದು ಮಹಾನಗರ ಪಾಲಿಕೆಗಳು, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಯಲಿದ್ದು ಅದರಲ್ಲಿ ಲಾಭ ಮಾಡಿಕೊಳ್ಳುವ ಲೆಕ್ಕಾಚಾರ ಇದೆ. ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯದ ಮೇಲೆ ದೇವೇಗೌಡರು ಗಟ್ಟಿ ಪ್ರಭಾವ ಹೊಂದಿದ್ದಾರೆ.
ಪ್ರಸ್ತುತ ವಿಧಾನಸಭೆ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ ಸುಲಭವಾಗಿ ಒಂದು ಸ್ಥಾನ ಗೆಲ್ಲಬಹುದಾಗಿದೆ. ರಾಜ್ಯ ಬಿಜೆಪಿಯಿಂದ ಒಕ್ಕಲಿಗ ಸಮುದಾಯದ ಡಿ.ವಿ. ಸದಾನಂದ ಗೌಡ ಅವರಿಗೆ ಟಿಕೆಟ್ ನೀಡುವಂತೆ ಶಿಫಾರಸು ಮಾಡಲಾಗಿದೆ. ಆದರೆ ಪಕ್ಷದ ಹೈಕಮಾಂಡ್ ದೇವೇಗೌಡರಿಗೆ ಅಥವಾ ಇನ್ಯಾರೋ ಅನಿರೀಕ್ಷಿತ ಅಭ್ಯರ್ಥಿ ಘೋಷಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.
ಬಿಜೆಪಿಯಿಂದ ಕಳೆದ ಬಾರಿ ಆಯ್ಕೆಗೊಂಡಿದ್ದ ಈರಣ್ಣ ಕಡಾಡಿ ಮತ್ತು ಕೆ. ನಾರಾಯಣ್ ಅದೇ ದಿನ ನಿವೃತ್ತರಾಗುತ್ತಿದ್ದಾರೆ. ನಾಮಪತ್ರ ಸಲ್ಲಿಕೆಗೆ ಜೂನ್ 8 ಕೊನೆಯ ದಿನವಾಗಿದ್ದು, ಅಷ್ಟರೊಳಗೆ ಅಭ್ಯರ್ಥಿ ಘೋಷಣೆ ಆಗಬೇಕಷ್ಟೆ. ನಾಲ್ಕು ಸ್ಥಾನಗಳಲ್ಲಿ ಕಾಂಗ್ರೆಸ್ ಮೂರು ಸ್ಥಾನಗಳನ್ನು ಮತ್ತು ಎನ್‌ಡಿಎ ಒಂದು ಸ್ಥಾನವನ್ನು ಗೆಲ್ಲಬಹುದು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
16-09-26 10:51 am
HK News Staffer
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm