ಬ್ರೇಕಿಂಗ್ ನ್ಯೂಸ್
05-04-21 11:07 am Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 5: ಭಾರತದಲ್ಲಿ ಮತ್ತೆ ದಿನನಿತ್ಯದ ಕೊರೊನಾ ಪ್ರಕರಣಗಳ ಸಂಖ್ಯೆ ಒಂದು ಲಕ್ಷ ದಾಟಿದೆ. ಕಳೆದ 24 ಗಂಟೆಯಲ್ಲಿ 1,03,558 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 478 ಮಂದಿ ಸಾವನ್ನಪ್ಪಿದ್ದಾರೆ.
ಕಳೆದ ವರ್ಷ ಕೊರೊನಾ ಆರ್ಭಟ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾದ ದಿನನಿತ್ಯದ ಕೊರೊನಾ ಪ್ರಕರಣ ಇದಾಗಿದೆ. ಕಳೆದ ಸೆಪ್ಟೆಂಬರ್ 16ರಂದು 97,894 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಆನಂತರ ಅತಿ ಹೆಚ್ಚು ದಾಖಲಾದ ಕೊರೊನಾ ಪ್ರಕರಣ ಭಾನುವಾರದ್ದಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ನಲ್ಲಿ ಈ ಕುರಿತು ಮಾಹಿತಿ ನೀಡಿದೆ. ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,25,89,067ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 7,41,830 ಆಗಿದೆ.

ಕಳೆದ 24 ಗಂಟೆಯಲ್ಲಿ 478 ಮಂದಿ ಸಾವನ್ನಪ್ಪಿದ್ದು, ಇದುವರೆಗೂ ಒಟ್ಟು 1,65,101 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಭಾನುವಾರ 52,847 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 1,16,82,136 ಆಗಿದೆ. ಭಾರತದಲ್ಲಿ ಏಪ್ರಿಲ್ 4ರ ತನಕ 7,91,05,163 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.
ಭಾನುವಾರ ಗುಜರಾತ್ ನಲ್ಲಿ 2875, ರಾಜಸ್ಥಾನದಲ್ಲಿ 1729, ತಮಿಳುನಾಡಿನಲ್ಲಿ 3581 ಹಾಗೂ ಕರ್ನಾಟಕದಲ್ಲಿ 4553 ಮಂದಿಗೆ ಕೊರೊನಾ ಸೋಂಕು ತಗುಲಿತ್ತು.
The coronavirus situation in India remained grim on Sunday as over 1 lakh new infections were recorded, the highest single-day rise since the pandemic began.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm