ದೇಶದಲ್ಲಿ ಒಂದೇ ದಿನ 27 ಲಕ್ಷ ಜನರಿಗೆ ಕೊರೊನಾ ಲಸಿಕೆ !

12-04-21 11:09 am       Headline Karnataka News Network   ದೇಶ - ವಿದೇಶ

ಕೊರೊನಾವೈರಸ್ ಎರಡನೇ ಅಲೆ ನಿಯಂತ್ರಣಕ್ಕೆ ಲಸಿಕೆ ವೇಗ ಹೆಚ್ಚಿಸುವುದೇ ಉತ್ತಮ ಮಾರ್ಗ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ದೇಶದಲ್ಲಿ ಲಸಿಕೆ ಉತ್ಸವದ ಮೊದಲ ದಿನ 27 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. 

ನವದೆಹಲಿ, ಎ.12: ಕೊರೊನಾವೈರಸ್ ಎರಡನೇ ಅಲೆ ನಿಯಂತ್ರಣಕ್ಕೆ ಲಸಿಕೆ ವೇಗ ಹೆಚ್ಚಿಸುವುದೇ ಉತ್ತಮ ಮಾರ್ಗ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ದೇಶದಲ್ಲಿ ಲಸಿಕೆ ಉತ್ಸವದ ಮೊದಲ ದಿನ 27 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. 

ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 86 ದಿನಗಳಲ್ಲಿ 10 ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ. ಭಾನುವಾರ ಒಂದೇ ದಿನ 27,69,888 ಜನರಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 25,47,691 ಫಲಾನುಭವಿಗಳಿಗೆ ಮೊದಲ ಡೋಸ್, 2,22,197 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 10,43,65,035 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಯಾವ ಫಲಾನುಭವಿಗಳಿಗೆ ಎಷ್ಟು ಲಸಿಕೆ ನೀಡಲಾಗಿದೆ ಎಂಬುದರ ಮಾಹಿತಿಗಾಗಿ ಮುಂದೆ ಓದಿ.

ಕಾರ್ಮಿಕರು ಮತ್ತು ಆರೋಗ್ಯ ಸಿಬ್ಬಂದಿಗೆ ಲಸಿಕೆ

ದೇಶದಲ್ಲಿ 90,12,768 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 55,23,718 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 99,94,360 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 47,93,536 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

60 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ

ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 3,19,49,793 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,76,609 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,04,76,731 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 19,37,520 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಎರಡು ಮಾದರಿ ಕೊರೊನಾ ಲಸಿಕೆ ವಿತರಣೆ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ ಜನವರಿ 16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲ ಬಾರಿಗೆ ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದರು.

On the first day of ‘tika Utsav’, more than 27 lakh COVID-19 vaccine doses were administered till Sunday evening, taking the cumulative number of doses given in the country to 10,43,65,035, the Union health ministry said.