ಬ್ರೇಕಿಂಗ್ ನ್ಯೂಸ್
14-06-26 04:49 pm HK News Staffer ದೇಶ - ವಿದೇಶ
ಗುವಾಹಟಿ, ಜೂನ್ 14: ಅಕ್ರಮ ವಲಸಿಗರು ಆಧಾರ್ ಕಾರ್ಡ್ ಪಡೆಯುವುದನ್ನು ತಡೆಯುವ ಉದ್ದೇಶದಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ್ ನೀಡುವುದನ್ನು ಸ್ಥಗಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ್ ನೀಡಲು ಅವಕಾಶ ಇರಲಿದೆ ಎಂದರು. ಅಂತಹ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳು ಅನುಮತಿಗಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಅರ್ಜಿದಾರರು ಆಧಾರ್ ಪಡೆಯಲು ಅರ್ಹರೇ ಎಂಬುದನ್ನು ಪರಿಶೀಲಿಸಿ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಆಧಾರ್ ನೋಂದಣಿ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ. ಕೆಲವು ಜಿಲ್ಲೆಗಳಲ್ಲಿ ಆಧಾರ್ ನೋಂದಣಿ ವ್ಯಾಪ್ತಿ ಶೇ.100ಕ್ಕಿಂತಲೂ ಹೆಚ್ಚಾಗಿದೆ ಎಂದು ಶರ್ಮಾ ತಿಳಿಸಿದರು. ನಿಗದಿತ ಜನಸಂಖ್ಯೆಗಿಂತ (ಶೇ.100ಕ್ಕಿಂತ) ಹೆಚ್ಚು ಆಧಾರ್ ಕಾರ್ಡ್ಗಳು ಹೇಗೆ ವಿತರಿಸಲ್ಪಟ್ಟಿವೆ ಮತ್ತು ಹೆಚ್ಚುವರಿ ಕಾರ್ಡ್ಗಳನ್ನು ಪಡೆಯುತ್ತಿರುವವರು ಯಾರು ಎಂಬುದನ್ನು ಪರಿಶೀಲಿಸಬೇಕಿದೆ. ಯಾವುದೇ ಅಕ್ರಮ ಬಾಂಗ್ಲಾದೇಶಿ ವಲಸಿಗರು ಆಧಾರ್ ಕಾರ್ಡ್ ಪಡೆಯದಂತೆ ನೋಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಅವರು ಹೇಳಿದರು.
ಆದರೂ, ಚಹಾ ತೋಟದ ಕಾರ್ಮಿಕ ಸಮುದಾಯ ಹಾಗೂ ಪರಿಶಿಷ್ಟ ಪಂಗಡಗಳ ಜನರಿಗೆ ಆಧಾರ್ ಕಾರ್ಡ್ ವಿತರಣೆಯನ್ನು ಮುಂದುವರಿಸಲಾಗುವುದು. ಈ ಸಮುದಾಯಗಳ ಅನೇಕ ಮಂದಿಗೆ ಇನ್ನೂ ಆಧಾರ್ ಕಾರ್ಡ್ ದೊರೆತಿಲ್ಲ ಎಂದು ಅವರು ಹೇಳಿದರು. ಇದರ ವಿನಾಯಿತಿ ಎಪ್ರಿಲ್ 1, 2027ರ ವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಆ ದಿನಾಂಕದ ನಂತರ ಈ ಸಮುದಾಯಗಳಿಗೆ ಸೇರಿದ 18 ವರ್ಷ ಮೇಲ್ಪಟ್ಟವರಿಗೂ ಆಧಾರ್ ಕಾರ್ಡ್ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಆಧಾರ್ ಕಾರ್ಡ್ ವಿತರಣೆಯಲ್ಲಿ ರಾಜ್ಯ ಸರ್ಕಾರ ‘ಅತ್ಯಂತ ಕಟ್ಟುನಿಟ್ಟಿನ’ ನಿಲುವು ಅನುಸರಿಸಲಿದೆ. ಅಸ್ಸಾಂನಲ್ಲಿ ಆಧಾರ್ ಕಾರ್ಡ್ ಪಡೆಯುವುದು ಸುಲಭವಾಗುವುದಿಲ್ಲ ಎಂದು ಶರ್ಮಾ ಈ ಹಿಂದೆಯೇ ಹೇಳಿದ್ದರು.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am