ಬ್ರೇಕಿಂಗ್ ನ್ಯೂಸ್
26-02-21 05:54 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.26: ಕೇಂದ್ರ ಚುನಾವಣಾ ಆಯೋಗ ಕೊನೆಗೂ ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕೇರಳ, ತಮಿಳುನಾಡು, ಪುದುಚೇರಿಯಲ್ಲಿ ಎಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27ರಿಂದ ಎಪ್ರಿಲ್ 6ರ ನಡುವೆ ನಡೆಯಲಿದೆ. ಇದೇ ವೇಳೆ, ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದ್ದು, ಮಾರ್ಚ್ 27ರಿಂದ ಎಪ್ರಿಲ್ 29ರ ನಡುವೆ ದಿನಾಂಕಗಳನ್ನು ಪ್ರಕಟಿಸಿದೆ.
ದಕ್ಷಿಣ ಭಾರತದಲ್ಲಿ ಕೇರಳ ಮತ್ತು ತಮಿಳುನಾಡಿನ ಚುನಾವಣೆ ಪ್ರಮುಖವಾಗಿದ್ದು, ಎರಡು ಕಡೆಗಳಲ್ಲೂ ಇನ್ನೂ ಅಸ್ತಿತ್ವ ಸಾಧಿಸದ ಬಿಜೆಪಿ ಈ ಬಾರಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದೆ. ಕೇರಳದಲ್ಲಿ 140 ಸೀಟುಗಳಿಗೆ ಚುನಾವಣೆ ನಡೆಯಲಿದ್ದು, ಕೆಲವು ಕಡೆ ಇದೇ ಮೊದಲ ಬಾರಿಗೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಕಂಡುಬಂದಿದೆ.
ಕಳೆದ ಬಾರಿ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಬಹಳಷ್ಟು ಕಡೆ ತೀವ್ರ ಪೈಪೋಟಿ ನೀಡಿದ್ದ ಬಿಜೆಪಿ ಕೇರಳದ ಇತಿಹಾಸದಲ್ಲಿ ಇದೇ ಮೊದಲಿಗೆ ರಾಜ್ಯದಾದ್ಯಂತ ಬೆಂಬಲ ಗಳಿಸಿಕೊಂಡಿತ್ತು. ಈ ಬಾರಿ ಚುನಾವಣೆಗೂ ಮೊದಲೇ ವಿಜಯ ಯಾತ್ರೆ ಹೆಸರಲ್ಲಿ ಬಿಜೆಪಿ ನಾಯಕರು ರ್ಯಾಲಿ ಹಮ್ಮಿಕೊಂಡಿದ್ದಾರೆ. ಮೆಟ್ರೋ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರನ್ನು ಪಕ್ಷಕ್ಕೆ ಸೆಳೆದುಕೊಂಡಿದ್ದು, ಕ್ರೀಡಾ ತಾರೆ ಪಿ.ಟಿ. ಉಷಾ ಅವರನ್ನೂ ಪಕ್ಷಕ್ಕೆ ಸೇರಿಸಲು ತಯಾರಿ ನಡೆಸಿದ್ದಾರೆ. ಇದೇ ವೇಳೆ, ತಮಿಳುನಾಡಿನಲ್ಲೂ ಬಿಜೆಪಿ ಚುನಾವಣೆಗೆ ಭಾರೀ ತಯಾರಿ ನಡೆಸಿದ್ದು, ಮಾಜಿ ಅಧಿಕಾರಿ ಅಣ್ಣಾಮಲೈ ಮೂಲಕ ಸದ್ದಿಲ್ಲದ ಪ್ರಯತ್ನಗಳನ್ನು ನಡೆಸಿದೆ.
ಎಪ್ರಿಲ್ ನಲ್ಲಿ ಪಂಚ ರಾಜ್ಯ ಚುನಾವಣೆ ; ಕೇರಳ, ತಮಿಳ್ನಾಡಿನಲ್ಲಿ ಒಂದೇ ಹಂತ, ಬಂಗಾಳಕ್ಕೆ ಏಳು ಹಂತ ?
The Election Commission Friday announced the schedule for upcoming Assembly elections in four states and one Union Territory (Puducherry).
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm