ಬ್ರೇಕಿಂಗ್ ನ್ಯೂಸ್
28-11-26 04:08 pm HK News Staffer ದೇಶ - ವಿದೇಶ
ನವದೆಹಲಿ, ನ.28: ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಕ್ಷೇತ್ರಗಳ ಪುನರ್ವಿಂಗಡಣೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸಂಪುಟವು ಹೊಸ ಮಸೂದೆಗಳಿಗೆ ಅನುಮೋದನೆ ನೀಡಿದ್ದು, ನ.30ರಿಂದ ನಡೆಯುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲು ಸಿದ್ಧತೆ ನಡೆಸಿದೆ.
ಸಂವಿಧಾನದ 132ನೇ ತಿದ್ದುಪಡಿ ಮಸೂದೆ, 2026 ಪ್ರಕಾರ ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಲೋಕಸಭಾ ಹಾಗೂ ವಿಧಾನಸಭಾ ಸೀಟುಗಳನ್ನು ಹಾಲಿ ಸಂಖ್ಯೆಗಿಂತ ಶೇ. 50ರಷ್ಟು ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. ಇದರಿಂದ ಲೋಕಸಭೆಯ ಗರಿಷ್ಠ ಸಾಮರ್ಥ್ಯ 850ಕ್ಕೆ ಮತ್ತು ವಿಧಾನಸಭೆಗಳ ಸಾಮರ್ಥ್ಯ 650ಕ್ಕೆ ಏರಲಿದೆ ಎಂಬ ಅಂದಾಜಿದೆ. ಇದೇ ವೇಳೆ, ಮಹಿಳಾ ಮೀಸಲಾತಿಯನ್ನೂ ಜಾರಿಗೆ ತರಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.
ನವೆಂಬರ್ 30ರಿಂದ ಆರಂಭವಾಗುವ ನಾಲ್ಕು ದಿನಗಳ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಮತ್ತು ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆಯಾಗಲಿವೆ. ಈ ಹಿಂದೆ ಏಪ್ರಿಲ್ 17, 2026ರಂದು ಮಂಡಿಸಲಾಗಿದ್ದ ಸಂವಿಧಾನ (131ನೇ ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಹಿನ್ನಡೆ ಕಂಡಿತ್ತು.
ಕ್ಷೇತ್ರ ಮರುವಿಂಗಡಣೆ ಜಾರಿಯಾದರೆ ಕರ್ನಾಟಕದಲ್ಲಿ ವಿಧಾನಸಭೆಯ 224 ಸದಸ್ಯ ಬಲ 336ಕ್ಕೆ ಹೆಚ್ಚಳವಾಗಲಿದ್ದು, ಮಹಿಳೆಯರಿಗೆ 110 ಸ್ಥಾನಗಳು ನಿಗದಿಯಾಗಲಿವೆ. ಇದೇ ರೀತಿ ಎಲ್ಲ ರಾಜ್ಯಗಳಲ್ಲೂ ಶೇ.50 ರಷ್ಟು ವಿಧಾನಸಭೆ ಕ್ಷೇತ್ರಗಳು ಏರಿಕೆ ಆಗಲಿವೆ. ಇದಲ್ಲದೆ, ಮಸೂದೆಗೆ ಅಂಕಿತ ಸಿಕ್ಕಿದರೆ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆ ಮತ್ತು ಗಡಿ ನಿರ್ಣಯಕ್ಕೆ ಆಯೋಗ ರಚನೆಯಾಗಲಿದ್ದು ಇದರಲ್ಲಿ ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿ, ಮುಖ್ಯ ಚುನಾವಣಾ ಆಯುಕ್ತರು ಹಾಗೂ ರಾಜ್ಯ ಚುನಾವಣಾ ಆಯುಕ್ತರು ಪ್ರಮುಖ ಸದಸ್ಯರಾಗಿರಲಿದ್ದಾರೆ.
ಡಿಲಿಮಿಟೇಷನ್ ಆಯೋಗ ಎಷ್ಟು ಕಾಲ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಕೇಂದ್ರ ಸರ್ಕಾರ ಅಧಿಸೂಚನೆಯ ಮೂಲಕ ನಿರ್ಧರಿಸಲಿದೆ. ನಿಗದಿತ ಅವಧಿಯಲ್ಲಿ ಕಾರ್ಯ ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಆಯೋಗದ ಮನವಿಯ ಮೇರೆಗೆ ಕೇಂದ್ರ ಸರ್ಕಾರ ಅವಧಿಯನ್ನು ವಿಸ್ತರಿಸಬಹುದು. 2029ರ ಲೋಕಸಭೆ ಚುನಾವಣೆ ವೇಳೆಗೆ ಮಹಿಳಾ ಮೀಸಲಾತಿ ಜಾರಿಗೊಳಿಸುವುದು ಕೇಂದ್ರ ಸರ್ಕಾರದ ಪ್ರಮುಖ ಗುರಿಯಾಗಿದೆ. ಕ್ಷೇತ್ರಗಳ ಮರು ವಿಂಗಡಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮಹಿಳಾ ಮೀಸಲಾತಿ ಜಾರಿಯಾಗಲಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
26-11-26 08:34 pm
HK News Staffer
ಆನೆ ಸ್ಥಳಾಂತರಕ್ಕೆ ಚಿಕ್ಕಮಗಳೂರು ಶಾಸಕರ ವಿರೋಧ ; ಯಾ...
25-11-26 07:48 pm
ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ;...
25-11-26 02:11 pm
ಯೋಗಿಶ್ ಗೌಡ ಕೊಲೆ ಪ್ರಕರಣ ; ಕಾಂಗ್ರೆಸ್ ಶಾಸಕ ವಿನಯ...
25-11-26 02:10 pm
ಹಾಸನ ಜಿಲ್ಲಾಧಿಕಾರಿ ಬಗ್ಗೆ ಲಂಚದ ಆರೋಪ ; ಕೇಂದ್ರ ಸಚ...
24-11-26 08:43 pm
28-11-26 04:08 pm
HK News Staffer
ಇಸ್ರೇಲ್ ನಲ್ಲಿ ಮಂಗಳೂರಿನ ಯುವಕ ನಿಗೂಢ ಸಾವು ; ಕೊಲೆ...
25-11-26 11:53 am
Alwyn Joel Noronha, Mangalore: ಉದ್ಯಮಿ ಆಲ್ವಿನ್...
24-11-26 09:44 pm
ಮುಂಬೈ ನೌಕಾನೆಲೆಯಿಂದ ಮಾಹಿತಿ ಸೋರಿಕೆ ; 90 ರಹಸ್ಯ ವ...
24-11-26 08:45 pm
ಮಾಜಿ ಸಿಎಂ ಸ್ಟಾಲಿನ್ ಸೋಲಿಸಿದ್ದ ನಾಯಕನಿಗೆ ಭಾವಪೂರ್...
21-11-26 11:44 am
28-11-26 04:10 pm
HK News Staffer
ಡಿ.25ರಿಂದ ಮಂಗಳೂರಿನಲ್ಲಿ ಮೂರು ದಿನಗಳ ‘ವಿಶ್ವ ಕೌಶಲ...
28-11-26 08:54 am
ಧರ್ಮಸ್ಥಳ ಅಸಹಜ ಸಾವು ಪ್ರಕರಣ ; ಎಸ್ಐಟಿ ವರದಿಯನ್ನು...
27-11-26 06:23 pm
ಬೋಳೂರು - ಬೆಂಗ್ರೆ ಸೇತುವೆ ಕಾಮಗಾರಿ ; ಕ್ರೇನ್ ಸಹಿತ...
27-11-26 12:28 pm
ಮಂಗಳೂರು - ಬೆಂಗಳೂರು ವಾಹನ ಸಂಚಾರಕ್ಕೆ ಮತ್ತೊಂದು ಹೊ...
26-11-26 09:00 pm
28-11-26 02:42 pm
HK News Staffer
ವಿಟ್ಲದಲ್ಲಿ ಪತ್ನಿಯನ್ನು ಹತ್ಯೆಗೈದು ಹೃದಯಾಘಾತದ ಕತೆ...
27-11-26 03:14 pm
ಗೂಗಲ್ನಲ್ಲಿ ಹುಡುಕಾಡಿ ತುಂಗಾ ನದಿಗೆ ಸ್ನಾನಕ್ಕಿಳಿದ...
26-11-26 08:35 pm
ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯ...
26-11-26 07:47 pm
ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ ಬೆ...
26-11-26 02:48 pm