ಬ್ರೇಕಿಂಗ್ ನ್ಯೂಸ್
22-07-26 02:32 pm HK News Staffer ದೇಶ - ವಿದೇಶ
ನವದೆಹಲಿ, ಜುಲೈ 22: ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ CJP ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಲ್ಲಿಸಲಾದ ತುರ್ತು ಅರ್ಜಿಯನ್ನು ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠದ ಮುಂದೆ ವಕೀಲರು ತುರ್ತು ವಿಚಾರಣೆಗೆ ಮನವಿ ಸಲ್ಲಿಸಿ, ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗ ಹಾಗೂ ಲಾಠಿಚಾರ್ಜ್ ನಡೆಸಲಾಗಿದೆ ಎಂದು ವಾದಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ, "ನಮ್ಮ ಸಮಯವನ್ನೂ ನಿಮ್ಮ ಸಮಯವನ್ನೂ ವ್ಯರ್ಥ ಮಾಡಬೇಡಿ. ನಿಮ್ಮ ಸಮಯ ನಮ್ಮದಕ್ಕಿಂತ ಅಮೂಲ್ಯ" ಎಂದು ಹೇಳಿ ತುರ್ತು ವಿಚಾರಣೆಗೆ ಅವಕಾಶ ನಿರಾಕರಿಸಿದರು. ಪ್ರತಿಭಟನೆಗೆ ಸಂಬಂಧಿಸಿದ ವಿಡಿಯೊಗಳನ್ನು ವೀಕ್ಷಿಸುವ ಮನವಿಯನ್ನೂ ಪೀಠ ತಿರಸ್ಕರಿಸಿತು.
ನ್ಯಾಯಮೂರ್ತಿಗಳಾದ ಜೋಯ್ ಮಲ್ಯ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠ, ಈ ಹಂತದಲ್ಲಿ ಅರ್ಜಿಯನ್ನು ತುರ್ತಾಗಿ ಪಟ್ಟಿ ಮಾಡಲು ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿತು. ಈ ವೇಳೆ ಮುಖ್ಯ ನ್ಯಾಯಮೂರ್ತಿ, "ನಮಗೆ ವಿಡಿಯೊಗಳನ್ನು ನೋಡಲು ಆಸಕ್ತಿ ಇಲ್ಲ. ಅವನ್ನು ನೋಡಲು ನಮ್ಮ ಬಳಿ ಸಮಯವೂ ಇಲ್ಲ" ಎಂದು ಹೇಳಿ ಮುಂದಿನ ಪ್ರಕರಣದ ವಿಚಾರಣೆಗೆ ಮುಂದಾದರು.
NEET ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ CJP ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಸಂಸತ್ ಚಲೋ ಮೆರವಣಿಗೆ ನಡೆಸಿದ್ದರು. ಸಂಸತ್ ಕಡೆಗೆ ಮುನ್ನಡೆಯುತ್ತಿದ್ದ ಪ್ರತಿಭಟನಾಕಾರರನ್ನು ತಡೆಯಲು ದೆಹಲಿ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ, ಅಶ್ರುವಾಯು ಪ್ರಯೋಗ ಹಾಗೂ ಲಾಠಿಚಾರ್ಜ್ ನಡೆಸಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ವೇಳೆ ಹಲವರು ಗಾಯಗೊಂಡಿದ್ದು, ಘಟನೆಯ ಸಂಬಂಧ ಹಲವು ಎಫ್ಐಆರ್ಗಳನ್ನೂ ದಾಖಲಿಸಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm