ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ, 5 ಮಂದಿ ಸಜೀವದಹನ

18-04-21 11:14 am       Headline Karnataka News Network   ದೇಶ - ವಿದೇಶ

ಛತ್ತೀಸ್‌ಗಢದ ರಾಯ್ಪುರ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 5 ಮಂದಿ ಸಜೀವ ದಹನವಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಧಾವಿಸಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

ರಾಯ್ಪುರ್, ಏಪ್ರಿಲ್ 18: ಛತ್ತೀಸ್‌ಗಢದ ರಾಯ್ಪುರ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 5 ಮಂದಿ ಸಜೀವ ದಹನವಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಧಾವಿಸಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ದುರಂತದಲ್ಲಿ ಐದು ಮಂದಿ ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ.

ಆಸ್ಪತ್ರೆಯ ಇತರೆ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತರ್ಕೇಶ್ವರ ಪಟೇಲ್ ತಿಳಿಸಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ, ಆಸ್ಪತ್ರೆ ಸಿಬ್ಬಂದಿಗಳ ಬಳಿ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಬೆಂಕಿಯನ್ನು ಹಿಡಿತಕ್ಕೆ ತರಲು ಸುಮಾರು 25 ಗಂಟೆಗಳ ಕಾಲ ಸತತ ಪ್ರಯತ್ನ ಮಾಡಬೇಕಾಯಿತು. ಆಸ್ಪತ್ರೆಯಲ್ಲಿ 34 ಮಂದಿ ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬುದು ತಿಳಿದುಬಂದಿದೆ. ಮುಖ್ಯಮತ್ರಿ ಭೂಪೇಶ್ ಮೃತರ ಕುಟುಂಬಕ್ಕೆ 4 ಲಕ್ಷರೂ ಪರಿಹಾರ ಘೋಷಿಸಿದ್ದಾರೆ.

At least five Covid patients were killed after a fire broke out in a hospital in Chhattisgarh's capital Raipur on Saturday, the police said.