ಬ್ರೇಕಿಂಗ್ ನ್ಯೂಸ್
02-09-26 07:16 pm HK News Staffer ದೇಶ - ವಿದೇಶ
ನವದೆಹಲಿ , ಸೆ. 2: ಅಪ್ರಾಪ್ತ ಬಾಲಕಿ ಮೇಲೆ ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣದ ಬೆನ್ನಲ್ಲೇ ದೆಹಲಿ ಸರ್ಕಾರ ಬಸ್‌ಗಳ ಸುರಕ್ಷತಾ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ.
ದೆಹಲಿ ಸಾರಿಗೆ ಇಲಾಖೆ ಹೊರಡಿಸಿರುವ ಹೊಸ ನಿರ್ದೇಶನದಂತೆ, ದೆಹಲಿಯಲ್ಲಿ ಸಂಚರಿಸುವ ಎಲ್ಲಾ ಬಸ್‌ಗಳಲ್ಲಿ ಪ್ಯಾನಿಕ್ ಬಟನ್ ಹಾಗೂ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್‌ಗಳು ಸದಾ ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿರಬೇಕು. ಪ್ರಯಾಣಿಕರಿಗೆ ಸುಲಭವಾಗಿ ತಲುಪುವ ರೀತಿಯಲ್ಲಿ ಪ್ಯಾನಿಕ್ ಬಟನ್ ಅಳವಡಿಸಬೇಕು ಎಂದು ಸೂಚಿಸಲಾಗಿದೆ.
ಬಸ್‌ಗಳ ಕಿಟಕಿಗಳಿಗೆ ಪರದೆ ಸಂಪೂರ್ಣ ನಿಷೇಧ
ಬಸ್‌ಗಳ ಕಿಟಕಿಗಳಿಗೆ ಪರದೆ ಅಳವಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಬಸ್‌ನ ಒಳಭಾಗ ಹಾಗೂ ಹೊರಭಾಗ ಸ್ಪಷ್ಟವಾಗಿ ಕಾಣುವಂತೆ ಮುಂಭಾಗ, ಹಿಂಭಾಗ ಮತ್ತು ಬದಿಯ ಕಿಟಕಿಗಳ ಗಾಜಿನ ಪಾರದರ್ಶಕತೆಯನ್ನು ನಿಗದಿತ ನಿಯಮಗಳಂತೆ ಕಾಪಾಡಬೇಕು ಎಂದು ಇಲಾಖೆ ಸೂಚಿಸಿದೆ.
ಇತ್ತೀಚೆಗೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದ ಸ್ಲೀಪರ್ ಬಸ್‌ನ ಕಿಟಕಿಗಳಿಗೆ ಪರದೆ ಹಾಕಲಾಗಿತ್ತು. ಇದರಿಂದ ಬಸ್‌ನೊಳಗಿನ ಚಟುವಟಿಕೆಗಳು ಹೊರಗಿನಿಂದ ಕಾಣದಂತಾಗಿದ್ದವು. ಅಲ್ಲದೆ, ಕಾನೂನಿನ ಪ್ರಕಾರ ಇರಬೇಕಾದ ಸಿಸಿಟಿವಿ ವ್ಯವಸ್ಥೆಯೂ ಕಾರ್ಯನಿರ್ವಹಿಸುತ್ತಿರಲಿಲ್ಲ ಎಂದು ವರದಿಯಾಗಿತ್ತು.
ಆಗಸ್ಟ್ 4ರ ರಾತ್ರಿ ಘಟನೆ ನಡೆದಿದ್ದು, ಕೃತ್ಯದ ಬಳಿಕ ಚಾಲಕ ಮತ್ತು ಕಂಡಕ್ಟರ್ ಬಾಲಕಿಯನ್ನು ಕಾಶ್ಮೀರಿ ಗೇಟ್ ಬಳಿ ಬಿಟ್ಟು ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಗ್ರೇಟರ್ ನೋಯ್ಡಾದಿಂದ ಬಸ್ ಹತ್ತಿದ್ದರು ಎನ್ನಲಾಗಿದೆ. ಪ್ರಕರಣದಲ್ಲಿ ಚಾಲಕ ಮತ್ತು ಕಂಡಕ್ಟರ್‌ರನ್ನು ಬಂಧಿಸಲಾಗಿದೆ.
ಅಗ್ನಿಶಾಮಕ ಸಾಧನ, ಪ್ರಥಮ ಚಿಕಿತ್ಸಾ ಕಿಟ್ ಕಡ್ಡಾಯ
ಪ್ರತಿ ಬಸ್‌ನಲ್ಲಿ ಕಾರ್ಯನಿರ್ವಹಿಸುವ ಅಗ್ನಿಶಾಮಕ ಸಾಧನ ಹಾಗೂ ಪ್ರಥಮ ಚಿಕಿತ್ಸಾ ಕಿಟ್ ಕಡ್ಡಾಯವಾಗಿ ಇರಬೇಕು. ರಾತ್ರಿ ವೇಳೆ ಅಥವಾ ಬಸ್ ಸಂಚಾರದಲ್ಲಿಲ್ಲದ ಸಂದರ್ಭದಲ್ಲಿ ವಾಹನಗಳನ್ನು ಸುರಕ್ಷಿತ, ಅಧಿಕೃತ ಹಾಗೂ ಸೂಕ್ತ ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲೇ ನಿಲ್ಲಿಸಬೇಕು ಎಂದು ಸೂಚಿಸಲಾಗಿದೆ.
ದೆಹಲಿ ಸಾರಿಗೆ ಸಚಿವ ಡಾ. ಪಂಕಜ್ ಕುಮಾರ್ ಸಿಂಗ್, ಪ್ರಯಾಣಿಕರ ಸುರಕ್ಷತೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಸಂಚರಿಸುವ ಪ್ರತಿಯೊಂದು ಬಸ್ ನಿಗದಿತ ಸುರಕ್ಷತಾ ಹಾಗೂ ಕಾರ್ಯಾಚರಣಾ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಕುಡಿದು ವಾಹನ ಚಲಾಯಿಸಿದರೆ ಕಠಿಣ ಕ್ರಮ
ಚಾಲಕರು ಮತ್ತು ಬಸ್ ಸಿಬ್ಬಂದಿ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಮದ್ಯ ಅಥವಾ ಯಾವುದೇ ಮಾದಕ ವಸ್ತುವಿನ ಪ್ರಭಾವದಲ್ಲಿರುವಾಗ ವಾಹನ ಚಲಾಯಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಚಾಲಕರು ಮಾನ್ಯ ಚಾಲನಾ ಪರವಾನಗಿ, ಸಮವಸ್ತ್ರ ಹಾಗೂ ಅನ್ವಯವಾಗುವಲ್ಲಿ ಪಿಎಸ್‌ವಿ ಬ್ಯಾಡ್ಜ್ ಹೊಂದಿರಬೇಕು. ಕಂಡಕ್ಟರ್‌ಗಳು ಕೂಡ ಮಾನ್ಯ ಪರವಾನಗಿ, ಸಮವಸ್ತ್ರ ಹಾಗೂ ಪಿಎಸ್‌ವಿ ಬ್ಯಾಡ್ಜ್ ಹೊಂದಿರಬೇಕು.
ಚಾಲಕರು, ಕಂಡಕ್ಟರ್‌ಗಳು, ಅಟೆಂಡರ್‌ಗಳು ಸೇರಿದಂತೆ ಬಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸುವ ಮೊದಲು ಅವರ ಹಿನ್ನೆಲೆ ಮತ್ತು ದಾಖಲೆಗಳನ್ನು ಪರಿಶೀಲಿಸಬೇಕು ಎಂದು ಬಸ್ ನಿರ್ವಾಹಕರಿಗೆ ಸೂಚಿಸಲಾಗಿದೆ.
ಮಹಿಳೆಯರ ಸುರಕ್ಷತೆಗೆ ವಿಶೇಷ ಸೂಚನೆ
ಬಸ್‌ನಲ್ಲಿ ಮಹಿಳಾ ಪ್ರಯಾಣಿಕರಿಗೆ ಕಿರುಕುಳ, ಲೈಂಗಿಕ ದೌರ್ಜನ್ಯ ಅಥವಾ ಯಾವುದೇ ಅಪರಾಧ ನಡೆಯುತ್ತಿರುವುದು ಕಂಡುಬಂದರೆ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು.
ಅಗತ್ಯವಿದ್ದಲ್ಲಿ ಬಸ್ ಅನ್ನು ಸಮೀಪದ ಪೊಲೀಸ್ ಠಾಣೆ, ಪೊಲೀಸ್ ಪೋಸ್ಟ್ ಅಥವಾ ಪಿಸಿಆರ್ ವಾಹನದ ಬಳಿ ಕರೆದೊಯ್ಯಬೇಕು. ಮಹಿಳೆಯರ ಮೇಲಿನ ಕಿರುಕುಳ ಮತ್ತು ಅಸಭ್ಯ ವರ್ತನೆ ತಡೆಯುವ ಕುರಿತು ಚಾಲಕರು, ಕಂಡಕ್ಟರ್‌ಗಳು ಹಾಗೂ ಇತರ ಸಿಬ್ಬಂದಿಗೆ ತರಬೇತಿ ಮತ್ತು ಜಾಗೃತಿ ಮೂಡಿಸಬೇಕು ಎಂದು ಇಲಾಖೆ ನಿರ್ದೇಶಿಸಿದೆ.
ಬಸ್ ಸಂಚರಿಸುತ್ತಿರುವಾಗ ಎಲ್ಲಾ ಬಾಗಿಲುಗಳು ಸುರಕ್ಷಿತವಾಗಿ ಮುಚ್ಚಿರಬೇಕು. ವಿಕಲಚೇತನ ಪ್ರಯಾಣಿಕರು ಬಸ್ ಹತ್ತುವಾಗ ಅಥವಾ ಇಳಿಯುವಾಗ ಅಗತ್ಯ ನೆರವು ನೀಡಬೇಕು ಎಂದು ಸೂಚಿಸಲಾಗಿದೆ.
ಅನಧಿಕೃತ ಸ್ಥಳಗಳಲ್ಲಿ ಬಸ್ ನಿಲ್ಲಿಸುವಂತಿಲ್ಲ
ಪ್ರತಿ ಬಸ್ ಮಾನ್ಯ ಫಿಟ್ನೆಸ್ ಸರ್ಟಿಫಿಕೇಟ್ ಹೊಂದಿರಬೇಕು ಮತ್ತು ಯಾಂತ್ರಿಕವಾಗಿ ಉತ್ತಮ ಸ್ಥಿತಿಯಲ್ಲಿರಬೇಕು. ನಿಗದಿತ ಮಾಲಿನ್ಯ ನಿಯಮಗಳನ್ನು ಪಾಲಿಸುವುದರ ಜೊತೆಗೆ ಮಾನ್ಯ ಪಿಯುಸಿ ಪ್ರಮಾಣಪತ್ರವನ್ನೂ ಹೊಂದಿರಬೇಕು. ಪ್ರಯಾಣಿಕರು ಬಸ್ ಹತ್ತುವುದು ಮತ್ತು ಇಳಿಯುವುದು ನಿಗದಿತ ಬಸ್ ನಿಲ್ದಾಣ ಅಥವಾ ಅಧಿಕೃತ ಸ್ಥಳಗಳಲ್ಲೇ ನಡೆಯಬೇಕು. ರಸ್ತೆ ಮಧ್ಯದಲ್ಲಿ, ಜಂಕ್ಷನ್‌ಗಳಲ್ಲಿ ಹಾಗೂ ಅಪಾಯಕಾರಿ ಅಥವಾ ಅನಧಿಕೃತ ಸ್ಥಳಗಳಲ್ಲಿ ಬಸ್ ನಿಲ್ಲಿಸುವುದನ್ನು ನಿಷೇಧಿಸಲಾಗಿದೆ. ಬಸ್‌ಗಳು ಸಂಚಾರ ನಿಯಮಗಳು ಹಾಗೂ ನಿಗದಿತ ಬಸ್ ಲೇನ್‌ಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಾರಿಗೆ ಇಲಾಖೆ ತಿಳಿಸಿದೆ.
ನಿಯಮ ಉಲ್ಲಂಘಿಸಿದರೆ ಪರವಾನಗಿ ರದ್ದು ಸಾಧ್ಯತೆ
ಹೊಸ ಸುರಕ್ಷತಾ ನಿಯಮಗಳ ಅನುಷ್ಠಾನ ಪರಿಶೀಲಿಸಲು ಸಾರಿಗೆ ಇಲಾಖೆ ತಪಾಸಣೆ ಮತ್ತು ಜಾರಿ ಕ್ರಮಗಳನ್ನು ಕೈಗೊಳ್ಳಲಿದೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವುದು, ವಾಹನ ವಶಕ್ಕೆ ಪಡೆಯುವುದು ಅಥವಾ ಸೀಜ್ ಮಾಡುವುದು ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಬಹುದು.
ಅಗತ್ಯವಿದ್ದಲ್ಲಿ ವಾಹನಗಳ ಪರವಾನಗಿ ಅಥವಾ ಪರ್ಮಿಟ್‌ಗಳನ್ನು ಅಮಾನತುಗೊಳಿಸುವುದು ಅಥವಾ ರದ್ದುಪಡಿಸುವ ಕ್ರಮವನ್ನೂ ಕೈಗೊಳ್ಳಬಹುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಸುರಕ್ಷತಾ ಕ್ರಮಗಳು ಕೇವಲ ಕಾಗದದ ಮೇಲಿರದೆ ವಾಸ್ತವವಾಗಿ ಜಾರಿಯಾಗಬೇಕು. ಬಸ್‌ಗಳಲ್…
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am