ಬ್ರೇಕಿಂಗ್ ನ್ಯೂಸ್
01-08-26 02:48 pm HK News Staffer ದೇಶ - ವಿದೇಶ
ನವದೆಹಲಿ, ಆ.1: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿಯ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿ ದೇಶಾದ್ಯಂತ ವೈರಲ್ ಆಗಿ ಬಿಜೆಪಿಗರ ಆಕ್ರೋಶಕ್ಕೆ ತುತ್ತಾಗಿದ್ದ ಯುವತಿಯೊಬ್ಬಳು ವಿಡಿಯೋ ಮೂಲಕ ಇಡೀ ದೇಶದ ಕ್ಷಮೆ ಯಾಚಿಸಿದ್ದಾಳೆ.
ಜುಲೈ 23ರಂದು ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ವಿರುದ್ಧ ಕೀಳುಮಟ್ಟದ ಭಾಷೆ ಬಳಸಿದ ಆರೋಪದ ಮೇಲೆ ರುಚಿಕಾ ಸಿಂಗ್ ಎಂಬ ದೆಹಲಿಯದ್ದೇ ನಿವಾಸಿ ವಿದ್ಯಾರ್ಥಿನಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಯಾಚನೆಯ ವಿಡಿಯೋ ವೈರಲ್ ಆಗಿದ್ದು ತಾನು ಮಾಡಿದ ತಪ್ಪಿಗೆ ತೀವ್ರ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾಳೆ.
"ಪ್ರತಿಭಟನೆಯ ಸ್ಥಳದಲ್ಲಿ ಕೆಲವು ಜನರ ಪ್ರಭಾವಕ್ಕೆ ಒಳಗಾಗಿ ಪ್ರಧಾನಿಯವರ ಬಗ್ಗೆ ಕೆಟ್ಟ ಮಾತುಗಳನ್ನಾಡಿದ್ದೆ. ಇದು ನನ್ನ ಜೀವನದ ಮೊದಲ ಮತ್ತು ಕೊನೆಯ ತಪ್ಪಾಗಿದೆ. ನಾನು ಆಡಿದ ಮಾತುಗಳಿಗೆ ಇಡೀ ದೇಶದ ಜನತೆಯಲ್ಲಿ ಕ್ಷಮೆ ಯಾಚಿಸುತ್ತೇನೆ. ನನ್ನ ತಪ್ಪಿನಿಂದಾಗಿ ನನಗೇ ನಾಚಿಕೆಯಾಗುತ್ತಿದ್ದು, ಕನ್ನಡಿಯಲ್ಲಿ ನನ್ನನ್ನ ನಾನು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ಎಲ್ಲರೂ ನನ್ನನ್ನ ಕ್ಷಮಿಸಿ," ಎಂದು ವಿಡಿಯೋದಲ್ಲಿ ಮನವಿ ಮಾಡಿಕೊಂಡಿದ್ದಾಳೆ.
ಪ್ರಧಾನಿ ನಿಂದನೆ ವಿಚಾರದಲ್ಲಿ ನೋಯ್ಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಯುವತಿಯ ವಯಸ್ಸನ್ನ 25 ಎಂದು ಉಲ್ಲೇಖಿಸಲಾಗಿದೆ. ಆದರೆ, ಇದೀಗ ಬಿಡುಗಡೆಯಾಗಿರುವ ಕ್ಷಮೆಯಾಚನೆಯ ವಿಡಿಯೋದಲ್ಲಿ ಆಕೆ, "ನನಗೆ ಕೇವಲ 15 ವರ್ಷ, ತಿಳಿಯದೆ ತಪ್ಪು ಮಾಡಿದ್ದೇನೆ," ಎಂದು ಹೇಳಿಕೊಂಡಿರುವುದು ಹೊಸ ಗೊಂದಲಕ್ಕೆ ಕಾರಣವಾಗಿದೆ. ಸದ್ರಿ ಘಟನೆಯು ದೆಹಲಿ ವ್ಯಾಪ್ತಿಯಲ್ಲಿ ನಡೆದಿರುವುದರಿಂದ, ನೋಯ್ಡಾ ಪೊಲೀಸರು ಪ್ರಕರಣವನ್ನು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದು, ಪೊಲೀಸರು ವಿಡಿಯೋದ ನೈಜತೆ ಹಾಗೂ ಯುವತಿಯ ವಯಸ್ಸಿನ ಕುರಿತು ತನಿಖೆ ಮುಂದುವರಿಸಿದ್ದಾರೆ.
ವಿದ್ಯಾರ್ಥಿಗಳು ಅವಹೇಳನಕಾರಿ ಹೇಳಿಕೆ ಕೊಟ್ಟು ವಿಡಿಯೋ ವೈರಲ್ ಆಗಿರುವ ಕುರಿತು ಪರ- ವಿರೋಧ ಅಭಿಪ್ರಾಯ ಬಂದಿರುವಾಗಲೇ ಇನ್‌ಸ್ಟಾ ಗ್ರಾಮ್‌ನಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಘಟನೆಯಿಂದ ತಮಗೆ ನೋವು ಉಂಟಾಗಿದೆ ಎಂದು ಹೇಳಿದ್ದರು. "ಜಂತರ್ ಮಂತರ್‌ನಲ್ಲಿ ನನ್ನನ್ನು ಮತ್ತು ನನ್ನ ತಾಯಿಯನ್ನ ಅತ್ಯಂತ ಕೆಟ್ಟ ಭಾಷೆಯಿಂದ ನಿಂದಿಸಲಾಗಿದೆ. ನಾಗರಿಕ ಸಮಾಜದಲ್ಲಿ ಇಂತಹ ಮಾತುಗಳಿಗೆ ಜಾಗವಿಲ್ಲ. ಆದರೆ, ಇವರು ನಮ್ಮ ದಾರಿತಪ್ಪಿದ ಮಕ್ಕಳು. ಅವರಿಗೆ ಶಿಕ್ಷೆ ನೀಡುವ ಬದಲು ಸರಿಯಾದ ಮಾರ್ಗದರ್ಶನ ನೀಡುವುದು ನಮ್ಮ ಕರ್ತವ್ಯ. ನಾನು ಅವರನ್ನು ಕ್ಷಮಿಸಲು ಬಯಸುತ್ತೇನೆ ಮತ್ತು ಸಮಾಜವೂ ಅವರನ್ನು ಕ್ಷಮಿಸಬೇಕು," ಎಂದು ಪ್ರಧಾನಿ ಯುವಜನತೆಯ ಪರವಾಗಿ ನಿನ್ನೆ ರಾತ್ರಿ ವಿಡಿಯೋ ಮಾಡಿದ್ದರು.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm