ಬ್ರೇಕಿಂಗ್ ನ್ಯೂಸ್
01-02-21 01:32 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಕೇಂದ್ರ ಸರ್ಕಾರ ಇಂದು ಮಂಡಿಸುತ್ತಿರುವ ಆಯವ್ಯಯದಲ್ಲಿ ಕೃಷಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ದೇಶದ ಕೃಷಿ ಮತ್ತು ರೈತರ ಅಭಿವೃದ್ಧಿಗಾಗಿ ₹75 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿದೆ.
43.36 ಲಕ್ಷ ಫಲಾನುಭವಿಗಳು ಇದರ ಉಪಯೋಗ ಪಡೆದುಕೊಳ್ಳಲಿದ್ದಾರೆ. ಅಲ್ಲದೆ, ಕನಿಷ್ಠ ಬೆಂಬಲ ಬೆಲೆ ನಿಲ್ಲಿಸಿಲ್ಲ, ಖರೀದಿ ಪ್ರಕ್ರಿಯೆ ಮುಂದುವರಿದಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.
ಪ್ರಮುಖ ಅಂಶಗಳು
ಕನಿಷ್ಠ ಬೆಂಬಲ ಬೆಲೆ ನೀತಿಯಲ್ಲಿ ಈ ಬಾರಿ ಗಮನಾರ್ಹ ಬದಲಾವಣೆಯಾಗಿದ್ದು, ಬೆಳೆ ಉತ್ಪಾದನಾ ವೆಚ್ಚದ ಶೇ.150ರಷ್ಟಕ್ಕೆ ಹೆಚ್ಚಿಸಲಾಗಿದೆ.ಕೃಷಿಗೆ 2013ರ ಸಾಲಿನ ಬಜೆಟ್ನಲ್ಲಿ ₹33,874 ಕೋಟಿ ಅನುದಾನ, 2019-20ರಲ್ಲಿ 62,802 ಕೋಟಿ ಅನುದಾನ ನೀಡಲಾಗಿತ್ತು. ಈ ಬಾರಿ ಕೃಷಿಯ ಸಮಗ್ರ ಬದಲಾವಣೆಗೆ ಹೆಚ್ಚು ಒತ್ತು ಕೊಟ್ಟಿರುವ ಕೇಂದ್ರ, ಈ ಹಿಂದಿಗಿಂತಲೂ ಹೆಚ್ಚು (75,060 ಕೋಟಿ) ಅನುದಾನ ಘೋಷಿಸುವ ಮೂಲಕ ಸಂಕಷ್ಟದಲ್ಲಿದ್ದ ರೈತರ ನೆರವಿಗೆ ಮುಂದಾಗಿದೆ.2019-20ರ ಬಜೆಟ್ನಲ್ಲಿ 35.57 ಲಕ್ಷ ರೈತ ಫಲಾನುಭವಿಗಳು ಪ್ರಯೋಜನ ಪಡೆದುಕೊಂಡಿದ್ದರು. ಈ ಬಾರಿ ಫಲಾನುಭವಿಗಳ ಸಂಖ್ಯೆಯಲ್ಲೂ ಹೆಚ್ಚಾಗಿದ್ದು, 43.36 ರೈತರು ಈ ಅನುದಾನದ ಸದುಪಯೋಗಕ್ಕೆ ಒಳಗಾಗಿದ್ದಾರೆ.
ಕೃಷಿ ಸಾಲ ಗುರಿ ₹16.5 ಲಕ್ಷ ಕೋಟಿಗೆ ಹೆಚ್ಚಳ: ಸಚಿವೆ
ಕೃಷಿ ಸಾಲದ ಗುರಿಯನ್ನು ₹16.5 ಲಕ್ಷ ಕೋಟಿಗೆ ಹೆಚ್ಚಿಸಲು ಬಜೆಟ್ ಮಂಡನೆಯ ಸಂದರ್ಭದಲ್ಲಿ ಹಣಕಾಸು ಸಚಿವೆ ಸೀತಾರಾಮನ್ ಅವರು ಪ್ರಸ್ತಾಪಿಸಿದರು. ಕನಿಷ್ಠ ಬೆಂಬಲ ಬೆಲೆ ನೀತಿಯು ಎಲ್ಲಾ ಸರುಕುಗಳ ಉತ್ಪದನಾ ವೆಚ್ಚಕ್ಕಿಂತ ಕನಿಷ್ಠ ಶೇ.1.5 ಪಟ್ಟು ಬೆಲೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಅಲ್ಲದೆ, ಭತ್ತ ಬೆಳೆಯುವ ರೈತರಿಗೆ 2020-21ರಲ್ಲಿ ₹1.72 ಲಕ್ಷ ಕೋಟಿ ಪಾವತಿಸಲಾಗಿದೆ ಎಂದು ಈ ವೇಳೆ ಹೇಳಿದರು.
Finance Minister Nirmala Sitharaman on Monday announced the much-awaited Union Budget 2021 amid the COVID-19 pandemic and announced a slew of measure to revive the sagging economy which registered a record decline last year.
03-09-25 01:36 pm
HK News Desk
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm