ಬ್ರೇಕಿಂಗ್ ನ್ಯೂಸ್
14-10-26 10:57 am HK News Staffer ದೇಶ - ವಿದೇಶ
ಕಲೋನ್, ಅಕ್ಟೋಬರ್ 14: ಜರ್ಮನಿಯ ಕಲೋನ್ ನಗರದಲ್ಲಿ 16 ವರ್ಷದ ಬಾಲಕಿಗೆ ರೋಬೋಟ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಅಕ್ಟೋಬರ್ 11ರ ನಸುಕಿನ ವೇಳೆ ಫಾಸ್ಟ್ಫುಡ್ ರೆಸ್ಟೋರೆಂಟ್ವೊಂದರ ಹೊರಗೆ ಈ ಘಟನೆ ನಡೆದಿದ್ದು, ರೋಬೋಟ್ ಯುವತಿಯನ್ನು ಅನುಚಿತವಾಗಿ ಸ್ಪರ್ಶಿಸಿ ಅಸಭ್ಯ ಚಲನೆಗಳನ್ನು ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರೋಬೋಟ್ ಮತ್ತು ಇಬ್ಬರು ಶಂಕಿತರ ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ರಾತ್ರಿ ಸುಮಾರು 11.45ರಿಂದ ಮಧ್ಯರಾತ್ರಿಯ ನಡುವೆ ಕಲೋನ್ ನಗರದ ಹೊಹೆನ್ಜೋಲರ್ನ್ ರಿಂಗ್ ಪ್ರದೇಶದಲ್ಲಿರುವ ಫಾಸ್ಟ್ಫುಡ್ ರೆಸ್ಟೋರೆಂಟ್ ಸಮೀಪ ಯುವತಿ ತನ್ನ ಸ್ನೇಹಿತೆಯರೊಂದಿಗೆ ಇದ್ದಳು. ಈ ವೇಳೆ ಸುಮಾರು 1.2 ಮೀಟರ್ ಎತ್ತರದ ಕೆಂಪು ಮತ್ತು ಚಿನ್ನದ ಬಣ್ಣದ ರೋಬೋಟ್ ಹಿಂದಿನಿಂದ ಬಂದು ಆಕೆಯ ದೇಹದ ಹಿಂಭಾಗವನ್ನು ಸ್ಪರ್ಶಿಸಿ, ಅಸಭ್ಯ ಚಲನೆಗಳನ್ನು ಮಾಡಿದೆ ಎನ್ನಲಾಗಿದೆ.
ರೋಬೋಟ್ನ 16 ವರ್ಷದ ಮಾಲೀಕ ಮತ್ತು ಆತನ 19 ವರ್ಷದ ಸಹಚರ ಘಟನೆಯನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರ ಮಾಡಿದ್ದರು. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಇಬ್ಬರನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಳಿಕ ಪರಿಶೀಲನೆ ನಡೆಸಿದಾಗ, ವೋಕ್ಸ್ವ್ಯಾಗನ್ ಕಾರಿನ ಟ್ರಂಕ್ನಲ್ಲಿ ರೋಬೋಟ್ ಪತ್ತೆಯಾಗಿದೆ. ಪೊಲೀಸರು ರೋಬೋಟ್ ಹಾಗೂ ಇಬ್ಬರು ಶಂಕಿತರ ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.,
ರೋಬೋಟ್ ಸ್ವಯಂಚಾಲಿತವಾಗಿ ಕಾರ್ಯ ನಿರ್ವಹಿಸುತ್ತಿತ್ತೇ ಅಥವಾ ಅದರ ಚಲನವಲನಗಳನ್ನು ಯಾರಾದರೂ ರಿಮೋಟ್ ಮೂಲಕ ನಿಯಂತ್ರಿಸಿದ್ದರೇ ಎಂಬುದನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಯುವತಿಯೊಂದಿಗೆ ಅನುಚಿತವಾಗಿ ವರ್ತಿಸುವಂತೆ ರೋಬೋಟ್ನ್ನು ಉದ್ದೇಶಪೂರ್ವಕವಾಗಿ ಬಳಸಲಾಗಿದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm