ಬ್ರೇಕಿಂಗ್ ನ್ಯೂಸ್
05-08-26 08:36 pm HK News Staffer ದೇಶ - ವಿದೇಶ
ನವದೆಹಲಿ, ಆಗಸ್ಟ್ 5: ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ನೀಟ್ ಪರೀಕ್ಷೆ ವಿಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೇಸ್‌ಬುಕ್ ನಲ್ಲಿ ಹಾಕಿದ್ದ ಲೈವ್ ವಿಡಿಯೋವನ್ನು ಫೇಸ್ಬುಕ್ ಸ್ವತಃ ಕೆಲವು ಗಂಟೆಗಳ ಕಾಲ ತೆಗೆದುಹಾಕಿದ ಪ್ರಕರಣ ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಫೇಸ್ ಬುಕ್ ಮಾತೃಸಂಸ್ಥೆ ಮೆಟಾ ಕ್ಷಮೆಗೆ ಒತ್ತಾಯಿಸಲಾಗಿದೆ.
ವಿಡಿಯೋಗೆ ಅತಿ ಹೆಚ್ಚು ಸ್ಪಂದನೆ ವ್ಯಕ್ತವಾಗಿದ್ದರಿಂದ ಅದನ್ನು ತೆಗೆದು ಹಾಕಿದ ಕ್ರಮವನ್ನು ಗಂಭೀರ ಪರಿಗಣಿಸಿರುವ ಕೇಂದ್ರ ಸಂಸದೀಯ ಸಮಿತಿ, ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಇದಕ್ಕಾಗಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದೆ. ಮೂರು ದಿನಗಳ ಒಳಗೆ ಸ್ಪಷ್ಟನೆ ನೀಡದಿದ್ದರೆ ಅವರಿಗೆ ಲಭ್ಯವಿರುವ ಕಾನೂನು ರಕ್ಷಣೆ ಮತ್ತು ವಿನಾಯಿತಿಯನ್ನು ದೇಶದಲ್ಲಿ ಹಿಂಪಡೆಯುವ ಎಚ್ಚರಿಕೆ ನೀಡಿದೆ.
ಈ ಕುರಿತು ಸಂಸದೀಯ ಸಮಿತಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ (MeitY) ಪತ್ರ ಬರೆದಿದ್ದು, ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿದ್ಯಾರ್ಥಿಗಳು ಮತ್ತು ಜೆನ್ ಝೀ ಯುವಕರನ್ನು ಉದ್ದೇಶಿಸಿ ಮಾತನಾಡಿದ್ದ ವಿಡಿಯೋವನ್ನು ತೆಗೆದುಹಾಕಿರುವ ಕ್ರಮವನ್ನು ಸಮಿತಿ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದೆ.
ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅದರ ವಿರುದ್ಧ ಕೈಗೊಳ್ಳುತ್ತಿರುವ ಕಠಿಣ ಕ್ರಮಗಳ ಕುರಿತು ಪ್ರಧಾನಿ ಮೋದಿ ಮಾತನಾಡಿದ್ದ ವಿಡಿಯೋವನ್ನು ಫೇಸ್‌ಬುಕ್‌ನಿಂದ ಸುಮಾರು 5 ರಿಂದ 6 ಗಂಟೆಗಳ ಕಾಲ ತೆರವು ಮಾಡಲಾಗಿತ್ತು. ಆಕ್ಷೇಪದ ಬಳಿಕ ಅದನ್ನು ಮತ್ತೆ ಮರು ಸ್ಥಾಪಿಸಲಾಗಿತ್ತು.
ಇದೇ ವೇಳೆ, ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೂಗಲ್ ಇಂಡಿಯಾ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸಂಸದೀಯ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ವಂಚಕ ಆ್ಯಪ್‌ಗಳ ಮೂಲಕ ಹೂಡಿಕೆ ಮಾಡಿ 48 ಲಕ್ಷ ರೂ.ಗಿಂತ ಹೆಚ್ಚು ಹಣ ಕಳೆದುಕೊಂಡಿರುವುದಾಗಿ ದೂರುದಾರರು ಆರೋಪಿಸಿರುವ ಪ್ರಕರಣದ ಕುರಿತು ಚರ್ಚೆ ನಡೆಸಿದ ಬಳಿಕ ಈ ಸೂಚನೆ ನೀಡಲಾಗಿದೆ.
ಹೈದರಾಬಾದ್ ಸೈಬರ್ ಪೊಲೀಸರು ಸೈಬರ್ ವಂಚಕರೊಂದಿಗೆ ಗೂಗಲ್ ಇಂಡಿಯಾ ಮುಖ್ಯಸ್ಥರನ್ನು ಸಹ ಆರೋಪಿಯನ್ನಾಗಿ ಪರಿಗಣಿಸಿ ನಡೆಸಿದ ಕ್ರಮದ ಕುರಿತು ಸಮಿತಿ ಚರ್ಚಿಸಿದ್ದು, ಇದೇ ರೀತಿಯ ಕ್ರಮವನ್ನು ಭಾರತ ಸರ್ಕಾರವು ಗೂಗಲ್ ಇಂಡಿಯಾ ವಿರುದ್ಧವೂ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am