ಬ್ರೇಕಿಂಗ್ ನ್ಯೂಸ್
20-10-26 12:41 pm HK News Staffer ದೇಶ - ವಿದೇಶ
ನವದೆಹಲಿ, ಅ.20: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರು ತೀವ್ರ ಮೆದುಳಿನ ರಕ್ತಸ್ರಾವದಿಂದಾಗಿ ಕೋಮಾಗೆ ಜಾರಿದ್ದಾರೆ ಎಂಬ ಸುದ್ದಿಗಳು ಜಾಗತಿಕ ಮಟ್ಟದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಆದರೆ ಉತ್ತರ ಕೊರಿಯಾ ಮಾಧ್ಯಮಗಳು ಈ ವರದಿಯನ್ನು ತಳ್ಳಿಹಾಕಿವೆ.
ಕಿಮ್ ಜಾಂಗ್ ಉನ್ ಗಂಭೀರ ಸೆರೆಬ್ರಲ್ ಹೆಮರೇಜ್‌ಗೆ ಒಳಗಾಗಿ ಕೋಮಾಗೆ ಜಾರಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದೂ ಕೆಲವು ಮಾಧ್ಯಮಗಳು ಹೇಳಿಕೊಂಡಿವೆ. ಸುಧಾರಿತ ವೈದ್ಯಕೀಯ ಸೌಲಭ್ಯಗಳ ಕೊರತೆಯಿದೆ ಎಂಬ ಕಾರಣಕ್ಕೆ ಅವರನ್ನು ಚೀನಾದ ಬೀಜಿಂಗ್‌ಗೆ ಏರ್‌ಲಿಫ್ಟ್ ಮಾಡಲಾಗಿದೆ ಎಂದೂ ಪ್ರಚಾರ ಮಾಡಲಾಗುತ್ತಿದೆ.
ಮೊದಲಿಗೆ, ಚೀನಾ ಡೆಮಾಕ್ರಸಿ ಪಾರ್ಟಿಯ ಅಧ್ಯಕ್ಷ ವಾಂಜುನ್ ಕ್ಸಿ ಕಿಮ್ ಜಾಂಗ್ ಉನ್ ಅವರಿಗೆ ತೀವ್ರ ಮೆದುಳಿನ ರಕ್ತಸ್ರಾವವಾಗಿ ಕೋಮಾಕ್ಕೆ ಜಾರಿದ್ದಾರೆ ಮತ್ತು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದರ ಬೆನ್ನಲ್ಲೇ ಸುದ್ದಿ ಕಾಳ್ಗಿಚ್ಚಿನಂತೆ ಹರಿದಾಡಿತ್ತು. ಆದರೆ ಈ ವರದಿಗಳನ್ನು ಉತ್ತರ ಕೊರಿಯಾದ ಅಧಿಕೃತ ಮಾಧ್ಯಮಗಳು ತಳ್ಳಿಹಾಕಿದ್ದು ಅಕ್ಟೋಬರ್ 20ರಂದು ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರು ಪುತ್ರಿಯೊಂದಿಗೆ ಪ್ಯೊಂಗ್ಯಾಂಗ್‌ನಲ್ಲಿ ಬಟ್ಟೆ ಮತ್ತು ಪಾದರಕ್ಷೆಗಳ ಪ್ರದರ್ಶನ ಕೇಂದ್ರಕ್ಕೆ ಭೇಟಿ ನೀಡಿರುವ ಹೊಸ ಫೋಟೋಗಳನ್ನು ಬಿಡುಗಡೆ ಮಾಡಲಾಗಿದೆ.


ಕಿಮ್ ಅವರ ಆರೋಗ್ಯ ಗಂಭೀರವಾಗಿದೆ ಎಂಬ ವದಂತಿಯ ಬೆನ್ನಲ್ಲೇ, ಅವರ ಪುತ್ರಿ ಕಿಮ್ ಜು-ಏ ಅಥವಾ ಸೋದರಿ ಕಿಮ್ ಯೋ ಜಾಂಗ್ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. 2020 ರಲ್ಲೂ ಇದೇ ರೀತಿಯ ಸುಳ್ಳು ಸುದ್ದಿಗಳು ಹಬ್ಬಿದ್ದವು, ನಂತರ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಮೂಲಕ ಈ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದರು. ಅಂತಾರಾಷ್ಟ್ರೀಯ ಗುಪ್ತಚರ ಸಂಸ್ಥೆಗಳು ಮತ್ತು ತಜ್ಞರ ಪ್ರಕಾರ, ಪ್ರಸ್ತುತ ಹರಿದಾಡುತ್ತಿರುವ ಸುದ್ದಿಗಳಿಗೆ ಯಾವುದೇ ದೃಢವಾದ ಆಧಾರಗಳಿಲ್ಲ. ಇದು ಕೇವಲ ಸಾಮಾಜಿಕ ಮಾಧ್ಯಮಗಳ ಊಹಾಪೋಹ ಎಂದು ಹೇಳಲಾಗಿದೆ.
20-10-26 11:04 am
HK News Staffer
ಸಂಪುಟದಲ್ಲಿ ಮಹಿಳೆಗೆ ಸಿಗದ ಸ್ಥಾನ ; ಮಹಿಳಾ ಕಾಂಗ್ರ...
17-10-26 07:30 pm
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
20-10-26 01:18 pm
HK News Staffer
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
19-10-26 08:41 pm
HK News Staffer
ಸಹಕಾರಿ ಬ್ಯಾಂಕ್ ನಿರ್ದೇಶಕ ಸ್ಥಾನ 10 ವರ್ಷಕ್ಕೆ ಮಿತ...
19-10-26 07:10 pm
G I Bakery Raid, Mangalore: ಅವಧಿ ಮುಗಿದ ತಿಂಡಿಗ...
17-10-26 11:04 pm
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
20-10-26 10:56 am
HK News Staffer
ಉಪ್ಪಿನಂಗಡಿಯಲ್ಲಿ ತಲವಾರು ಝಳಪಿಸಿದ ಗ್ಯಾಂಗ್ ; ಕುಡಿ...
19-10-26 04:20 pm
Actor Tiger Shroff Shot: ಬಾಲಿವುಡ್ ನಟ ಟೈಗರ್ ಶ್...
19-10-26 12:40 am
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm