ಬ್ರೇಕಿಂಗ್ ನ್ಯೂಸ್
17-08-26 09:45 pm HK News Staffer ದೇಶ - ವಿದೇಶ
ನವದೆಹಲಿ, ಆಗಸ್ಟ್ 17: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ವಹಿಸಿಕೊಂಡ ಮೂರು ತಿಂಗಳ ಬಳಿಕ ಪಕ್ಷದ ಕೇಂದ್ರ ಸಂಘಟನೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಕೆಲವೇ ತಿಂಗಳು ಬಾಕಿ ಇರುವ ಸಂದರ್ಭದಲ್ಲಿ ಪ್ರಮುಖ ಮುಖಂಡರಿಗೆ ಪಕ್ಷದಲ್ಲಿ ಹೊಸ ಜವಾಬ್ದಾರಿಗಳನ್ನು ವಹಿಸುವ ಮೂಲಕ ಬಿಜೆಪಿಯ ಹೊಸ ಕೇಂದ್ರ ತಂಡವನ್ನು ಘೋಷಿಸಲಾಗಿದೆ.
ಹೊಸ ತಂಡದಲ್ಲಿ 13 ರಾಷ್ಟ್ರೀಯ ಉಪಾಧ್ಯಕ್ಷರು, 8 ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ 16 ಮೋರ್ಚಾ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಿಸಲಾಗಿದೆ. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸಿಂಧಿಯಾ ಹಾಗೂ ಹಿರಿಯ ನಾಯಕ ರಾಮ್ ಮಾಧವ್ ಅವರಿಗೆ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿರುವುದು ಹೊಸ ತಂಡದ ಪ್ರಮುಖ ಬದಲಾವಣೆಗಳಲ್ಲಿ ಒಂದಾಗಿದೆ.
ಕರ್ನಾಟಕದಿಂದ ಪ್ರೊ. ಎಂ. ನಾಗರಾಜ್ ಅವರಿಗೆ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಸಂಘಟನಾ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸಿರುವ ಬಿ.ಎಲ್. ಸಂತೋಷ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಹುದ್ದೆಯಲ್ಲಿ ಮುಂದುವರಿಸಲಾಗಿದೆ.
ಹೊಸ ತಂಡದ ಸಾಮಾಜಿಕ ಮತ್ತು ಲಿಂಗ ಸಮತೋಲನದ ದೃಷ್ಟಿಯಿಂದಲೂ ಕೆಲವು ಗಮನಾರ್ಹ ಅಂಶಗಳಿವೆ. 13 ರಾಷ್ಟ್ರೀಯ ಉಪಾಧ್ಯಕ್ಷರಲ್ಲಿ ಐವರು ಮಹಿಳೆಯರು ಇದ್ದರೆ, 8 ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಲ್ಲಿ ಸ್ಮೃತಿ ಇರಾನಿ ಮಾತ್ರ ಏಕೈಕ ಮಹಿಳೆಯಾಗಿದ್ದಾರೆ. ಇದರೊಂದಿಗೆ ವಿವಿಧ ರಾಜ್ಯಗಳು ಹಾಗೂ ಸಾಮಾಜಿಕ ಹಿನ್ನೆಲೆಯ ನಾಯಕರಿಗೆ ಕೇಂದ್ರ ಸಂಘಟನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಅಮಿತ್ ಮಾಳವೀಯಗೆ ಸ್ಥಾನವಿಲ್ಲ
ಬಿಜೆಪಿಯ ಸಾಮಾಜಿಕ ಜಾಲತಾಣ ಮತ್ತು ಐಟಿ ಸೆಲ್ ಪ್ರಮುಖ ಜವಾಬ್ದಾರಿ ನಿರ್ವಹಿಸುತ್ತಿದ್ದ ಅಮಿತ್ ಮಾಳವೀಯ ಅವರ ಹೆಸರು ಹೊಸ ರಾಷ್ಟ್ರೀಯ ತಂಡದ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಇದೇ ವೇಳೆ ದೀಪಕ್ ಮಹಾಸ್ಕರೆ ಅವರನ್ನು ಬಿಜೆಪಿಯ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ನೇಮಕ ಮಾಡಲಾಗಿದೆ.
ಯುವ ಮೋರ್ಚಾಕ್ಕೂ ಹೊಸ ಸಾರಥಿ
ಬಿಜೆಪಿ ಯುವ ಮೋರ್ಚಾದಲ್ಲೂ ಪ್ರಮುಖ ಬದಲಾವಣೆ ಮಾಡಲಾಗಿದೆ. ಈ ಹಿಂದೆ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಸ್ಥಾನ ಮುಂದುವರಿಸದೆ, ಗುಜರಾತ್ ಮೂಲದ ಡಾ. ಹೇಮಾಂಗ್ ಜೋಶಿ ಅವರನ್ನು ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಯುವ ಮತದಾರರನ್ನು ಸೆಳೆಯುವುದು ಹಾಗೂ ಮುಂಬರುವ ಚುನಾವಣೆಗಳಲ್ಲಿ ಯುವ ಸಂಘಟನೆಯನ್ನು ಬಲಪಡಿಸುವ ದೃಷ್ಟಿಯಿಂದ ಬದಲಾವಣೆ ಮಹತ್ವ ಪಡೆದಿದೆ.
ರಾಷ್ಟ್ರೀಯ ಉಪಾಧ್ಯಕ್ಷರಾಗಿ ವಸುಂಧರಾ ರಾಜೇ ಸಿಂಧಿಯಾ, ತೀರತ್ ಸಿಂಗ್ ರಾವತ್, ರಾಮ್ ಮಾಧವ್, ವೈಜಯಂತ್ ಜಯ್ ಪಾಂಡಾ, ಡಿ. ಪುರಂದೇಶ್ವರಿ, ರೇಖಾ ವರ್ಮಾ, ವರ್ಷಾಬೆನ್ ನರೇಂದ್ರಭಾಯ್ ದೋಷಿ, ಡಾ. ಭಾರತಿ ಪ್ರವೀಣ್ ಪವಾರ್, ಸರ್ದಾರ್ ಮನ್ಪ್ರೀತ್ ಸಿಂಗ್ ಬಾದಲ್, ಲಾಲ್ ಸಿಂಗ್ ಆರ್ಯ, ಪ್ರೊ. ಎಂ.ನಾಗರಾಜ್, ಪ್ರೊ. ತಾರಿಕ್ ಮನ್ಸೂರ್, ಡಾ. ಮಧು ಚಂದ್ರಕರ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ (ಸಂಘಟನೆ) ಬಿ.ಎಲ್. ಸಂತೋಷ್ ಮುಂದುವರಿಕೆ.
ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿಗಳು - ಶಿವಪ್ರಕಾಶ್, ಸೌದನ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು- ವಿನೋದ್ ತಾವ್ಡೆ, ಸುನಿಲ್ ಬನ್ಸಾಲ್, ಬಿಪ್ಲಬ್ ಕುಮಾರ್ ದೇವ್, ಸ್ಮೃತಿ ಇರಾನಿ, ಸತೀಶ್ ಪೂನಿಯಾ, ಗಜೇಂದ್ರ ಪಟೇಲ್, ಹರೀಶ್ ದ್ವಿವೇದಿ, ಸಂಜಯ್ ಭಾಟಿಯಾ
ರಾಷ್ಟ್ರೀಯ ಕಾರ್ಯದರ್ಶಿಗಳು- ಕವಿತಾ ಪಾಟಿದಾರ್, ಕೆ. ಸುರೇಂದ್ರನ್, ಡಾ. ಭೋಲಾ ಸಿಂಗ್, ಡಾ. ಪ್ರದೀಪ್ ವರ್ಮಾ, ಜಗದೀಶ್ ಈಶ್ವರ್ಭಾಯ್ ಪಟೇಲ್, ಡಾ. ಸಂದೀಪ್ ಪಾಠಕ್, ಫಾಂಗ್ನಾನ್ ಕೊನ್ಯಾಕ್, ಸಂಗೀತಾ ಯಾದವ್, ಅನಿಲ್ ಆಂಟನಿ, ಎಂ. ವೆಂಕಟೇಶನ್, ಮನೋಜ್ ಟಿಗ್ಗಾ, ಸಿದ್ಧಾರ್ಥ ಶಂಭು, ಡಾ. ಸ್ವದೇಶ್ ಸಿಂಗ್, ಮೃಗಾಂಕ ದೇವ್ ಬರ್ಮನ್, ರೋಹನ್ ಗುಪ್ತಾ, ಜೈ ಪ್ರಕಾಶ್
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm