ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿರ ; ಆಸ್ಪತ್ರೆಯಿಂದ ಹೆಲ್ತ್‌ ಬುಲೆಟಿನ್ ಬಿಡುಗಡೆ

21-08-20 10:53 pm       Headline Karnataka News Network   ದೇಶ - ವಿದೇಶ

ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಪಂಚಭಾಷಾ ಹಿನ್ನೆಲೆ ಗಾಯಕ  ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಸಂಬಂಧಪಟ್ಟ ಆಸ್ಪತ್ರೆ ಇಂದು ಎಸ್‌ಪಿಬಿ ಅವರ ಹೆಲ್ತ್‌ ಬುಲೆಟಿನ್ ಅನ್ನು ಬಿಡುಗಡೆ ಮಾಡಿದೆ.

ಚೆನ್ನೈ ,ಆಗಸ್ಟ್​ 21: ಕೊರೋನಾ ಸೋಂಕಿಗೆ ತುತ್ತಾಗಿ ಕಳೆದ ಎರಡು ವಾರಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಪಂಚಭಾಷಾ ಹಿನ್ನೆಲೆ ಗಾಯಕ  ಎಸ್​.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಸಂಬಂಧಪಟ್ಟ ಆಸ್ಪತ್ರೆ ಇಂದು ಎಸ್‌ಪಿಬಿ ಅವರ ಹೆಲ್ತ್‌ ಬುಲೆಟಿನ್ ಅನ್ನು ಬಿಡುಗಡೆ ಮಾಡಿದೆ.

ಎಸ್‌ಪಿಬಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಎಕ್ಮೋ ಮಷಿನ್​, ವೆಂಟಿಲೇಟರ್​​ನಲ್ಲೇ ಇದ್ದಾರೆ, ಜೊತೆಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ ಎಂದು ಹೆಲ್ತ್​​ ಬುಲೆಟಿನ್‌ನಲ್ಲಿ ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

ಕೊರೋನಾ ವೈರಸ್ ಕಾರಣ ಆಗಸ್ಟ್​ 5 ರಂದು ಎಸ್‌ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ದಿನದಿಂದ ದಿನಕ್ಕೆ ಅವರ ಆರೋಗ್ಯ ಹದೆಗೆಟ್ಟಿದ್ದರಿಂದ ಆಗಸ್ಟ್​ 13 ರ ಬಳಿಕ ಐಸಿಯುನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವೆಂಟಿಲೇಟರ್​ ಅಳವಡಿಸಿ ನುರಿತ ತಜ್ಞರ ತಂಡ ಚಿಕಿತ್ಸೆ ನಡೆಯುತ್ತಿದೆ.