ಕೊರೊನಾ ಹಾಟ್ ಸ್ಪಾಟ್ ಆಗ್ತಿದ್ಯಾ ಕುಂಭಮೇಳ ! 1700 ಜನಕ್ಕೆ ಪಾಸಿಟಿವ್ !

15-04-21 05:16 pm       Headline Karnataka News Network   ದೇಶ - ವಿದೇಶ

ಕುಂಭ ಮೇಳ ಉತ್ಸವದಲ್ಲಿ ಪಾಲ್ಗೊಂಡಿದ್ದ 1,700ಕ್ಕೂ ಅಧಿಕ ಮಂದಿಗೆ ಕೋವಿಡ್‌ ಪಾಸಿಟಿವ್‌ ಬಂದಿದೆ

ಡೆಹ್ರಾಡೂನ್, ಏ.15 : ಕುಂಭ ಮೇಳ ಉತ್ಸವದಲ್ಲಿ ಪಾಲ್ಗೊಂಡಿದ್ದ 1,700ಕ್ಕೂ ಅಧಿಕ ಮಂದಿಗೆ ಕೋವಿಡ್‌ ಪಾಸಿಟಿವ್‌ ಬಂದಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.

ಏಪಿಲ್‌ 10ರಿಂದ 14ರವರೆಗೆ ಒಟ್ಟು 1,701 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೊಸ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಪ್ರಮಾಣದಲ್ಲಿ ಆರ್‌ಟಿ–ಪಿಸಿಆರ್‌ ಪರೀಕ್ಷೆ ನಡೆಸುವಂತೆ ಸರ್ಕಾರ ಈಗಾಗಲೇ ಸೂಚನೆ ನೀಡಿದೆ.

ಕುಂಭ ಮೇಳ ನಡೆದ ಹರಿದ್ವಾರ, ಡೆಹ್ರಾಡೂನ್‌, ರಿಷಿಕೇಶ ವ್ಯಾಪ್ತಿಯಲ್ಲಿ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಉತ್ಸವದಲ್ಲಿ ಪಾಲ್ಗೊಂಡಿದ್ದ ಲಕ್ಷಾಂತರ ಜನರು ಮಾಸ್ಕ್‌ ಧರಿಸದೆ, ಅಂತರವಿಲ್ಲದೆ, ಒಟ್ಟಿಗೆ ನದಿಯಲ್ಲಿ ಸ್ನಾನ ಮಾಡಿರುವುದು ಹಾಗೂ ಸಾಲುಗಟ್ಟಿರುವುದು ಸೋಂಕು ಹೆಚ್ಚಾಗಲು ಕಾರಣ ಎಂದು ಹೇಳಲಾಗಿದೆ.

A total of 1,701 people have tested positive for COVID-19 in the Haridwar Kumbh Mela area from April 10 to 14 confirming fears that one of the world's largest religious gatherings may contribute further to the rapid rise in coronavirus cases.