ಬ್ರೇಕಿಂಗ್ ನ್ಯೂಸ್
15-02-21 02:09 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಫೆ.15 : ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ತಂತ್ರಗಾರಿಕೆ ಜೋರಾಗಿ ಸಾಗುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡಿರುವ ಮಮತಾ ಬ್ಯಾನರ್ಜಿ ಸರ್ಕಾರ ಇಂದಿನಿಂದಲೇ ರಾಜ್ಯದ ಜನತೆಗೆ ಐದು ರೂಪಾಯಿಗೆ ಊಟ ನೀಡಲು ಸಿದ್ಧವಾಗಿದೆ. ಈ ಯೋಜನೆಗೆ ‘ಮಾ’ ಎಂದು ಹೆಸರಿಡಲಾಗಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದ (TMC) ‘‘ಮಾ, ಮಾಟಿ, ಮನುಷ್’’ (ತಾಯಿ, ಭೂಮಿ, ಮನುಷ್ಯ) ಎಂಬ ಘೋಷವಾಕ್ಯದಿಂದಲೇ ಯೋಜನೆಯ ಹೆಸರನ್ನು ಆರಿಸಿಕೊಳ್ಳಲಾಗಿದೆ.
ಆರಂಭಿಕ ಹಂತದಲ್ಲಿ ಕೋಲ್ಕತ್ತಾ ನಗರದ 16 ಕಡೆ ‘ಮಾ’ ಯೋಜನೆ ಜಾರಿಯಾಗಲಿದ್ದು, ನಂತರದ ದಿನಗಳಲ್ಲಿ ರಾಜ್ಯದೆಲ್ಲೆಡೆ ವಿಸ್ತರಿಸಲು ನಿರ್ಧರಿಸಲಾಗಿದೆ.
ಮಾ ಯೋಜನೆಯಡಿಯಲ್ಲಿ ಸಿಗುವ ಊಟಕ್ಕೆ ಅನ್ನ, ದಾಲ್, ತರಕಾರಿ ಪದಾರ್ಥ ಮತ್ತು ಮೊಟ್ಟೆಯನ್ನು ನೀಡಲಾಗುವುದು. ಒಂದು ತಟ್ಟೆ ಊಟಕ್ಕೆ ₹5 ಇರಲಿದ್ದು, ನಿಗದಿತ ಸಮಯದಲ್ಲಿ ಊಟ ದೊರೆಯಲಿದೆ ಎಂದು ಯೋಜನೆಯ ಕುರಿತಾಗಿ ಕೋಲ್ಕತ್ತಾ ಮಹಾನಗರ ಪಾಲಿಕೆ ಹಿರಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. ಈ ಯೋಜನೆಗಾಗಿಯೇ ಬಜೆಟ್ನಲ್ಲಿ ಮೊತ್ತವನ್ನು ತೆಗೆದಿರಿಸಲಾಗಿದ್ದು ಕ್ರಮೇಣ ನಗರ, ಸಣ್ಣ ಪಟ್ಟಣ ಹಾಗೂ ಗ್ರಾಮಾಂತರ ಭಾಗಗಳ ಜನರನ್ನೂ ‘ಮಾ’ ತಲುಪಲಿದೆ ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ, ಕೊವಿಡ್ 19 ಸಾಂಕ್ರಾಮಿಕದಿಂದ ಕೆಲಸ ಕಳೆದುಕೊಂಡ ವಲಸೆ ಕಾರ್ಮಿಕರಿಗೆಂದೇ ಟಿಎಂಸಿ ಪಕ್ಷವು ದೀದಿರ್ ರಾನಾಘರ್ (ದೀದಿಯ ಅಡುಗೆಕೋಣೆ) ಎಂಬ ಯೋಜನೆ ಜಾರಿಗೆ ತಂದಿತ್ತು. ಇನ್ನೊಂದೆಡೆ ಇದಕ್ಕೆ ಪ್ರತಿಯಾಗಿ ಸಿಪಿಐ(ಎಂ) ಪಕ್ಷವೂ ‘ಶ್ರಮಜೀವಿ ಕ್ಯಾಂಟಿನ್’ ಆರಂಭಿಸಿತ್ತು. ಜೊತೆಗೆ, ಸುಮಾರು 50 ಆರೋಗ್ಯ ಕೇಂದ್ರ ಆರಂಭಿಸಿ, ಸಂಕಷ್ಟದಲ್ಲಿರುವವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿ ಗಮನ ಸೆಳೆದಿತ್ತು.
ಈ ಬಾರಿಯ ವಿಧಾನಸಭೆ ಚುನಾವಣೆ ಹಿಂದೆಂದಿಗಿಂತಲೂ ಹೆಚ್ಚು ಗಮನ ಸೆಳೆಯುತ್ತಿದ್ದು, 2019ರ ಲೋಕಸಭೆ ಚುನಾವಣೆ ಮೂಲಕ ಪಶ್ಚಿಮ ಬಂಗಾಳದಲ್ಲಿ ಕೊಂಚ ಬಲಪಡೆದಿರುವ ಬಿಜೆಪಿ ಪ್ರಸ್ತುತ ಆಡಳಿತರೂಢ ಟಿಎಂಸಿಗೆ ಅತಿದೊಡ್ಡ ಸವಾಲಾಗಿ ಪರಿಣಮಿಸಿದೆ. 294 ಸ್ಥಾನಗಳಲ್ಲಿ ಕನಿಷ್ಟ 200 ಸ್ಥಾನಗಳನ್ನಾದರೂ ಬಾಚಿಕೊಳ್ಳುವ ಉಮೇದಿಯಲ್ಲಿರುವ ಬಿಜೆಪಿಯನ್ನು ಕಟ್ಟಿಹಾಕಲು ಟಿಎಂಸಿ ಪ್ರಯತ್ನಿಸುತ್ತಲೇ ಇದೆ. ಸದ್ಯ ಈ ಪ್ರಯತ್ನದ ಒಂದು ಭಾಗವೆಂಬಂತೆ ₹5ಕ್ಕೆ ಊಟ ನೀಡುವ ಯೋಜನೆ ಶುರುವಾಗಿದ್ದು, ಬಿಜೆಪಿ ಇದಕ್ಕೆ ಯಾವ ರೀತಿಯಲ್ಲಿ ತಿರುಗೇಟು ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
03-09-25 01:36 pm
HK News Desk
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm