ಬ್ರೇಕಿಂಗ್ ನ್ಯೂಸ್
21-07-26 09:03 pm HK News Staffer ದೇಶ - ವಿದೇಶ
ನವದೆಹಲಿ, ಜುಲೈ 21: ನೀಟ್ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆಗೆ ಒತ್ತಾಯಿಸಿ, ಪ್ರಧಾನಿ ನಿವಾಸದ ಮುಂದೆ ಅಹೋರಾತ್ರಿ ಧರಣಿ ಕುಳಿತಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಅಖಿಲೇಶ್ ಯಾದವ್ ಸೇರಿ ವಿಪಕ್ಷ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಧರಣಿ ಕೈಬಿಡಲು ನಿರಾಕರಿಸಿದ ರಾಹುಲ್ ಅವರನ್ನು, ದೆಹಲಿ ಪೊಲೀಸರು ಬಲವಂತದಿಂದ ಎಬ್ಬಿಸಿ ಕರೆದೊಯ್ದಿದ್ದಾರೆ. ಈ ವೇಳೆ, ಸ್ಥಳದಲ್ಲಿ ತೀವ್ರ ಜಟಾಪಟಿ ನಡೆದಿದ್ದು ಪೊಲೀಸರು ಬಲವಂತವಾಗಿ ರಾಹುಲ್ ಗಾಂಧಿ ಎತ್ತುಕೊಂಡು ಹೋಗಿದ್ದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.






ಈ ಕುರಿತು ತನ್ನ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪಕ್ಷ, "ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ತೀವ್ರ ಖಂಡನೀಯ. ದೇಶದ ವಿಪಕ್ಷ ನಾಯಕನನ್ನು ಪೊಲೀಸರು ನಡೆಸಿಕೊಂಡ ರೀತಿ, ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ" ಎಂದು ತೀವ್ರ ಆಕ್ರೋಶ ಹೊರಹಾಕಿದೆ.
ಇದಕ್ಕೂ ಮುನ್ನ ಪೋಸ್ಟ್ ಹಾಕಿರುವ ರಾಹುಲ್ ಗಾಂಧಿ, ಭಾರತದ ಇತಿಹಾಸದಲ್ಲೇ ನರೇಂದ್ರ ಮೋದಿ ಅತ್ಯಂತ ಯುವಜನ ವಿರೋಧಿ ಪ್ರಧಾನಮಂತ್ರಿ" ಎಂದು ಆರೋಪಿಸಿದ್ದಾರಲ್ಲದೆ, "ನ್ಯಾಯಕ್ಕಾಗಿ ಧ್ವನಿ ಎತ್ತಿರುವ ವಿದ್ಯಾರ್ಥಿಗಳಿಗೆ ಉತ್ತರಗಳ ಬದಲು ಲಾಠಿ ಪೆಟ್ಟು ಮತ್ತು ಬಂಧನದ ಉತ್ತರ ಸಿಗುತ್ತಿದೆ" ಎಂದು ಟೀಕಿಸಿದ್ದಾರೆ. ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇದರ ಜೊತೆಗೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕೇಳುವುದಕ್ಕೂ ಪ್ರಧಾನಿ ಮೋದಿ ಸಿದ್ಧರಿಲ್ಲ ಎಂದು ಕಿಡಿಕಾರಿದ್ದಾರೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm