ಬ್ರೇಕಿಂಗ್ ನ್ಯೂಸ್
24-02-21 01:10 pm Headline Karnataka News Network ದೇಶ - ವಿದೇಶ
ದೆಹಲಿ, ಫೆ.24 : ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯದೇ ಹೋದರೆ ರೈತ ಹೋರಾಟಗಾರರು ಪಾರ್ಲಿಮೆಂಟ್ಗೆ ಘೇರಾವ್ ಹಾಕುವುದಾಗಿ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.
‘ದೆಹಲಿ ಮಾರ್ಚ್ಗೆ’ ಯಾವಾಗಲಾದರೂ ಕರೆ ನೀಡಬಹುದು. ರೈತರು ತಯಾರಾಗಿರಬೇಕು ಎಂದು ಟಿಕಾಯತ್ ಹೇಳಿದ್ದಾರೆ. ರಾಜಸ್ಥಾನದ ಸಿಕರ್ ಎಂಬಲ್ಲಿ ಕಿಸಾನ್ ಮಹಾಪಂಚಾಯತ್ ಉದ್ದೇಶಿಸಿ ಮಂಗಳವಾರ ರಾಕೇಶ್ ಟಿಕಾಯತ್ ಮಾತನಾಡಿದ್ದಾರೆ.
ಈ ಬಾರಿ ಪಾರ್ಲಿಮೆಂಟ್ ಘೇರಾವ್ಗೆ ಕರೆ ನೀಡಲಾಗುವುದು. ದೆಹಲಿ ಪಾದಯಾತ್ರೆ ಮಾಡಲಾಗುವುದು. ನಾಲ್ಕು ಲಕ್ಷ ಟ್ರ್ಯಾಕ್ಟರ್ಗಳ ಬದಲಾಗಿ 40 ಲಕ್ಷ ಟ್ರ್ಯಾಕ್ಟರ್ ಚಳುವಳಿ ನಡೆಸಲಾಗುತ್ತದೆ ಎಂದು ಕಿಸಾನ್ ಮಹಾಪಂಚಾಯತ್ನಲ್ಲಿ ಟಿಕಾಯತ್ ವಾಗ್ದಾಳಿ ನಡೆಸಿದ್ದಾರೆ.
ಇಂಡಿಯಾ ಗೇಟ್ ಬಳಿಯ ಪಾರ್ಕ್ನಲ್ಲಿ ನೇಗಿಲು ಹಿಡಿದು ನೆಲ ಉತ್ತು, ಬೆಳೆ ಬೆಳೆಯುತ್ತೇವೆ. ಯುನೈಟೆಡ್ ಫ್ರಂಟ್ನ ರೈತ ಚಳುವಳಿಗಾರರು ಪಾರ್ಲಿಮೆಂಟ್ ಘೆರಾವ್ಗೆ ದಿನಾಂಕ ನಿಗದಿ ಮಾಡುತ್ತಾರೆ ಎಂದು ಟಿಕಾಯತ್ ತಿಳಿಸಿದ್ದಾರೆ.
ಭಾರತದ ತ್ರಿವರ್ಣ ಧ್ವಜವನ್ನು ರೈತರು ಬಹಳ ಪ್ರೀತಿಸುತ್ತಾರೆ. ಜನವರಿ 26ರಂದು ನಡೆದ ಟ್ರ್ಯಾಕ್ಟರ್ ಚಳುವಳಿಗೆ ಕೆಟ್ಟ ಹೆಸರು ತರುವಂತೆ ಷಡ್ಯಂತ್ರ ಹೂಡಲಾಗಿದೆ. ಜನವರಿ 26ರ ಹಿಂಸಾಚಾರವನ್ನು ರೈತರ ಮೇಲೆ ಹೊರಿಸಲಾಗುತ್ತಿದೆ. ಭಾರತದ ತ್ರಿವರ್ಣ ಧ್ವಜವನ್ನು ರೈತರು ಬಹಳ ಪ್ರೀತಿಸುತ್ತಾರೆ. ರೈತರು ರಾಜಕೀಯ ನಾಯಕರಂತಲ್ಲ ಎಂದು ಟಿಕಾಯತ್ ಗುಡುಗಿದ್ದಾರೆ.
ಕೇಂದ್ರ ಸರ್ಕಾರ ನೂತನ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಲೇಬೇಕು. ಕನಿಷ್ಠ ಬೆಂಬಲ ಬೆಲೆಯನ್ನು ನೀಡಲೇಬೇಕು. ನೂತನ ಕಾಯ್ದೆಗಳನ್ನು ಹಿಂಪಡೆಯದೇ ಹೋದರೆ, ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಭರವಸೆ ನೀಡದೇ ಹೋದರೆ, ದೊಡ್ಡ ದೊಡ್ಡ ಕಂಪೆನಿಗಳ ಗೋದಾಮುಗಳನ್ನು ನಾಶಪಡಿಸುವುದಾಗಿ ಟಿಕಾಯತ್ ಎಚ್ಚರಿಸಿದ್ದಾರೆ.
ಕಿಸಾನ್ ಮಹಾಪಂಚಾಯತ್ನಲ್ಲಿ ಸ್ವರಾಜ್ ಪಕ್ಷದ ನಾಯಕ ಯೋಗೇಂದ್ರ ಯಾದವ್, ಆಲ್ ಇಂಡಿಯಾ ಕಿಸಾನ್ ಸಭಾ ಉಪಾಧ್ಯಕ್ಷ ಆಮ್ರಾ ರಾಮ್, ಕಿಸಾನ್ ಯೂನಿಯನ್ ಮುಖ್ಯ ಕಾರ್ಯದರ್ಶಿ ಚೌಧರಿ ಯುಧ್ವೀರ್ ಸಿಂಗ್ ಹಾಗೂ ಇತರರು ಭಾಗವಹಿಸಿದ್ದಾರೆ.
ಪಂಜಾಬ್, ಹರ್ಯಾಣ ಹಾಗೂ ಪಶ್ಚಿಮ ಉತ್ತರ ಪ್ರದೇಶ ಭಾಗದ ಸಾವಿರಾರು ರೈತರು ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಸಿಂಘು, ಟಿಕ್ರಿ ಹಾಗೂ ಘಾಜಿಪುರ್ ಭಾಗಗಳಲ್ಲಿ ಕಳೆದ 90 ದಿನಗಳಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸಂಪೂರ್ಣವಾಗಿ ಹಿಂಪಡೆಯಬೇಕು. ಕನಿಷ್ಠ ಬೆಂಬಲ ಬೆಲೆ ನೀಡುವ ಬಗ್ಗೆ ಖಚಿತತೆ ನೀಡಬೇಕು ಎಂಬುದು ರೈತರ ಬೇಡಿಕೆಯಾಗಿದೆ.
Farmer leader Rakesh Tikait said on Tuesday that if the Centre does not repeal the three new agriculture laws, the protesting farmers will gherao Parliament. He appealed to farmers to be ready as the call for 'Delhi march' can be given at any time.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm