ಬ್ರೇಕಿಂಗ್ ನ್ಯೂಸ್
29-08-26 03:36 pm HK News Staffer ದೇಶ - ವಿದೇಶ
ಬೆಂಗಳೂರು, ಆ.29: ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯಸ್ಥ ಲ್ಯಾಕ್ಸ್ ಗೋಪಿಸೆಟ್ಟಿ ಅವರು ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದ ಬಳಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ವೈಯಕ್ತಿಕ ಪ್ರವಾಸದ ನೆಲೆಯಲ್ಲಿ ಅವರು ನೇಪಾಳಕ್ಕೆ ತೆರಳಿದ್ದರು. ಪ್ರವಾಹದ ಬಳಿಕ ಅವರು ಎಲ್ಲಿದ್ದಾರೆಂದು ತಿಳಿದುಬಂದಿಲ್ಲ ಎಂದು ಇನ್ಫೋಸಿಸ್ ಹೇಳಿಕೆಯಲ್ಲಿ ತಿಳಿಸಿದೆ.
ಇನ್ಫೋಸಿಸ್ ಅಂಗಸಂಸ್ಥೆಯಾಗಿರುವ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯವಾಗಿ ಅಮೆರಿಕ ಮತ್ತು ಕೆನಡಾದ ಸಾರ್ವಜನಿಕ ವಲಯಕ್ಕೆ ಐಟಿ ಸೇವೆಗಳನ್ನು ಒದಗಿಸುತ್ತದೆ. ಗೋಪಿಸೆಟ್ಟಿ ಅವರು ವೈಯಕ್ತಿಕ ಪ್ರವಾಸದ ಹಿನ್ನೆಲೆಯಲ್ಲಿ ಈ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅವರ ಸುರಕ್ಷತೆ ಮತ್ತು ಕ್ಷೇಮವನ್ನು ಖಚಿತಪಡಿಸಿಕೊಳ್ಳುವುದು ಸದ್ಯ ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಇನ್ಫೋಸಿಸ್ ಹೇಳಿಕೆಯಲ್ಲಿ ತಿಳಿಸಿದೆ.
ಗೋಪಿಸೆಟ್ಟಿ ಅವರೊಂದಿಗೆ ಸಂಪರ್ಕ ಸಾಧಿಸಲು ಹಾಗೂ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಸಂಬಂಧಿತ ಸಂಸ್ಥೆಗಳೊಂದಿಗೆ ಕಂಪನಿ ಪ್ರಯತ್ನಿಸಿದೆ. ಗೋಪಿಸೆಟ್ಟಿ ಅವರ ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲ ನೆರವನ್ನು ಒದಗಿಸುತ್ತಿದೆ ಎಂದು ತಿಳಿಸಿದೆ.
ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಇದರಿಂದ ಉಂಟಾದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿರುವುದಾಗಿ ಇನ್ಫೋಸಿಸ್ ಹೇಳಿಕೆಯಲ್ಲಿ ತಿಳಿಸಿದೆ. ನೇಪಾಳ- ಟಿಬೆಟ್ ಗಡಿಯುದ್ದಕ್ಕೂ ಸಂಭವಿಸಿದ ಭೀಕರ ಹಠಾತ್ ಪ್ರವಾಹದ ಬಳಿಕ ಕನಿಷ್ಠ 320 ಭಾರತೀಯರು ನಾಪತ್ತೆಯಾಗಿದ್ದು, ಮತ್ತೂ 400 ಮಂದಿ ಚೀನಾದ ಭಾಗದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಪರಿಸ್ಥಿತಿ ನಿಭಾಯಿಸಲು ಕಠ್ಮಂಡುವಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಿದೆ ಎಂದು ಸಚಿವಾಲಯ ಹೇಳಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm