ಬ್ರೇಕಿಂಗ್ ನ್ಯೂಸ್
05-09-26 11:55 am HK News Staffer ದೇಶ - ವಿದೇಶ
ಕಾಠ್ಮಂಡು, ಸೆ.ರ 05: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದ ಹತ್ತು ದಿನಗಳ ಬಳಿಕ ಜಲವಿದ್ಯುತ್ ಯೋಜನೆಯ ಸುರಂಗದೊಳಗೆ ಸಿಲುಕಿದ್ದ ಇಬ್ಬರು ಕಾರ್ಮಿಕರನ್ನು ರಕ್ಷಣಾ ತಂಡ ಜೀವಂತವಾಗಿ ಪತ್ತೆ ಮಾಡಿದೆ. ಕತ್ತಲೆ ಕೋಣೆಯಂತಿದ್ದ ಸುರಂಗದಲ್ಲಿ ಆಹಾರ, ನೀರಿಲ್ಲದೆ ಕೇವಲ ಹರಿಕೃಷ್ಣಾ ನಾಮಸ್ಮರಣೆ ಮಾಡುತ್ತ ಅವರು ಬದುಕುಳಿದಿದ್ದಾರೆ.
ನೇಪಾಳದ ರಸುವಾ ಜಿಲ್ಲೆಯಲ್ಲಿರುವ ತ್ರಿಶೂಲಿ 3A ಜಲವಿದ್ಯುತ್ ಯೋಜನೆಯ 4.5 ಕಿಲೋಮೀಟರ್ ಉದ್ದದ ಸುರಂಗದಲ್ಲಿ ಆಗಸ್ಟ್ 26 ರಂದು ಭೀಕರ ಭೂಕುಸಿತ ಹಾಗೂ ಪ್ರವಾಹದ ನೀರು ನುಗ್ಗಿತ್ತು. ಈ ವೇಳೆ ಮೆಕ್ಯಾನಿಕಲ್ ಫೋರ್ಮನ್ ಆಗಿ ಕೆಲಸ ಮಾಡುತ್ತಿದ್ದ 30 ವರ್ಷದ ಸಂಜಯ್ ಸಾಹ್, ನಿಯಂತ್ರಣ ಕೊಠಡಿಯಲ್ಲಿದ್ದರು. ಸುರಂಗದೊಳಗೆ ನೀರು ನುಗ್ಗುತ್ತಿದ್ದಂತೆ ತಕ್ಷಣವೇ ಎಚ್ಚೆತ್ತ ಸಾಹ್, ತಮ್ಮ ಸಹೋದ್ಯೋಗಿಗಳಿಗೆ ತಕ್ಷಣವೇ ಹೊರಗೆ ಓಡಿಹೋಗುವಂತೆ ಕೂಗಿ ಹೇಳಿದರು. ಆದರೆ, ಎಲ್ಲರೂ ಸುರಕ್ಷಿತವಾಗಿ ಹೊರ ಬರುವಷ್ಟರಲ್ಲಿ ಸುರಂಗದ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿಕೊಂಡವು. ಪರಿಣಾಮ ಸಾಹ್ ಹಾಗೂ ಮೆಕ್ಯಾನಿಕಲ್ ಸೂಪರ್ವೈಸರ್ ಕಬೀರ್ ಮಹರ್ಜನ್ (45) ಇಬ್ಬರೂ ಒಳಗೇ ಸಿಲುಕಿದ್ದರು.
ಸುರಂಗದ ಎಡೆಯಲ್ಲಿ ಸಿಲುಕಿದ್ದ ಇವರಿಗೆ ಹೊರಗಿನ ಪ್ರಪಂಚದ ಸಂಪರ್ಕವೇ ಕಡಿತಗೊಂಡಿತ್ತು. ಆದರೆ, ಅಲ್ಲಿ ಮೂಡಿದ್ದ ಸಣ್ಣದೊಂದು ಗಾಳಿಯ ಪಾಕೆಟ್ ಇವರಿಗೆ ಉಸಿರಾಡಲು ನೆರವಾಗಿತ್ತು. ಬದುಕಿನ ಭರವಸೆಯನ್ನೇ ಕಳೆದುಕೊಳ್ಳುವಂತಹ ಸ್ಥಿತಿಯಲ್ಲಿದ್ದಾಗ ಸಂಜಯ್ ಸಾಹ್ ಅವರಿಗೆ ಶ್ರೀಕೃಷ್ಣನ ಮೇಲಿದ್ದ ಅಚಲ ನಂಬಿಕೆಯೇ ಶ್ರೀರಕ್ಷೆಯಾಯಿತು. ರಾತ್ರಿ- ಬೆಳಗು ತಿಳಿಯದಿದ್ದರೂ, ಸದಾ ಹರೇಕೃಷ್ಣಾ ಹರೇರಾಮ ಮಂತ್ರವನ್ನು ಪಠಿಸುತ್ತ ಕಾಲ ಕಳೆದಿದ್ದಾರೆ.

ಸುರಂಗದಿಂದ ರಕ್ಷಿಸಲ್ಪಟ್ಟ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಜಯ್ ಸಾಹ್, "ನಾವು ಆ ಕಗ್ಗತ್ತಲಲ್ಲಿ ಧೈರ್ಯ ಕಳೆದುಕೊಳ್ಳಲಿಲ್ಲ. ನಿರಂತರವಾಗಿ 'ಹರೇ ಕೃಷ್ಣ' ಮಹಾಮಂತ್ರವನ್ನು ಜಪಿಸುತ್ತಾ, ನಮ್ಮನ್ನು ಕಾಪಾಡುವಂತೆ ದೇವರಲ್ಲಿ ಪ್ರಾರ್ಥಿಸುತ್ತಿದ್ದೆವು. ಆಹಾರ ಮತ್ತು ನೀರಿಲ್ಲದೆ ಒಂಬತ್ತು ದಿನ ಕಳೆಯುವುದು ನರಕಸದೃಶವಾಗಿತ್ತು. ಆದರೆ ಕೊನೆಗೂ ಕೃಷ್ಣ ಜನ್ಮಾಷ್ಟಮಿಯ ದಿನವೇ ನಾನು ಹೊರಬಂದಿದ್ದು ನನಗೆ ಮರುಜನ್ಮ ನೀಡಿದಂತಾಗಿದೆ ಎಂದು ಭಾವುಕರಾಗಿ ನುಡಿದಿದ್ದಾರೆ.
ನೇಪಾಳ ಸೇನೆ ಮತ್ತು ಭಾರತ, ಚೀನಾ ಸೇರಿದಂತೆ ಅಂತರಾಷ್ಟ್ರೀಯ ರಕ್ಷಣಾ ತಂಡಗಳು ಅತ್ಯಾಧುನಿಕ ಥರ್ಮಲ್ ಡ್ರೋನ್ಗಳು ಮತ್ತು ಯಂತ್ರಗಳನ್ನು ಬಳಸಿ ಸುರಂಗದ ಅವಶೇಷಗಳನ್ನು ತೆರವುಗೊಳಿಸಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಸುರಂಗದ ಪವರ್ಹೌಸ್ ಬಳಿ ಗೋಡೆ ತಟ್ಟುವ ಸದ್ದು ಕೇಳಿಸುತ್ತಿದ್ದು, ಇನ್ನೂ 3 ರಿಂದ 4 ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ಸಾಹ್ ಮಾಹಿತಿ ನೀಡಿದ್ದಾರೆ. ಸದ್ಯ ಇಡೀ ಸುರಂಗ ಪ್ರದೇಶದಲ್ಲಿ ಭಾರತೀಯ ಮತ್ತು ನೇಪಾಳಿ ರಕ್ಷಣಾ ಪಡೆಗಳು ಜಂಟಿಯಾಗಿ ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ಮುಂದುವರಿಸಿವೆ.
ಭದ್ರತಾ ಅಧಿಕಾರಿಗಳ ಪ್ರಕಾರ, ಸಾಹ್ ಅವರ ಆರೋಗ್ಯ ಸ್ಥಿರವಾಗಿದ್ದು, ತಕ್ಷಣಕ್ಕೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ. ವೈದ್ಯಕೀಯ ತಪಾಸಣೆಗಾಗಿ ಅವರನ್ನು ತ್ರಿಶೂಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ರಕ್ಷಿಸಲ್ಪಟ್ಟ ಮತ್ತೊಬ್ಬ ಕಾರ್ಮಿಕ 45 ವರ್ಷದ ಕಬೀರ್ ಮಹರ್ಜನ್ ಅವರನ್ನು ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಕಠ್ಮಂಡುವಿನ ಛೌನಿ ಪ್ರದೇಶದಲ್ಲಿರುವ ನೇಪಾಳ ಸೇನಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
29-09-26 08:11 pm
HK News Staffer
ಸೌಜನ್ಯಾ ಮರು ತನಿಖೆಯೂ, ತಮಿಳುನಾಡಿನಲ್ಲಿ ಗ್ರಾನೈಟ್...
26-09-26 07:01 pm
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
29-09-26 01:25 pm
HK News Staffer
ಬಿ.ಸಿ.ರೋಡ್ ಸಭೆಯಲ್ಲಿ ಕರಾವಳಿ ಶಾಸಕರು, ಸಂಸದರ ಬಗ್ಗ...
29-09-26 11:41 am
ಕಂಬಳ ಲೋಕದ ದಿಗ್ಗಜ ‘ನಂದಳಿಕೆ ಪಾಂಡು’ ಇನ್ನಿಲ್ಲ: 20...
29-09-26 10:45 am
ದೇಶದಲ್ಲಿ 13 ಕೋಟಿ ಮತ ಡಿಲೀಟ್ ಆಗಿದ್ದು ಹೇಗೆ ? ಆಳು...
28-09-26 11:08 pm
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕರಾವಳಿಗೇನು ಕೊಟ್ಟಿ...
28-09-26 09:33 pm
29-09-26 09:26 pm
HK News Staffer
Mangalore Accident: ನ್ಯಾಯಾಧೀಶರ ಕಾರಿಗೆ ಗೂಡ್ಸ್...
29-09-26 08:14 pm
ಶಿವಂ ಅಸೋಸಿಯೇಟ್ಸ್ ದೋಖಾ ; ವರ್ಷಕ್ಕೆ 36 ಪರ್ಸೆಂಟ್...
29-09-26 03:48 pm
ಕರಂಗಲ್ಪಾಡಿಯಲ್ಲಿ ಅಪಘಾತ ; ನ್ಯಾಯಾಧೀಶರಿದ್ದ ಕಾರಿಗೆ...
29-09-26 01:22 pm
ಪತಿಯನ್ನು ಬಿಟ್ಟು ಪ್ರತ್ಯೇಕ ವಾಸ ; ಮಾಂಸದಂಗಡಿ ಮಾಲೀ...
29-09-26 09:20 am