ಬ್ರೇಕಿಂಗ್ ನ್ಯೂಸ್
17-03-21 05:30 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.17: ತಮಿಳುನಾಡಿನಲ್ಲಿ ಚುನಾವಣಾ ಕಣ ರಂಗೇರುತ್ತಿದ್ದು, ನಟ ಕಂ ರಾಜಕಾರಣಿ ಕಮಲ್ ಹಾಸನ್ ಈ ಬಾರಿ ಕಣದಲ್ಲಿರುವ ಅತಿ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.
ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸ್ಥಾಪಕ ಮತ್ತು ಮುಖ್ಯಸ್ಥರಾಗಿರುವ ಕಮಲಹಾಸನ್, ಕೊಯಂಬತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಈಗಾಗ್ಲೇ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ತಮ್ಮ ಆಸ್ತಿ ವಿವರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದು 45 ಕೋಟಿಗೂ ಹೆಚ್ಚು ಚರ ಆಸ್ತಿಯನ್ನು ಹೊಂದಿದ್ದಾಗಿ ತಿಳಿಸಿದ್ದಾರೆ.
ಕಮಲಹಾಸನ್ ಸೇರಿದಂತೆ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ, ಡಿಎಂಕೆ ಅಧ್ಯಕ್ಷ ಸ್ಟಾಲಿನ್, ಡಿಸಿಎಂ ಒ. ಪನ್ನೀರ್ ಸೆಲ್ವಂ ಚುನಾವಣಾ ಕಣದಲ್ಲಿದ್ದು , ಎಪ್ರಿಲ್ 6ರಂದು ಇವರ ಭವಿಷ್ಯವನ್ನು ಜನರು ನಿರ್ಧರಿಸಲಿದ್ದಾರೆ.
ಸಿಎಂ ಪಳನಿಸ್ವಾಮಿ ಎಡಪ್ಪಾಡಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು, ತಮ್ಮ ಚರ ಆಸ್ತಿ 47 ಲಕ್ಷ ಇರುವುದಾಗಿ ಹೇಳಿಕೊಂಡಿದ್ದಾರೆ. ಯಾವುದೇ ಸ್ಥಿರ ಆಸ್ತಿ ಹೊಂದಿಲ್ಲ ಎಂದಿದ್ದಾರೆ. ಇದೇ ವೇಳೆ, ತನ್ನ ಪತ್ನಿ ಹೆಸರಲ್ಲಿ 1.14 ಕೋಟಿ ಚರ ಆಸ್ತಿ ಮತ್ತು ತಮ್ಮ ಹಿಂದು ಅವಿಭಕ್ತ ಕುಟುಂಬದಲ್ಲಿ 50.21 ಲಕ್ಷ ಮೌಲ್ಯದ ಆಸ್ತಿ ಹೊಂದಿದ್ದಾಗಿ ಹೇಳಿಕೊಂಡಿದ್ದಾರೆ. ಅಲ್ಲದೆ, ಪತ್ನಿ ಹೆಸರಲ್ಲಿ 1.78 ಕೋಟಿ ಮೌಲ್ಯದ ಆಸ್ತಿ ಹೊಂದಿರುವ ಬಗ್ಗೆ ತಿಳಿಸಿದ್ದಾರೆ. ಅಲ್ಲದೆ, 15 ಲಕ್ಷ ಕೈಸಾಲ ಹೊಂದಿರುವುದಾಗಿ ಸಿಎಂ ಪಳನಿಸ್ವಾಮಿ ತಿಳಿಸಿದ್ದಾರೆ.
ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ತನ್ನಲ್ಲಿ 4.94 ಕೋಟಿ ರೂ. ಬ್ಯಾಂಕ್ ಖಾತೆಯಲ್ಲಿರುವುದಾಗಿ ಹೇಳಿಕೊಂಡಿದ್ದಾರೆ. ಭೂಮಿ, ಕಟ್ಟಡಗಳು ಸೇರಿದಂತೆ 2.24 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಹೇಳಿದ್ದಾರೆ. ಕೊಲ್ತೂರು ಕ್ಷೇತ್ರದಲ್ಲಿ ಮೂರನೇ ಬಾರಿ ಕಣಕ್ಕಿಳಿದಿರುವ ಸ್ಟಾಲಿನ್, ತನ್ನ ಪತ್ನಿಯಲ್ಲಿ 30.52 ಲಕ್ಷ ರೂ. ಬ್ಯಾಂಕ್ ನಗದು ಹಾಗೂ 24.77 ಲಕ್ಷದ ಚಿನ್ನಾಭರಣ ಇರುವುದಾಗಿ ಹೇಳಿಕೊಂಡಿದ್ದಾರೆ. 50 ಸಾವಿರ ನಗದು ಕೈಯಲ್ಲಿದೆ, ಯಾವುದೇ ಬ್ಯಾಂಕ್ ಸಾಲ ಹೊಂದಿಲ್ಲ. ತನ್ನ ಹೆಸರಲ್ಲಿ ವಾಹನವನ್ನೂ ಹೊಂದಿಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.
Actor-turned-politician and leader of Makkal Needhi Maiam Kamal Haasan is the richest among the candidates who have filed nominations till Monday for the forthcoming assembly polls in Tamil Nadu.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm