ಬ್ರೇಕಿಂಗ್ ನ್ಯೂಸ್
29-05-26 06:17 pm HK News Staffer ದೇಶ - ವಿದೇಶ
ಕೋಯಿಕ್ಕೋಡ್, ಮೇ 29: ಮರಣದಂಡನೆ ಶಿಕ್ಷೆಗೆ ಗುರಿಯಾಗಿ ಕಳೆದ 20 ವರ್ಷಗಳಿಂದ ಸೌದಿ ಅರೇಬಿಯಾದ ಜೈಲಿನಲ್ಲಿ ಬಂಧಿಯಾಗಿದ್ದ ಕೇರಳದ ಅಬ್ದುಲ್ ರಹೀಂ ಕೊನೆಗೂ ತಾಯ್ನಾಡಿಗೆ ಮರಳಿದ್ದಾರೆ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಕುಟುಂಬದವರನ್ನು ಸೇರಿಕೊಂಡಿರುವ ರಹೀಂ ಅವರ ಮರಳುವಿಕೆ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಿದೆ.
2006ರಲ್ಲಿ ಉದ್ಯೋಗ ಅರಸಿ ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ಗೆ ತೆರಳಿದ್ದ ರಹೀಂ, ಅಲ್ಲಿ ತಮ್ಮ ಮಾಲೀಕನ 17 ವರ್ಷದ ಪುತ್ರನ ಆರೈಕೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಆ ಬಾಲಕ ಕೃತಕ ಉಸಿರಾಟ ವ್ಯವಸ್ಥೆಯ ನೆರವಿನಿಂದ ಬದುಕುತ್ತಿದ್ದ. ಒಂದು ದಿನ ವಾಹನದಲ್ಲಿ ಕರೆದೊಯ್ಯುವಾಗ ಉಸಿರಾಟದ ಉಪಕರಣ ಕಳಚಿಬಿದ್ದ ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ರಹೀಂ ಅವರನ್ನು ಬಂಧಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ 2011ರಲ್ಲಿ ರಹೀಂ ಅವರಿಗೆ ಮರಣದಂಡನೆ ವಿಧಿಸಿತ್ತು. ಬಳಿಕ ಮೃತ ಬಾಲಕನ ಕುಟುಂಬವು 2024ರಲ್ಲಿ ₹34 ಕೋಟಿ ಬ್ಲಡ್‌ಮನಿ ನೀಡಿದರೆ ಕ್ಷಮಿಸಲು ಒಪ್ಪಿಗೆ ಸೂಚಿಸಿತು. ಆದರೆ ಅಷ್ಟೊಂದು ದೊಡ್ಡ ಮೊತ್ತವನ್ನು ಪಾವತಿಸುವ ಸಾಮರ್ಥ್ಯ ರಹೀಂ ಅವರ ಕುಟುಂಬಕ್ಕಿರಲಿಲ್ಲ.



ಈ ಹಿನ್ನೆಲೆಯಲ್ಲಿ ಕುಟುಂಬ ಸಾರ್ವಜನಿಕರ ನೆರವಿಗಾಗಿ ಮನವಿ ಮಾಡಿತ್ತು. ಜನರು, ಸಾಮಾಜಿಕ ಸಂಘಟನೆಗಳು ಹಾಗೂ ದಾನಿಗಳ ಸಹಕಾರದಿಂದ ಸುಮಾರು ₹47 ಕೋಟಿ ಸಂಗ್ರಹವಾಗಿದ್ದು, ಅದರಲ್ಲಿ ₹34 ಕೋಟಿಯನ್ನು ಮೃತ ಬಾಲಕನ ಕುಟುಂಬಕ್ಕೆ ಬ್ಲಡ್‌ಮನಿಯಾಗಿ ಪಾವತಿಸಲಾಯಿತು. ಉಳಿದ ಹಣವನ್ನು ಕಾನೂನು ಮತ್ತು ಇತರೆ ವೆಚ್ಚಗಳಿಗೆ ಬಳಸಲಾಗಿದೆ ಎಂದು ವರದಿಯಾಗಿದೆ.
20 ವರ್ಷಗಳ ಸುದೀರ್ಘ ಸೆರೆವಾಸದ ಬಳಿಕ ರಹೀಂ ಮೇ 20ರಂದು ಜೈಲಿನಿಂದ ಬಿಡುಗಡೆಯಾಗಿದ್ದು, ಗುರುವಾರ ಬೆಳಗ್ಗೆ ಕಲ್ಲಿಕೋಟೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಬೆಂಬಲಿಗರು ಭಾವಪೂರ್ಣ ಸ್ವಾಗತ ಕೋರಿದರು.
ತಾವು ಜೀವಂತವಾಗಿ ತಾಯ್ನಾಡಿಗೆ ಮರಳಲು ನೆರವಾದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದ ರಹೀಂ, "ಈ ಬೆಂಬಲ ಮತ್ತು ಪ್ರಾರ್ಥನೆಗಳನ್ನು ಜೀವನಪೂರ್ತಿ ಮರೆಯುವುದಿಲ್ಲ" ಎಂದು ಹೇಳಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
16-09-26 10:51 am
HK News Staffer
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm