ದೇಶದಲ್ಲಿ ಕೊರೋನಾ ಸೋಂಕಿತರ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ.8ಕ್ಕೆ ಇಳಿಕೆ

20-08-20 11:27 am       Headline Karnataka News Network   ದೇಶ - ವಿದೇಶ

ಪರೀಕ್ಷೆಗಳ ಸಂಖ್ಯೆ ಹೆಚ್ಚಾದಂತೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ.8ಕ್ಕೆ ಇಳಿದಿದ್ದು, ಪ್ರತೀನಿತ್ಯ ದೊಡ್ಡ ಮಟ್ಟದಲ್ಲಿಯೇ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದೆ

ನವದೆಹಲಿ, ಆಗಸ್ಟ್ 20: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಪರೀಕ್ಷೆಗಳ ಸಂಖ್ಯೆ ಹೆಚ್ಚಾದಂತೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ.8ಕ್ಕೆ ಇಳಿದಿದ್ದು, ಪ್ರತೀನಿತ್ಯ ದೊಡ್ಡ ಮಟ್ಟದಲ್ಲಿಯೇ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದರಂತೆ ಕಳೆದ 24 ಗಂಟೆಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. 

ಕೊರೋನಾ ಮಟ್ಟಹಾಕಲು "ಟೆಸ್ಟ್, ಟ್ರ್ಯಾಕ್ ಮತ್ತು ಟ್ರೀಟ್" ತಂತ್ರವನ್ನು ಅನುಸರಿಸುತ್ತಿರುವ ಭಾರತದವು, ಇದರ ಅನುಸಾರವಾಗಿ, ದಿನಕ್ಕೆ 10 ಲಕ್ಷ ಪರೀಕ್ಷೆಗಳನ್ನು ನಡೆಸಲು ಪ್ರಯತ್ನಗಳನ್ನು ನಡೆಸುತ್ತಿದೆ. 

ಸೋಂಕಿತರ ಸಂಖ್ಯೆ ಹೆಚ್ಚು ದಾಖಲಾಗುತ್ತಿರುವ ನಡುವಲ್ಲೂ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಕೂಡ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 60,000 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಒಂದೇ ದಿನ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನರು ಗುಮಮುಖರಾಗಿರುವುದು ಇದೇ ಮೊದಲಾಗಿದೆ.