ಬ್ರೇಕಿಂಗ್ ನ್ಯೂಸ್
20-08-20 07:09 pm Headline Karnataka News Network ದೇಶ - ವಿದೇಶ
ಚೆನ್ನೈ , ಆಗಸ್ಟ್ 20: ತಂದೆಯ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ ಅಂತ ಎಸ್ಪಿಬಿ ಪುತ್ರ ಚರಣ್ ಆತಂಕ ವ್ಯಕ್ತಪಡಿಸಿದ್ದಾರೆ. ಇಂದು ಮತ್ತೆ ಎಸ್ ಪಿ ಬಿಯವರ ಆರೋಗ್ಯದ ಬಗ್ಗೆ ಪುತ್ರ ಚರಣ್ ಮಾಹಿತಿಯನ್ನ ಕೊಟ್ಟಿದ್ದಾರೆ.
ತಂದೆಯ ಆರೋಗ್ಯದಲ್ಲಿ ಯಾವುದೇ ರೀತಿ ಚೇತರಿಕೆ ಕಾಣ್ತಿಲ್ಲ. ಆದ್ರೂ ನಮಗೆ ನಂಬಿಕೆ ಇದೆ. ದೇವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಅವ್ರು ಚೇತರಿಸಿಕೊಂಡು ದೇವರು, ಅಭಿಮಾನಿಗಳ ಆಶೀರ್ವಾದದಿಂದ ಅನಾರೋಗ್ಯ ಗೆದ್ದು ಬರ್ತಾರೆ. ಎಲ್ಲಾ ಚಿತ್ರರಂಗ, ಸಂಗೀತ ನಿರ್ದೇಶಕರ ತಂಡಕ್ಕೂ ಧನ್ಯವಾದ ಹೇಳಲು ಇಚ್ಚಿಸುತ್ತೇನೆ. ಸಂಜೆ 6 ಗಂಟೆಗೆ ಗಾನ ಸಂಕಲ್ಪದ ಪ್ರಾರ್ಥನೆಗೂ ಧನ್ಯವಾದಗಳು. ನಮ್ಮ ಕುಟುಂಬಸ್ಥರಿಂದ ನಿಮ್ಮೆಲ್ಲರಿಗೂ ಧನ್ಯವಾದ. ನಾವು ಎಲ್ಲರಿಗೂ ಚಿರರುಣಿಯಾಗಿದ್ದೇವೆ. ಇಡೀ ದೇಶವೇ ತುಂಬಾ ಪ್ರೀತಿಯಿಂದ ಪ್ರಾರ್ಥಿಸುತ್ತಿದ್ದೀರಾ ಎಂದು ದುಃಖತಪ್ತರಾಗಿ ಚರಣ್ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಇನ್ನು ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿ ಇಂದು ವಿಶ್ವಾದ್ಯಂತ ಅವರ ಅಭಿಮಾನಿಗಳು ‘ಸಾಮೂಹಿಕ ಪ್ರಾರ್ಥನೆ’ ನಡೆಸಲಿದ್ದಾರೆ.
74 ವರ್ಷ ಪ್ರಾಯದ ಈ ಶ್ರೇಷ್ಠ ಗಾಯಕನ ಆರೋಗ್ಯ ಚೇತರಿಕೆಗಾಗಿ ಈ ಪ್ರಾರ್ಥನೆ ನಡೆಯಲಿದೆ. ನಿರ್ದೇಶಕ ಭರತ್ ರಾಜ್ ಅವರು ಈ ಸಾಮೂಹಿಕ ಪ್ರಾರ್ಥನೆಯ ಕರೆಯನ್ನು ನೀಡಿದ್ದಾರೆ.
ಕೋವಿಡ್ 19 ಪಾಸಿಟಿವ್ ಕಾಣಿಸಿಕೊಂಡಿದ್ದ ಕಾರಣದಿಂದಾಗಿ ಗಾಯಕ ಎಸ್.ಪಿ.ಬಿ ಅವರು ಆಗಸ್ಟ್ 5ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದರು.
‘ಗುರುವಾರ ಸಾಯಂಕಾಲ 6 ಗಂಟೆಗೆ ಸರಿಯಾಗಿ ಭಾರತವೂ ಸೇರಿದಂತೆ ವಿಶ್ವಾದ್ಯಂತ ಇರುವ ಎಸ್.ಪಿ.ಬಿ ಅಭಿಮಾನಿಗಳು ಅವರು ಹಾಡಿರುವ ಹಾಡುಗಳನ್ನು ಹಾಡುವ ಮೂಲಕ ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ನಿರ್ದೇಶಕ ಭರತ್ ರಾಜ್ ತಿಳಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm