ಬ್ರೇಕಿಂಗ್ ನ್ಯೂಸ್
20-03-21 01:51 pm Headline Karnataka News Network ದೇಶ - ವಿದೇಶ
ಚೆನ್ನೈ,ಮಾ 20 : ತಮಿಳುನಾಡಿನ ಅರವಕುರಚಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನಾಮಪತ್ರಕ್ಕೆ ಚುನಾವಣಾ ಆಯೋಗ ತಡೆ ನೀಡಿದೆ. ನಾಮಪತ್ರದಲ್ಲಿ ಅಪರಾಧ ಪ್ರಕರಣಗಳ ಬಗ್ಗೆಉಲ್ಲೇಖಿಸಲ್ಲವೆಂಬ ಕಾರಣಕ್ಕೆ ತಡೆ ನೀಡಲಾಗಿದ್ದು, ಸ್ಪಷ್ಟೀಕರಣ ನೀಡುವಂತೆ ಚುನಾವಣಾ ಆಯೋಗ ಕೇಳಿದೆ.
ಅಣ್ಣಾಮಲೈ ವಿರುದ್ಧ 10ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ ಎಂದು ಸ್ವತಂತ್ರ ಅಭ್ಯರ್ಥಿಗಳು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವುದಾಗಿ ತಿಳಿಸಿ ನಾಮಪತ್ರಕ್ಕೆ ತಡೆ ಹೇರಲಾಗಿದೆ.
ಅರವಕುರಚಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಅಣ್ಣಾಮಲೈ ಅವರನ್ನು ಪ್ರಬಲ ಅಭ್ಯರ್ಥಿಯಾಗಿ ಬಿಂಬಿಸಿರುವ ಬಿಜೆಪಿ ಶತಾಯಗತಾಯ ಗೆಲ್ಲಿಸಬೇಕೆಂದು ಪಣತೊಟ್ಟಿದೆ. ಡಿಎಂಕೆ ಪಕ್ಷದ ಭದ್ರಕೋಟೆಯಿಂದಲೇ ಸ್ಪರ್ಧಿಸುತ್ತಿರುವ ಅಣ್ಣಾಮಲೈ ಮಾರ್ಚ್ 18ರಂದು ಸೈಕಲ್ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ದರು. ನಾನು ಜನಸಾಮಾನ್ಯರ ಪ್ರತಿನಿಧಿ ಎಂದು ಹೇಳಿಕೊಂಡು ಸೈಕಲ್ನಲ್ಲಿ ಬಂದಿದ್ದ ಅಣ್ಣಾಮಲೈಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುನಿರತ್ನ ಸೇರಿದಂತೆ ತಮಿಳುನಾಡಿನ ಬಿಜೆಪಿ ನಾಯಕರು, ಕಾರ್ಯಕರ್ತರು ಬೆಂಬಲ ನೀಡಿದ್ದರು.
ಏಪ್ರಿಲ್ 6ಕ್ಕೆ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಿಂದ ಸ್ಪರ್ಧಿಸಲು ಸರ್ವಸನ್ನದ್ಧರಾಗಿರುವ ಅಣ್ಣಾಮಲೈಗೆ ಇದೀಗ ಮೊದಲ ತಡೆ ಎದುರಾಗಿದೆ.
Election commission brings stay on BJP contestant and former IPS officer K Annamalai whose contesting from Aravakurichi in Tamil Nadu.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm