ಬ್ರೇಕಿಂಗ್ ನ್ಯೂಸ್
26-05-26 12:50 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 26: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 'ಗೃಹಲಕ್ಷ್ಮಿ' ಯೋಜನೆಯಲ್ಲಿ ತಂತ್ರಜ್ಞಾನ ಆಧಾರಿತ ಬದಲಾವಣೆ ತರಲು ಸರಕಾರ ಮುಂದಾಗಿದೆ. ಯೋಜನೆ ದುರ್ಬಳಕೆ ಹಾಗೂ ಅನರ್ಹರಿಗೆ ಹಣ ಸಂದಾಯವಾಗುವುದನ್ನು ತಡೆಗಟ್ಟಲು ಇನ್ಮುಂದೆ 'ಒನ್-ಟೈಮ್ ಬಯೋಮೆಟ್ರಿಕ್' ವ್ಯವಸ್ಥೆಯನ್ನು ಜಾರಿಗೆ ತರಲಿದೆ.
ಪ್ರಸ್ತುತ ಯೋಜನೆಯ ಲಾಭ ಪಡೆಯುತ್ತಿರುವ ಎಲ್ಲ ಫಲಾನುಭವಿಗಳು ತಮ್ಮ ಖಾತೆಯನ್ನು ಬಯೋಮೆಟ್ರಿಕ್ ಹಾಗೂ ಮೊಬೈಲ್ ಸಂಖ್ಯೆಯೊಂದಿಗೆ ಮರು-ನೋಂದಣಿ (ನವೀಕರಣ) ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ ಬ್ಯಾಂಕ್ ಖಾತೆಗೆ ಹಣ ಜಮೆಯಾಗುವುದಿಲ್ಲ. ಈ ಕುರಿತು ರಾಜ್ಯ ಸರಕಾರ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಿದೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ನೋಂದಣಿಗೊಂಡ ಲಕ್ಷಾಂತರ ಫಲಾನುಭವಿಗಳು ನಿಧನರಾಗಿದ್ದಾರೆ. ಎರಡು ಲಕ್ಷ ಮಂದಿ ಮೃತಪಟ್ಟಿದ್ದರೂ ಫಲಾನುಭವಿಗಳಾಗಿ ಯೋಜನೆ ಲಾಭ ಪಡೆಯುತ್ತಿದ್ದಾರೆ. 50 ಸಾವಿರಕ್ಕೂ ಹೆಚ್ಚು ಆದಾಯ ತೆರಿಗೆ ಪಾವತಿದಾರರು ಯೋಜನೆಯ ಲಾಭ ಪಡೆಯುತ್ತಿದ್ದರು. ಕೆಲ ಫಲಾನುಭವಿಗಳ ಖಾತೆಗೆ ಸಂದಾಯವಾದ ಗೃಹಲಕ್ಷ್ಮಿ ಹಣ ಈ ಮೊದಲು ಮಾಡಿರುವ ಸಾಲಕ್ಕೆ ಜಮೆಯಾಗುತ್ತಿದೆ. ಕೆಲವರ ಮೊಬೈಲ್ ಸಂಖ್ಯೆ ಕೂಡ ಬದಲಾಗಿದೆ. ಹೀಗಾಗಿ, ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಲಾಭ ಸಿಗಲಿ ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಯ ಖಾತೆಗಳನ್ನು ಮತ್ತೊಮ್ಮೆ ನವೀಕರಣ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ‌್ಕರ್ ತಿಳಿಸಿದ್ದಾರೆ.
ನಿಧನರಾದವರ ಖಾತೆಗೂ ಹಣ ಜಮೆಯಾಗುತ್ತಿತ್ತು. ಹೀಗಾಗಿ, ಗೃಹಲಕ್ಷ್ಮಿ ಫಲಾನುಭವಿಗಳು ಬದುಕಿರುವ ಬಗ್ಗೆ ಜೀವಿತ ಪ್ರಮಾಣ ಪತ್ರ ಸಲ್ಲಿಸಲು ನಿರ್ಧರಿಸಲಾಗಿತ್ತು. ಆದರೆ, ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದಕ್ಕೆ ಪರ್ಯಾಯವಾಗಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿ ಮಾಡಲಾಗಿದೆ.
ಫಲಾನುಭವಿಗಳು ತಮ್ಮ ಹತ್ತಿರದ ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಿಗೆ ಭೇಟಿ ನೀಡಿ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಹಾಗೂ ಬಯೋಮೆಟ್ರಿಕ್ ನೀಡುವ ಮೂಲಕ ತಮ್ಮ ಖಾತೆಯನ್ನು ಮರು ನೋಂದಣಿ ಮಾಡಿಸಿಕೊಳ್ಳಬಹುದು.
ಆದಾಯ ತೆರಿಗೆದಾರರಿಗೆ ಗೃಹಲಕ್ಷ್ಮಿ ಇಲ್ಲ
ಫಲಾನುಭವಿಗಳು ಎಪಿಎಲ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಹೊಂದಿರಬಹುದು. ಆದರೆ, ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಇಲಾಖೆ ಈಗಾಗಲೇ ಸುಮಾರು 2 ಲಕ್ಷಕ್ಕೂ ಅಧಿಕ ಕಾರ್ಡ್ಗಳನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಮಾಡಿದೆ. ಇವರಲ್ಲಿ ಬಹುತೇಕರು ಆದಾಯ ತೆರಿಗೆ ಪಾವತಿಸುತ್ತಿದ್ದುದರಿಂದ ಕಾರ್ಡ್ ರದ್ದು ಪಡಿಸಲಾಗಿದೆ. ಇವರಿಗೆ ಗೃಹಲಕ್ಷ್ಮಿ ಯೋಜನೆ ರದ್ದಾಗಲಿದೆ.
ಸದ್ಯಕ್ಕೆ ನಾವು ಯಾವುದೇ ಫಲಾನುಭವಿಯ ಹೆಸರನ್ನು ನೇರವಾಗಿ ಡಿಲೀಟ್ ಮಾಡುತ್ತಿಲ್ಲ. ಇದು ಕೇವಲ 'ಒನ್ ಟೈಮ್ ಬಯೋಮೆಟ್ರಿಕ್' ಪದ್ದತಿಯಾಗಿದೆ. ಮಹಿಳೆಯರು ಕೇವಲ ಒಂದು ಬಾರಿ ಬಯೋಮೆಟ್ರಿಕ್ ನೀಡಿದರೆ ಸಾಕು, ಹಣ ಎಂದಿನಂತೆ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ. ನವೀಕರಣ ಮಾಡದ ಖಾತೆಗಳು ಮಾತ್ರ ಸ್ವಯಂಚಾಲಿತವಾಗಿ ರದ್ದಾಗುತ್ತವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
16-09-26 10:51 am
HK News Staffer
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm