ಕೊರೊನಾ ಸೋಂಕು ಹೆಚ್ಚಳ ; NEET ಪಿಜಿ ಪರೀಕ್ಷೆ ಮುಂದೂಡಿಕೆ

15-04-21 09:29 pm       Headline Karnataka News Network   ದೇಶ - ವಿದೇಶ

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

ನವದೆಹಲಿ, ಏಪ್ರಿಲ್ 15: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಸಿಬಿಎಸ್‌ಇ 10ನೇ ತರಗತಿ ಹಾಗೂ 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಆದರೆ ನೀಟ್ ಪಿಜಿ ಪರೀಕ್ಷೆಯನ್ನು ಮಾತ್ರ ಯಾಕೆ ಮುಂದೂಡುತ್ತಿಲ್ಲ ಎನ್ನುವ ಪ್ರಶ್ನೆಗಳು ಕೇಳಿಬಂದಿದ್ದವು.

ಇದೀಗ ನೀಟ್ ಪಿಜಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಏಪ್ರಿಲ್ 18 ರಂದು ಪರೀಕ್ಷೆ ನಡೆಯಬೇಕಿತ್ತು. ಕೊರೊನಾ ಪರಿಸ್ಥಿತಿ ನೋಡಿಕೊಂಡು ಮುಂದಿನ ಪರೀಕ್ಷೆ ದಿನಾಂಕವನ್ನು ನಿಗದಿಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

NEET 2020 News: NEET Exam Date On Sept. 13th; Access Correction Window  Facility Today

ಈ ಕುರಿತು ಮಾತನಾಡಿರುವ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಸ್ನಾತಕೋತ್ತರ ನೀಟ್ ಪರೀಕ್ಷೆ ನಡೆಸಲು ಇದು ಸರಿಯಾದ ಸಮಯವೇ ಎಂದು ಪ್ರಶ್ನಿಸಿದ್ದರು. ನೀಟ್ ಪಿಜಿ ಪರೀಕ್ಷೆ ಏಪ್ರಿಲ್ 18 ರಂದು ನಿಗದಿಯಾಗಿದೆ.

ಸ್ಟಾಲಿನ್ ಟ್ವೀಟ್ ಮಾಡಿದ್ದು, ಕೊರೊನಾ ಎರಡನೇ ಅಲೆಯ ಕಾರಣದಿಂದಾಗಿ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಇದೇ ಸಮಯದಲ್ಲಿ ನೀಟ್ ಪಿಜಿ ಪರೀಕ್ಷೆಗಳನ್ನು ನಡೆಸುವುದು ಎಷ್ಟು ಸಮಂಜಸ ಎಂದಿದ್ದರು.

NEET 2020: After JEE Main, National Testing Agency Gears Up For Medical  Entrance Exam

ಹಾಗೆಯೇ ದೇಶಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ಭಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ನೀಟ್-ಪಿಜಿ ವೈದ್ಯಕೀಯ ಪ್ರವೇಶ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿ ವೈದ್ಯರ ಗುಂಪೊಂದು ಸುಪ್ರೀಂಕೋರ್ಟ್‌ಗೆ ಗುರುವಾರ ಅರ್ಜಿ ಸಲ್ಲಿಸಿದೆ.

The NEET-PG medical entrance exams - scheduled for Sunday - have been postponed "in light of the surge in COVID-19 cases", Union Health Minister Dr Harsh Vardhan tweeted Thursday evening.