ಭಾರತ: 24 ಗಂಟೆಯಲ್ಲಿ 57,468 ಮಂದಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖ

24-08-20 12:27 pm       Headline Karnataka News Network   ದೇಶ - ವಿದೇಶ

ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 57,468 ಮಂದಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದಾರೆ.

ನವದೆಹಲಿ, ಆ. 24: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 57,468 ಮಂದಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದಾರೆ. 61,408 ಜನರಿಗೆ ಸೋಂಕು ತಗುಲಿದ್ದು, 836 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಇದೀಗ 31,06,349ಕ್ಕೆ ತಲುಪಿದೆ. ಈ ಪೈಕಿ 23,38,036 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 57,542 ಮಂದಿ ಅಸುನೀಗಿದ್ದಾರೆ.

ಕರ್ನಾಟಕದಲ್ಲಿ ಭಾನುವಾರ 5,938 ಹೊಸ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 4,996 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರು.