ಬಿಜೆಪಿ ನಾಯಕ ಅಣ್ಣಾಮಲೈಗೆ ಕೊರೊನಾ ಸೋಂಕು

11-04-21 10:50 am       Headline Karnataka News Network   ದೇಶ - ವಿದೇಶ

ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಸಿಂಗಂ ಅಣ್ಣಾಮಲೈಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರನ್ನು ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಚೆನ್ನೈ, ಎ 11: ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಸಿಂಗಂ ಅಣ್ಣಾಮಲೈಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರನ್ನು ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

 ಈ ಬಗ್ಗೆ ಅಣ್ಣಾಮಲೈ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು. ತನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಟ್ವೀಟ್ ಮೂಲಕ ಅಣ್ಣಾಮಲೈ ಮನವಿ ಮಾಡಿಕೊಂಡಿದ್ದಾರೆ.

ತಮಿಳುನಾಡಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಣ್ಣಾಮಲೈ ಕೆಲ ದಿನಗಳ ಹಿಂದೆ ಅಲ್ಲಿನ ಸ್ಥಳೀಯ ಎಐಎಡಿಎಂಕೆ ನಾಯಕರೊಂದಿಗೆ ತಮ್ಮ ಚುನಾವಣಾ ಕ್ಷೇತ್ರದ ಪ್ರತಿಯೊಂದು ಮನೆಗೂ ಭೇಟಿ ನೀಡಿ ಪ್ರಚಾರ ನಡೆಸಿದ್ದರು. ಹಾಗೂ ಪ್ರತಿದಿನ ಕನಿಷ್ಟ 25-30 ಸಭೆಗಳಲ್ಲಿ ಭಾಗಿಯಾಗುತ್ತಿದ್ದರು. ಸಾವಿರಾರು ಯುವಜನರನ್ನು ಭೇಟಿ ಮಾಡಿದ್ದರು. ಹೀಗಾಗಿ ಸದ್ಯ ಆತಂಕ ಹೆಚ್ಚಾಗಿದೆ. ಅಣ್ಣಾಮಲೈ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅವರು ತಮ್ಮ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

BJP’s Vice President in Tamil Nadu, K Annamalai, has shared on Twitter that he has tested positive for the novel coronavirus.