ಬ್ರೇಕಿಂಗ್ ನ್ಯೂಸ್
17-08-26 05:38 pm HK News Staffer ದೇಶ - ವಿದೇಶ
ನವದೆಹಲಿ, ಆ.17: ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕರನ್ನು ದಿಮಾಗಿ ನಕ್ಸಲರು ಎಂಬುದಾಗಿ ಕರೆದಿಲ್ಲ. ದೇಶದ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವವರನ್ನು ಮಾತ್ರ ಆ ರೀತಿ ಹೇಳಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ.
ಪ್ರಧಾನಿ ಮಾತಿನ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಸೇರಿದಂತೆ ವಿಪಕ್ಷ ನಾಯಕರು ವಾಗ್ದಾಳಿ ನಡೆಸುತ್ತಿರುವ ಬೆನ್ನಲ್ಲೇ ರಿಜಿಜು ಸ್ಪಷ್ಟನೆ ನೀಡಿದ್ದಾರೆ. ಕಿರಣ್ ರಿಜಿಜು ಅವರು ಎಕ್ಸ್ ಖಾತೆಯಲ್ಲಿ ‘ದಿಮಾಗಿ ನಕ್ಸಲ್’ ಪದದ ಹೊಸ ವ್ಯಾಖ್ಯಾನವನ್ನು ಹಂಚಿಕೊಂಡಿದ್ದಾರೆ.
ಮಾವೋವಾದಿಗಳನ್ನು ಬೆಂಬಲಿಸುವವವರು, ಭಾರತದ ಸಂವಿಧಾನವನ್ನು ತಿರಸ್ಕರಿಸುವವರು, ಪ್ರತ್ಯೇಕತಾವಾದಿ ಸಂಘಟನೆಗಳೊಂದಿಗೆ ನಿಲ್ಲುವವವರು ಹಾಗೂ ಸಂವಿಧಾನದ 370ನೇ ವಿಧಿಯನ್ನು ಬೆಂಬಲಿಸುವವರನ್ನು ದಿಮಾಗಿ ನಕ್ಸಲರು ಎಂದಿದ್ದಾರೆ. ಅಲ್ಲದೆ, ಈಶಾನ್ಯ ಭಾರತವನ್ನು ದೇಶದ ಉಳಿದ ಭಾಗದಿಂದ ಪ್ರತ್ಯೇಕಿಸಲು ಚಿಕನ್ ನೆಕ್ (ಸಿಲಿಗುರಿ ಕಾರಿಡಾರ್) ಕತ್ತರಿಸಲು ಕರೆ ನೀಡುವವರು ದಿಮಾಗಿ ನಕ್ಸಲರು ಎಂದು ರಿಜಿಜು ವ್ಯಾಖ್ಯಾನಿಸಿದ್ದಾರೆ.
ರಿಜಿಜು ಅವರು 2020 ರ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಶಾರ್ಜಿಲ್ ಇಮಾಮ್ ಅಸ್ಸಾಂ ಮತ್ತು ಈಶಾನ್ಯ ಭಾರತವನ್ನು ದೇಶದ ಉಳಿದ ಭಾಗಗಳಿಂದ ಪ್ರತ್ಯೇಕಿಸಲು ಸಿಲಿಗುರಿ ಕಾರಿಡಾರ್ ಜಾಗವನ್ನು ದಿಗ್ಬಂಧನ ಮಾಡಬೇಕು ಎಂದು ಕರೆ ನೀಡಿದ್ದ ವಿವಾದಾತ್ಮಕ ಭಾಷಣದ ವಿಡಿಯೋವನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಈ ರೀತಿಯ ಜನರನ್ನು ಬೆಂಬಲಿಸುವವರನ್ನು ಮಾತ್ರ ದಿಮಾಗಿ ನಕ್ಸಲರು ಎಂದು ಕರೆಯಲಾಗುತ್ತದೆ ಎಂದು ಬರೆದಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಭಾಷಣ ಸಂದರ್ಭದಲ್ಲಿ ಪ್ರಧಾನಿ ಮೋದಿ, ಮಾವೋವಾದವನ್ನು ಯಶಸ್ವಿಯಾಗಿ ಬುಡಸಮೇತ ಕಿತ್ತೊಗೆದಿದ್ದಕ್ಕಾಗಿ ದೇಶದ ಜನತೆಯನ್ನು ಅಭಿನಂದಿಸಿದ್ದರು. ಇದೇ ವೇಳೆ ಅವರು ಸಾವಿರಾರು ಭದ್ರತಾ ಸಿಬ್ಬಂದಿಯ ತ್ಯಾಗವನ್ನೂ ಸ್ಮರಿಸಿದ್ದರು. "ಕಾಡಿನಲ್ಲಿ ಶಸ್ತ್ರಾಸ್ತ್ರ ಹಿಡಿದಿದ್ದ ಮಾವೋವಾದಿಗಳನ್ನು ಮಟ್ಟಹಾಕಿದ್ದರೂ, ದೇಶದಲ್ಲಿರುವ ಬೌದ್ಧಿಕ ನಕ್ಸಲರನ್ನು ಗುರುತಿಸಿ ಪ್ರತ್ಯೇಕಿಸುವ ಕಾರ್ಯ ಆಗಬೇಕಿದೆ" ಎಂದು ಪ್ರಧಾನಿ ಮೋದಿ ಹೇಳಿದ್ದರು. ಈ ವಿಚಾರ ಕಾಂಗ್ರೆಸ್ ನಾಯಕರ ಟೀಕೆಗೆ ಗುರಿಯಾಗಿದ್ದು ವಿವಾದಕ್ಕೆ ಕಾರಣವಾಗಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm